ಶಿಕ್ಷಣ ಕ್ಷೇತ್ರಕ್ಕೆ ಆಜಾದ್ ಕೊಡುಗೆ ಅನನ್ಯ:

KannadaprabhaNewsNetwork |  
Published : Nov 12, 2026, 02:15 AM IST
ಫೋಟೊ11ಕೆಎಸಟಿ5ಕುಷ್ಟಗಿ ಪಟ್ಟಣದ ಮೌಲಾನಾ ಅಬುಲ್ ಕಲಾಂ ಆಜಾದ್ ವೃತ್ತದಲ್ಲಿ ಆಯೋಜಿಸಿದ್ದ ಅವರ 138ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕಾಡಾ ನಿಗಮದ ಅಧ್ಯಕ್ಷ ಹಸನಸಾಬ್ ದೋಟಿಹಾಳ ಮಾತನಾಡಿದರು. | Kannada Prabha

ಸಾರಾಂಶ

ಕುಷ್ಟಗಿ ಪಟ್ಟಣದ ಮೌಲಾನಾ ಅಬುಲ್ ಕಲಾಂ ಆಜಾದ್ ವೃತ್ತದಲ್ಲಿ ಅವರ 138ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕಾಡಾ ನಿಗಮದ ಅಧ್ಯಕ್ಷ ಹಸನಸಾಬ್ ದೋಟಿಹಾಳ ಉದ್ಘಾಟಿಸಿದರು.

ಕುಷ್ಟಗಿ: ಶಿಕ್ಷಣದ ಮೂಲಕ ಸಮಾಜದಲ್ಲಿ ಸಮಾನತೆ ಮತ್ತು ಪ್ರಗತಿ ಸಾಧಿಸಬಹುದು ಎಂಬ ದೂರದೃಷ್ಟಿ ಹೊಂದಿದ್ದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ದೇಶದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕಾಡಾ ನಿಗಮದ ಅಧ್ಯಕ್ಷ ಹಸನಸಾಬ್ ದೋಟಿಹಾಳ ಹೇಳಿದರು.

ಪಟ್ಟಣದ ಮೌಲಾನಾ ಅಬುಲ್ ಕಲಾಂ ಆಜಾದ್ ವೃತ್ತದಲ್ಲಿ ಆಯೋಜಿಸಿದ್ದ ಅವರ 138ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಆಜಾದ್ ಅವರು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದು, ಐಐಟಿ, ಯುಜಿಸಿ ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಶ್ರಮಿಸಿದ್ದಾರೆ. ರಾಷ್ಟ್ರೀಯ ಏಕತೆ, ಧಾರ್ಮಿಕ ಸಾಮರಸ್ಯ ಹಾಗೂ ಶಿಕ್ಷಣದ ಮಹತ್ವ ಸಾರಿದ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಶಿಕ್ಷಣವು ಸಮಾಜದ ಬಹುದೊಡ್ಡ ಶಕ್ತಿಯಾಗಿದ್ದು, ಸಮಾಜದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗಬೇಕು. ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಲು ಆದ್ಯತೆ ನೀಡಬೇಕು ಎಂದು ಹೇಳಿದರು.

ನಜೀರ್‌ಸಾಬ್ ಮೂಲಿಮನಿ ಮಾತನಾಡಿ, ಬಾಲ್ಯದಿಂದಲೇ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಶಿಕ್ಷಣ ಪಡೆದಿದ್ದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಮಹಾತ್ಮ ಗಾಂಧೀಜಿ ಅವರೊಂದಿಗೆ ಅಸಹಕಾರ ಚಳವಳಿಯಲ್ಲಿ ಭಾಗವಹಿಸಿದ್ದರು. ತಮ್ಮ 13ನೇ ವಯಸ್ಸಿನಲ್ಲಿಯೇ ಸ್ವಂತ ಪತ್ರಿಕೆಯ ಮೂಲಕ ಬ್ರಿಟಿಷರ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆ ನೀಡಿದ್ದರು. ದೇಶದ ಪ್ರಥಮ ಶಿಕ್ಷಣ ಸಚಿವರಾಗಿ ಐಐಟಿ, ಯುಜಿಸಿಯಂತಹ ಉನ್ನತ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಶೈಕ್ಷಣಿಕ ಸೇವೆ ಸ್ಮರಣೀಯವಾಗಿದೆ ಎಂದರು.

ಶಹರ ಪಂಚ ಕಮಿಟಿ ಅಧ್ಯಕ್ಷ ಅಹಮದ್ ಹುಸೇನ್ ಆದೋನಿ, ಅಮಿನುದ್ದೀನ್ ಮುಲ್ಲಾ, ಮುರ್ತುಜಾ ಪೇಂಟರ್, ಜಮೀಲ್ ಟಕ್ಕಲ್ಕಿ, ಹಾಫೀಜ್ ಜಾಫರ್, ಹುಸೇನ್ ಕಾಯಿಗಡ್ಡಿ, ರಾಜಸಾಬ್ ಕನಕಾಪುರ, ಖಾಸಿಂಸಾಬ್ ಕನಕಾಪುರ, ಮಹಿಬೂಬ್ ಸಾಬ್ ಕನಕಾಪುರ, ಇಮಾಮ್ ಸಾಬ್ ಕನಕಾಪುರ, ಅಬ್ದುಲ್ ಗೌಸ್ ಕನಕಾಪುರ, ಅಮೀರ್ ಸುಹೇಲ್, ಶಾಹಿದ್ ಉಪಸ್ಥಿತರಿದ್ದರು. ಅಲ್ತಾಫ್ ಹುಸೇನ್ ಮುಜಾವರ್ ಉಪನ್ಯಾಸ ನೀಡಿ, ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀಪಾವಳಿಲೀ ರಾಕೆಟ್‌ನಂತೆ ಹಾರಿದ ವಾಯು ಮಾಲಿನ್ಯ!
ಕೌಟುಂಬಿಕ ಕೇಸಲ್ಲಿ ಕುಟುಂಬ ಸಿಲುಕಿಸುವುದು ತರವಲ್ಲ: ಕೋರ್ಟ್‌