ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಸಮರ್ಪಕ ಅನುಷ್ಠಾನವಾಗಲಿ

KannadaprabhaNewsNetwork | Published : Dec 16, 2023 2:01 AM

ಸಾರಾಂಶ

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಬೇಕು ಎಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಆರೋಗ್ಯ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ

ಗದಗ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯರಿಗೆ 5 ಲಕ್ಷ ಗಳವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಹಾಗೂ ಎ.ಪಿ.ಎಲ್. ಪಡಿತರ ಕುಟುಂಬದ ಪ್ರತಿ ಸದಸ್ಯರಿಗೆ 1.5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ಸೌಲಭ್ಯ ದೊರಕಲಿದೆ ಎಂದರು.

ಜಿಲ್ಲೆಯಲ್ಲಿ 941247 ನಿಗದಿಪಡಿಸಿದ ಫಲಾನುಭವಿಗಳಿದ್ದು, ಈ ಪೈಕಿ 342290 ಫಲಾನುಭವಿಗಳು ಈಗಾಗಲೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ಕಾರ್ಡ್‌ ಪಡೆಯುವ ಮೂಲಕ ಶೇ 36ರಷ್ಟು ಪ್ರಗತಿಯಾಗಿದೆ. ಈ ಯೋಜನೆಯ ಪ್ರಯೋಜನವನ್ನು ಜನಸಾಮಾನ್ಯರಿಗೆ ತಿಳಿಸಿ ಜಾಗೃತಿ ಮೂಡಿಸುವ ಮೂಲಕ ಅರ್ಹ ಎಲ್ಲ ಫಲಾನುಭವಿಗಳು ನಿಗದಿತ ದಾಖಲೆ ನೀಡಿ ಕಾರ್ಡ್‌ ಪಡೆದು ಉಚಿತ ಆರೋಗ್ಯ ಸೌಲಭ್ಯ ತಮ್ಮದಾಗಿಸಿಕೊಳ್ಳಬೇಕು. ಸಂಬಂಧಿತ ಇಲಾಖೆ ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ನಗದುರಹಿತ ಚಿಕಿತ್ಸೆ ಪಡೆಯುವ ಯೋಜನೆ ಈ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಈ ಯೋಜನೆಯಡಿ 1650 ವಿವಿಧ ಹಂತದ ಚಿಕಿತ್ಸೆ ನಿಗದಿಪಡಿಸಲಾಗಿದೆ. ಸರ್ಕಾರಿ ಆಸ್ಪತ್ರೆ ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಕಾರ್ಡ್‌ ಪಡೆಯಲು ಹತ್ತಿರದ ಕರ್ನಾಟಕ ಒನ್ ಸಿಎಸ್‍ಸಿ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಿ ಕಾರ್ಡ್‌ ಪಡೆಯಬಹುದು ಅಥವಾ ಫಲಾನುಭವಿಗಳೇ ನೇರವಾಗಿ ಆಯುಷ್ಮಾನ್ ಮೊಬೈಲ್ ಆ್ಯಪ್ ಮೂಲಕ ನೋಂದಾಯಿಸಿ ಕಾರ್ಡ್ ಪಡೆಯಬಹುದಾಗಿದೆ ಎಂದರು. ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರು ಹಾಜರಿದ್ದರು.ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯ ಹೊಂದಲು ಫಲಾನುಭವಿಗಳು ಮೊದಲು ಕಾರ್ಡ್‌ ಪಡೆಯಬೇಕು. ಆಯುಷ್ಮಾನ್ ಆ್ಯಪ್ ಪ್ಲೇಸ್ಟೋರ್ ನಿಂದ ಡೌನ್‍ಲೋಡ್ ಮಾಡಿಕೊಂಡು ಆಧಾರ ಲಿಂಕ್ ಇರುವ ಮೊಬೈಲ್ ಸಂಖ್ಯೆ ಬಳಸಿ ನೊಂದಾಯಿಸಿಕೊಳ್ಳಬಹುದಾಗಿದೆ ಡಿಎಚ್‌ಓ ಡಾ. ಎಸ್‌. ಎಸ್‌. ನೀಲಗುಂದ ಹೇಳಿದರು.

Share this article