ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಮಾತೃವಂದನಾ ಕಾರ್ಯಕ್ರಮ

KannadaprabhaNewsNetwork |  
Published : Jan 27, 2024, 01:22 AM IST
ಹೆಬ್ರಿ: ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಾತೃವಂದನಾ ಕಾರ್ಯಕ್ರಮ. | Kannada Prabha

ಸಾರಾಂಶ

ಪಿಆರ್‌ಎನ್ ಅಮೃತಭಾರತಿ ವಿದ್ಯಾಲಯ ಮತ್ತು ಅಮೃತ ಭಾರತಿ ವಿದ್ಯಾಕೇಂದ್ರದಲ್ಲಿ ಮಾತೃವಂದನಾ ಕಾರ್ಯಕ್ರಮ ಗುರುವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಹೆಬ್ರಿ

ಇಲ್ಲಿನ ಪಿಆರ್‌ಎನ್ ಅಮೃತಭಾರತಿ ವಿದ್ಯಾಲಯ ಮತ್ತು ಅಮೃತ ಭಾರತಿ ವಿದ್ಯಾಕೇಂದ್ರದಲ್ಲಿ ಮಾತೃವಂದನಾ ಕಾರ್ಯಕ್ರಮ ಗುರುವಾರ ನಡೆಯಿತು.

ಈ ಸಂದರ್ಭ ವಿದ್ವಾನ್ ದಾಮೋದರ ಶರ್ಮ ಮಾತನಾಡಿ, ತಂದೆ, ತಾಯಿ ಋಣ ತೀರಿಸಲಾಗದ್ದು. ವಿದ್ಯಾರ್ಥಿಗಳ ಜೀವನದಲ್ಲಿ ಪೋಷಕರ ಕೊಡುಗೆ ಅನನ್ಯವಾದುದು. ತಪ್ಪುಗಳಾಗದಂತೆ ಎಚ್ಚರಿಕೆಯಿಂದ ಇದ್ದು ಅದನ್ನು ತಿದ್ದಿಕೊಂಡು ವಿದ್ಯಾರ್ಥಿಗಳಾದವರು ಇಡೀ ದೇಶದ ಆಸ್ತಿಯಾಗಬೇಕು ಎಂದರು.ಈ ಸಂದರ್ಭ ಅಮೃತಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ಬಾಲಕೃಷ್ಣ ಮಲ್ಯ, ಯೋಗೀಶ್ ಭಟ್, ಸತೀಶ್ ಪೈ, ಸುಧೀರ್ ನಾಯಕ್, ಶೈಲೇಶ್ ಕಿಣಿ, ರಾಜೇಶ್ ನಾಯಕ್, ವಿಷ್ಣುಮೂರ್ತಿ ನಾಯಕ್ ಹಾಗೂ ಸಂಸ್ಥೆಯ ಮುಖ್ಯಸ್ಥರಾದ ಅಮರೇಶ್ ಹೆಗ್ಡೆ, ಅಪರ್ಣಾ ಆಚಾರ್, ಅರುಣ್ ಕುಮಾರ್, ಅನಿತಾ, ತರಗತಿ ಶಿಕ್ಷಕರಾದ ಮಹೇಶ್ ಹೈಕಾಡಿ, ವೇದವ್ಯಾಸ ತಂತ್ರಿ, ಪ್ರೀತಿ.ಬಿ.ಕೆ., ಮಾಲಾಶ್ರೀ ಹಾಗೂ ಗುರೂಜಿ ಮಾತಾಜಿ, ಪೋಷಕರು ಉಪಸ್ಥಿತರಿದ್ದರು.ಧಾರ್ಮಿಕ ಪ್ರಕ್ರಿಯೆಗಳನ್ನು ಉಪನ್ಯಾಸಕ ವಿದ್ವಾನ್ ಹರಿಶ್ಚಂದ್ರ ನೆರವೇರಿಸಿ, ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ವಂದಿಸಿದರು.ಹೆಬ್ರಿ ಎಸ್‌.ಆರ್‌. ಕಾಲೇಜಿನಲ್ಲಿ ಗಣರಾಜ್ಯೋತ್ಸವ

ಕನ್ನಡಪ್ರಭ ವಾರ್ತೆ ಕಾರ್ಕಳಹೆಬ್ರಿಯ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು. ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ, ಆಡಳಿತಾಧಿಕಾರಿ ಹೆರಾಲ್ಡ್ ಲೂಯಿಸ್, ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಭಗವತಿ, ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ ಆಚಾರ್ಯ, ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಎಸ್.ಆರ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವರ್ಷಾ ನಿರೂಪಿಸಿ, ವಂದಿಸಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ