ಬ್ಯಾಡಗಿ: ಮೆಣಸಿನಕಾಯಿಗೆ ಖ್ಯಾತಿ ಪಡೆದ ಬ್ಯಾಡಗಿ ಪಟ್ಟಣದಲ್ಲಿ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳುವ ಮೂಲಕ ಕ್ರೀಡೆಯಲ್ಲೂ ಖ್ಯಾತಿಯನ್ನು ಪಡೆದುಕೊಳ್ಳಲಿ ಎಂದು ಮಾಜಿ ಸಚಿವ ಹಾಗೂ ಶಾಸಕ ಶಿವಾನಂದ ಪಾಟೀಲ ಆಶಯ ವ್ಯಕ್ತಪಡಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳನ್ನು ಬೆಳೆಸಿ ಪ್ರೋತ್ಸಾಹಿಸುವುದು ಉತ್ತಮವಾದ ಬೆಳವಣಿಗೆಯಾಗಿದ್ದು ಇದಕ್ಕೆ ಪೂರಕವಾಗಿ ಬ್ಯಾಡಗಿ ಪಟ್ಟಣ ಕಬಡ್ಡಿ ಕ್ರೀಡೆಗಳ ಬೆಳವಣಿಗೆ ಸಹಕರಿಸುತ್ತಿರುವುದು ಸ್ವಾಗತಾರ್ಹ ಎಂದರು.
ಶಾಸಕರ ಧೈರ್ಯ ಮೆಚ್ಚಬೇಕು: ಇಲ್ಲಿಯವರೆಗೂ ರಾಷ್ಟ್ರೀಯ ಪಂದ್ಯಾವಳಿಗಳು ಕೇವಲ ದೊಡ್ಡ ದೊಡ್ಡ ನಗರಗಳಲ್ಲಿ ನಡೆಯುತ್ತಿದ್ದವು ಆದರೆ ಬ್ಯಾಡಗಿಯಂತಹ ಸಣ್ಣ ಪಟ್ಟಣದಲ್ಲಿ ಇಂತಹ ಬೃಹತ್ ಕ್ರೀಡಾಕೂಟವನ್ನು ಹಮ್ಮಿಕೊಂಡಿರುವುದರ ಹಿಂದಿರುವ ಶಾಸಕ ಬಸವರಾಜ ಶಿವಣ್ಣನವರ ಅವರ ಧೈರ್ಯವನ್ನು ಮೆಚ್ಚಲೇಬೇಕು ಎಂದರು.ತೊಂದರೆಯಾಗದಂತೆ ಆಯೋಜನೆ: ಶಾಸಕ ಬಸವರಾಜ ಶಿವಣ್ಣನವರ ಯಾವುದೇ ಕಾರಣಕ್ಕೂ ಕ್ರೀಡಾಪಟುಗಳಿಗೆ ತೊಂದರೆಯಾಗದಂತೆ ₹1 ಕೋಟಿಗೂ ಹಣ ವ್ಯಯಿಸಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತಿದೆ, ಹೀಗಾಗಿ ಎಲ್ಲಾ ವರ್ಗದಲ್ಲೂ ಸಹ ಕ್ರೀಡಾಪಡುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.