ವ್ಯಕ್ತಿತ್ವ ವಿಕಸನಕ್ಕೆ ಗಣಿತ- ವಿಜ್ಞಾನ ಶಿಕ್ಷಣ ದಾರಿ ದೀಪ: ವೈ.ಕೆ.ತಿಮ್ಮೇಗೌಡ

KannadaprabhaNewsNetwork |  
Published : Dec 25, 2025, 01:45 AM IST
23ಕೆಎಂಎನ್ ಡಿ23 | Kannada Prabha

ಸಾರಾಂಶ

ಕಲಿಕೆ ಸ್ವಲ್ಪ ಕಷ್ಟವೆನಿಸಿದರು ಏಕಾಗ್ರತೆಯಿಂದ ಮನಸ್ಸನ್ನು ಕೇಂದ್ರೀಕರಿಸಿ ಅಭ್ಯಾಸ ಮಾಡಿದರೆ ಸಾಕು ಗಣಿತ ಹಾಗೂ ವಿಜ್ಞಾನದ ಕಲಿಕೆಯು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮೂಡಲು ಗಣಿತ ಹಾಗೂ ವಿಜ್ಞಾನ ಶಿಕ್ಷಣವು ದಾರಿ.

ಕೆ.ಆರ್.ಪೇಟೆ:

ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಗಣಿತ ಹಾಗೂ ವಿಜ್ಞಾನ ಶಿಕ್ಷಣವು ದಾರಿ ದೀಪವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ಅಭಿಪ್ರಾಯಪಟ್ಟರು.

ತಾಲೂಕಿನ ಮಂದಗೆರೆ ಕ್ಲಸ್ಟರ್ ವ್ಯಾಪ್ತಿಯ ಮೂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗಣಿತ ದಿನ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವವು ಸಮಗ್ರವಾಗಿ ವಿಕಸನವಾಗಲು ಗಣಿತ ಹಾಗೂ ವಿಜ್ಞಾನದ ಶಿಕ್ಷಣದ ಕಲಿಕೆಯು ಇಂದು ಅಗತ್ಯವಾಗಿದೆ ಎಂದರು.

ಆಂಗ್ಲ ಭಾಷೆ ಮತ್ತು ಕಂಪ್ಯೂಟರ್ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಗಣಿತ ಹಾಗೂ ವಿಜ್ಞಾನ ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡರೆ ಮುಂದಿನ ದಿನಗಳಲ್ಲಿ ತಾಂತ್ರಿಕ ಇಲ್ಲವೇ ವೈದ್ಯಕೀಯ ಶಿಕ್ಷಣವನ್ನು ಕಲಿಯಲು ಸಹಕಾರಿಯಾಗಲಿದೆ ಎಂದರು.

ಕಲಿಕೆ ಸ್ವಲ್ಪ ಕಷ್ಟವೆನಿಸಿದರು ಏಕಾಗ್ರತೆಯಿಂದ ಮನಸ್ಸನ್ನು ಕೇಂದ್ರೀಕರಿಸಿ ಅಭ್ಯಾಸ ಮಾಡಿದರೆ ಸಾಕು ಗಣಿತ ಹಾಗೂ ವಿಜ್ಞಾನದ ಕಲಿಕೆಯು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮೂಡಲು ಗಣಿತ ಹಾಗೂ ವಿಜ್ಞಾನ ಶಿಕ್ಷಣವು ದಾರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಗಣಿತ ಹಾಗೂ ವಿಜ್ಞಾನವನ್ನು ಕಲಿಯಲು ತಮ್ಮನ್ನು ಸಮರ್ಪಣೆ ಮಾಡಿಕೊಂಡು ಅಭ್ಯಾಸ ಮಾಡಬೇಕು ಎಂದರು.

ಇದೇ ವೇಳೆ ಶಾಲಾ ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು. ಪ್ರಧಾನ ಮಂತ್ರಿ ಪೋಶಣ್ ಅಭಿಯಾನದ ತಾಲೂಕು ಸಹಾಯಕ ನಿರ್ದೇಶಕ ಯತೀಶ್, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ. ಮಂಜುನಾಥ್, ಆಲೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ನಾಗರತ್ನ, ಮಂದಗೆರೆ ಕ್ಲಸ್ಟರ್ ವ್ಯಾಪ್ತಿಯ ಸಮೂಹ ಸಂಪನ್ಮೂಲ ಅಧಿಕಾರಿ ವೇಣುಗೋಪಾಲ್, ಬಿ.ಆರ್.ಪಿ ಉದೇಶಗೌಡ, ಶಿಕ್ಷಣ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಕೆ. ದೇವರಾಜು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರೇವಣ್ಣ, ಸಂಪನ್ಮೂಲ ವ್ಯಕ್ತಿಗಳಾದ ವೀರಭದ್ರಯ್ಯ, ಮೂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೃಷ್ಣಶೆಟ್ಟಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ