ಹಿರಿಯರ ತ್ಯಾಗ ಬಲಿದಾನದ ಮೂಲಕ ದೊರೆತ ಸ್ವಾತಂತ್ರ್ಯವನ್ನು ಶಾಂತಿ ಸಹಬಾಳ್ವೆ, ಅಭಿವೃದ್ಧಿ ಮೂಲಕ ಸದ್ಬಳಕೆ ಮಾಡಿಕೊಳ್ಳುವಂತೆ ತಹಸೀಲ್ದಾರ್ ಪ್ರವೀಣ್ ಕುಮಾರ್ ಹೇಳಿದರು.
ವಿರಾಜಪೇಟೆ: ಹಿರಿಯರ ತ್ಯಾಗ ಬಲಿದಾನದ ಮೂಲಕ ದೊರೆತ ಸ್ವಾತಂತ್ರ್ಯವನ್ನು ಶಾಂತಿ ಸಹಬಾಳ್ವೆ, ಅಭಿವೃದ್ಧಿ ಮೂಲಕ ಸದ್ಬಳಕೆ ಮಾಡಿಕೊಳ್ಳುವಂತೆ ತಹಸೀಲ್ದಾರ್ ಪ್ರವೀಣ್ ಕುಮಾರ್ ಹೇಳಿದರು.ಪಟ್ಟಣದ ತಾಲೂಕು ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರು ಮಾತನಾಡಿ, ದೇಶದ ಸಂವಿಧಾನ ವಿಶೇಷವಾಗಿದೆ. ಇಂದು ದೇಶ ಭವಿಷ್ಯದ ದೃಷ್ಟಿಯಿಂದ ಸೂಕ್ತ ಯೋಜನೆಗಳೊಂದಿಗೆ ಎಲ್ಲ ಕ್ಷೇತ್ರದಲ್ಲೂ ಮುನ್ನಡೆಯುತ್ತಿದೆ ಎಂದರು.
ಸಮಾರಂಭದಲ್ಲಿ ಮಾಜಿ ಸೈನಿಕ ಐಚಂಡ ಕೆ. ಮುತ್ತಣ್ಣ, ಕುಟ್ಟಂಡ ಹ್ಯಾರಿ ಅಪ್ಪಯ್ಯ, ಪಂದಿಕಂಡ ಬೆಳ್ಯಪ್ಪ, ಅಜ್ಜಿಯಂಡ ಸುಭಾಶ್ ಚಂದ್ರ, ಅಮ್ಮುಣಿಚಂಡ ರವಿ ಉತ್ತಪ್ಪ ಹಾಗೂ ಕ್ರೀಡಾಪಟು ಸಂಜನಾ ಅವರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ಡಿವೈಎಸ್ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಡಿ.ಪಿ. ರಾಜೇಶ್, ಗ್ರೇಡ್ 2 ತಹಸೀಲ್ದಾರ್ ಪ್ರದೀಪ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಾನ್ಸನ್, ಉಪಾಧ್ಯಕ್ಷ ನಾಸೀರ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ವಿರಾಜಪೇಟೆ ನಗರ ಠಾಣೆ ಎಸ್ಐ ಪ್ರಮೋದ್ ಕುಮಾರ್, ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ರವಿ ಉತ್ತಪ್ಪ, ಕಂದಾಯ ಪರಿವೀಕ್ಷಕ ಹರೀಶ್ ಸೇರಿದಂತೆ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ತಹಸೀಲ್ದಾರ್ ಪ್ರವೀಣ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ಲತಾ ಅವರ ನೇತೃತ್ವದಲ್ಲಿ ವಿವಿಧ ತಂಡಗಳಿಂದ ಪಥ ಸಂಚಲನ ನಡೆಯಿತು. ಪಥ ಸಂಚಲನದಲ್ಲಿ ಪೊಲೀಸ್ ತಂಡ, ವಿವಿಧ ಶಾಲೆಗಳ ಎನ್‌ಸಿಸಿ ಸ್ಕೌಟ್, ಗೈಡ್ಸ್ ಹಾಗೂ ವಾದ್ಯ ತಂಡಗಳು ಭಾಗವಹಿದ್ದವು.
ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ದೇಶಭಕ್ತಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸಾರ್ವಜನಿಕರ ಗಮನ ಸೆಳೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.