ಉಡುಪಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರ ದಿವಾಳಿ ಎದ್ದು ಹೋಗಿದೆ. ದಿನಕ್ಕೊಂದು ಸುಳ್ಳು ಹೇಳುತ್ತಿರುವ ಸರ್ಕಾರದ ಮೇಲೆ ಅವರದ್ದೇ ಕಾಂಗ್ರೆಸ್ ಪಕ್ಷದ ಶಾಸಕರಿಗೇ ವಿಶ್ವಾಸ ಹೋಗಿದೆ ಎಂದು ರಾಜ್ಯ ಕಾರ್ಯಕಾರಿಣಿ ಸದಸ್ಯ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು. ಅವರು ಶುಕ್ರವಾರ ಬಿಜೆಪಿ ಜಿಲ್ಲಾ ಕಾರ್ಯಾಲಯದ ಮುಂಭಾಗದಲ್ಲಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಆರೋಪಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಹೆಲಿಕಾಪ್ಟರ್ ಖರ್ಚು ಕೊಡಿ: ಉಡುಪಿ ಜಿಲ್ಲೆಯಲ್ಲಿಯೂ ಶೇ. 50ಕ್ಕಿಂತ ಕಡಿಮೆ ಮಳೆಯಾಗಿ ಬರಗಾಲದ ಸ್ಥಿತಿ ಇದೆ. ಉಪ ಮುಖ್ಯಮಂತ್ರಿಗಳು ಬರಪರಿಹಾರವಾಗಿ 2500 ಕೋಟಿ ರೂ. ಕೊಡುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಬರ ಪರಿಶೀಲನೆಗೆ ಹೆಲಿಕಾಪ್ಟರ್‌ನಲ್ಲಿ ಹೋಗುತ್ತಾರೆ. ಅದಕ್ಕೆ ತಗಲುವ ವೆಚ್ಚವನ್ನೇ ರೈತರಿಗೆ ಕೊಟ್ಟಿದ್ದರೂ ರೈತರಿಗೆ ಉಪಯೋಗವಾಗುತ್ತಿತ್ತು ಎಂದವರು ಲೇವಡಿ ಮಾಡಿದರು.
ಎಸ್‌ಐಆರ್ ಅಭಿಯಾನ ಮಂಗಳೂರು ವಿಭಾಗದ ಸಂಚಾಲಕ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರ 2 ಲಕ್ಷ ಕೋಟಿ ರು. ಕಾಮಗಾರಿಗಳ ಬಿಲ್ ಬಾಕಿ ಇದೆ. ಆದರೂ ಕರಾವಳಿಗೆ 32 ಸಾವಿರ ಕೋಟಿ ರು. ಘೋಷಣೆ ಮಾಡಿದೆ, ಒಂದು ವಾರದ ನಂತರ ಅಷ್ಟೊಂದು ಹಣವಿಲ್ಲ ಎಂದು ಹಣಕಾಸು ಇಲಾಖೆ ಹೇಳಿದೆ, ಸರ್ಕಾರದ ಸುಳ್ಳು ಬಣ್ಣ ಬಯಲಾಗಿದೆ ಎಂದು ತಿಳಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಗಿರೀಶ್ ಎಂ. ಅಂಚನ್, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ವಕ್ತಾರರಾದ ದಿವಾಕರ ಶೆಟ್ಟಿ ಕಲ್ಯಾ, ಮಧುಕರ ಮುದ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶಶಾಂಕ್ ಶಿವತ್ತಾಯ, ಮಂಜುನಾಥ್ ಮಣಿಪಾಲ, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರಾದ ವಿಜಯ ಕೊಡವೂರು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮತ್ತಿತರಿದ್ದರು