ಶ್ರವಣಬೆಳಗೊಳದ ಅಭಿವೃದ್ಧಿಗಾಗಿ ಎಚ್‌ಡಿಕೆಗೆ ಮಠದಿಂದ ಮನವಿ

KannadaprabhaNewsNetwork |  
Published : Sep 02, 2026, 02:45 AM IST
1ಎಚ್ಎಸ್ಎನ್9 :  | Kannada Prabha

ಸಾರಾಂಶ

. ಮುಂಬರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರವಣಬೆಳಗೊಳಕ್ಕೆ ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಹಾಸನ, ಮೈಸೂರು, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಂದ ಶ್ರವಣಬೆಳಗೊಳಕ್ಕೆ ವಿಶೇಷ ರೈಲುಗಳ ಸಂಚಾರ ಕಲ್ಪಿಸಬೇಕು. ವಿಶೇಷವಾಗಿ ಶ್ರವಣಬೆಳಗೊಳ ಭಾಗದ ಸಾವಿರಾರು ಜನರು ಮುಂಬೈಯಲ್ಲಿ ವ್ಯಾಪಾರ ವಹಿವಾಟು ಹಾಗೂ ಉದ್ಯೋಗಕ್ಕಾಗಿ ನೆಲೆಸಿರುವುದರಿಂದ ಶಾಸಕರ ಸಿ. ಎನ್. ಬಾಲಕೃಷ್ಣ ಇದನ್ನು ಮನಗಂಡು ವಿಶೇಷ ಮುತುವರ್ಜಿ ವಹಿಸಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಸಾದ್ ಯೋಜನೆಯಡಿ ವಿಶ್ವವಿಖ್ಯಾತ ಶ್ರವಣಬೆಳಗೊಳ ಕ್ಷೇತ್ರಕ್ಕೆ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಲ್ಪಿಸುವಂತೆ ನವದೆಹಲಿಯಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರನ್ನು ಶ್ರವಣಬೆಳಗೊಳ ಜೈನ ಮಠದ ವತಿಯಿಂದ ಮನವಿ ಸಲ್ಲಿಸಲಾಯಿತು.

ಹಿರಿಸಾವೆ, ಶ್ರವಣಬೆಳಗೊಳ ಹಾಗೂ ಚನ್ನರಾಯಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವುದು, ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಸಾದ್ ಯೋಜನೆಯಿಂದ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು, ಶ್ರವಣಬೆಳಗೊಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ರಾಕೃತ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಯಿತು. ಮುಂಬರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರವಣಬೆಳಗೊಳಕ್ಕೆ ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಹಾಸನ, ಮೈಸೂರು, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಂದ ಶ್ರವಣಬೆಳಗೊಳಕ್ಕೆ ವಿಶೇಷ ರೈಲುಗಳ ಸಂಚಾರ ಕಲ್ಪಿಸಬೇಕು. ವಿಶೇಷವಾಗಿ ಶ್ರವಣಬೆಳಗೊಳ ಭಾಗದ ಸಾವಿರಾರು ಜನರು ಮುಂಬೈಯಲ್ಲಿ ವ್ಯಾಪಾರ ವಹಿವಾಟು ಹಾಗೂ ಉದ್ಯೋಗಕ್ಕಾಗಿ ನೆಲೆಸಿರುವುದರಿಂದ ಶಾಸಕರ ಸಿ. ಎನ್. ಬಾಲಕೃಷ್ಣ ಇದನ್ನು ಮನಗಂಡು ವಿಶೇಷ ಮುತುವರ್ಜಿ ವಹಿಸಿ ಮನವಿ ಸಲ್ಲಿಸಿದರು.

ಈ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಎಚ್. ಡಿ. ಕುಮಾರಸ್ವಾಮಿ ಅವರ ಮೂಲಕ ಮನವಿ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಸಿ. ಎನ್. ಬಾಲಕೃಷ್ಣ, ಶ್ರವಣಬೆಳಗೊಳ ಜೈನ ಮಠದ ಪ್ರತಿನಿಧಿ ರಾಜೇಶ್ ಖನ್ನಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಧಾನಸಭಾ ಚುನಾವಣೆ ವೇಳೆಗೆ ರಾಜಕೀಯಕ್ಕೆ ಪ್ರವೇಶ: ಚೇತನ್ ಅಹಿಂಸಾ
ಗಿಡ ನೆಡುವ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತ ಬೇಡ: ಶ್ರೀಶಿವಬಸವ ಸ್ವಾಮೀಜಿ