-ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮ ಉದ್ಘಾಟಿಸಿದ ನಿವೃತ್ತ ನ್ಯಾಯಮೂರ್ತಿ ಬಿಲ್ಲಪ್ಪ
-----ಕನ್ನಡಪ್ರಭ ವಾರ್ತೆ ಹೊಸದುರ್ಗ: ಮಕ್ಕಳಿಗೆ ಕನ್ನಡ ಭಾಷೆ, ಸಾಹಿತ್ಯದ ಪ್ರಬುದ್ಧತೆ ಬೆಳೆಸಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಬಿಲ್ಲಪ್ಪ ಹೇಳಿದರು. ಅಶೋಕ ರಂಗಮಂದಿರದಲ್ಲಿ ಎಸ್ ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಿಂದ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.
ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಕಲ್ಮಠ್ ಮಾತನಾಡಿ, ಕನ್ನಡಿಗರು ಸ್ವಾಭಿಮಾನಿಗಳು. ಆರ್ಥಿಕತೆಯಲ್ಲಿ 2ನೇ ಸ್ಥಾನದಲ್ಲಿರುವ ರಾಜ್ಯ ಅಭಿವೃದ್ಧಿ ಯತ್ತ ದಾಪುಗಾಲು ಹಾಕುತ್ತಿದೆ. ಎಲ್ಲಾ ರಂಗದಲ್ಲಿ ಅಭಿವೃದ್ಧಿ ಸಾಧಿಸುವ ಚಿಂತನೆ ಮಾಡಬೇಕಿದೆ ಎಂದರು.ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ. ಶಿವಲಿಂಗಪ್ಪ ಮಾತನಾಡಿದರು. ಧರ್ಮದರ್ಶಿ ವಿಜಯಶಿವಲಿಂಗಪ್ಪ ಅವರು ಅತಿಥಿಗಳನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಖಜಾಂಚಿ ಮಲ್ಲಿಕಾರ್ಜುನಪ್ಪ, ಅಕಾಡೆಮಿಕ್ ಡೈರೆಕ್ಟರ್ ಎಂ.ಬಿ.ತಿಪ್ಪೇಸ್ವಾಮಿ, ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪಿ.ಓಂಕಾರಪ್ಪ, ಸಂಸ್ಥೆಯ ನಿರ್ದೇಶಕರು ಹಾಗೂ ಸಿಬ್ಬಂದಿ ಹಾಜರಿದ್ದರು.
ಕನ್ನಡ ಸಂಸ್ಕೃತಿ ಚಿಂತಕ ಹಿರೇಮಗಳೂರು ಕಣ್ಣನ್ ಹಾಗೂ ಬೇಲೂರು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕಿ ನಾಗಶ್ರೀ ತ್ಯಾಗರಾಜು ಅವರ ಹರಟೆ ಮಾತಿನ ಜುಗಲ್ಬಂದಿ ಕಾರ್ಯಕ್ರಮ ನಡೆಸಿಕೊಟ್ಟರು.ಮನುಷ್ಯನ ನೆಮ್ಮದಿ ಜೀವನದ ಹಾದಿ, ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ಕಲೆ, ಇತಿಹಾಸ, ಸಂಸ್ಕೃತಿಗೆ ಸಂಬಂಧಿಸಿದಂತೆ ಮಾತಿನ ಜುಗಲ್ಬಂದಿ ಮೂಲಕ ಹಾಸ್ಯ ಚಟಾಕಿ ಬೀರಿದರು. ವಿದ್ಯಾರ್ಥಿಗಳು ಕನ್ನಡ ಭಾಷೆ, ಸಾಹಿತ್ಯ, ಕಲೆ, ನೆಲ, ಜಲ, ಸಂಸ್ಕೃತಿ, ಇತಿಹಾಸ ಪ್ರತಿಬಿಂಬಿಸುವ ಹಾಡುಗಳಿಗೆ ಅತ್ಯಾ ಕರ್ಷಕವಾಗಿ ನೃತ್ಯ ಅಭಿನಯಿಸಿದರು. ಇತ್ತೀಚಿಗೆ ನಿಧಾನರಾದ ಹಿರಿಯ ಪತ್ರಕರ್ತ ಸಂಜೀವಮೂರ್ತಿಗೆ ನುಡಿನಮನ ಸಲ್ಲಿಸಲಾಯಿತು.
------ಫೋಟೋ: ಅಶೋಕ ರಂಗಮಂದಿರದಲ್ಲಿ ಎಸ್.ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನಿಂದ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮವನ್ನು ನಿವೃತ್ತ ನ್ಯಾಯಮೂರ್ತಿ ಬಿಲ್ಲಪ್ಪ ಉದ್ಘಾಟಿಸಿದರು.
ನ11hsd2: