ಕನ್ನಡಪ್ರಭ ವಾರ್ತೆ ಸಿರಿಗೆರೆ
ಸ್ವತಂತ್ರ ಪೂರ್ವದಲ್ಲಿ ಗಾಂಧೀಜಿಯವರು ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದರು. ಗಾಂಧೀಜಿಯವರು ಸ್ವಾತಂತ್ರದ ಜತೆ ಜತೆಗೆ ದೇಶದ ಸ್ವಚ್ಛತೆಗೆ ಕರೆ ಕೊಟ್ಟಿದ್ದರು. ಶಾಂತಿಯುತವಾಗಿ ದೇಶದ ಸಂರಕ್ಷಣೆ ಮಾರ್ಗವನ್ನು ಮಹಾತ್ಮ ಗಾಂಧೀಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಅದೇ ರೀತಿ ಪರಿಸರದ ಮೇಲೆ ಸಾಕಷ್ಟು ಅಪಾರವಾದ ಪ್ರೀತಿಯನ್ನು ಹೊಂದಿದ್ದ ಮಹಾತ್ಮ ಗಾಂಧೀಜಿಯವರ ತತ್ವ ಆದರ್ಶಗಳನ್ನ ನಾವೆಲ್ಲರೂ ಅನುಸರಿಸಲೇಬೇಕಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ರದ್ದು ಮಾಡಿದ್ದರು ಸಹ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಎಗ್ಗಿಲದೇ ನಡೆಯುತ್ತಿದೆ. ಸರ್ಕಾರಗಳು ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿವೆ. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದಾಗಿ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿದೆ ಎಂದರು.ಶಾಲಾ-ಕಾಲೇಜು ವಿದ್ಯಾರ್ಥಿಗಳು ಬರೀ ಓದುವುದರ ಕಡೆಗೆ ಗಮನ ಹರಿಸುವುದರ ಜತೆಗೆ ಪರಿಸರ ಸಂರಕ್ಷಣೆ ಮಾಡುವುದನ್ನು ರೂಢಿ ಮಾಡಿಕೊಳ್ಳಬೇಕಾಗಿದೆ. ಮಾನವನ ಜನ್ಮಕ್ಕೆ ಪರಿಸರ ತುಂಬಾ ಅವಶ್ಯಕವಾಗಿ ಬೇಕಾಗಿದೆ ಪರಿಸರ ಸಮೃದ್ಧಿಯಾಗಿದ್ದರೆ ದೇಶವು ಸುಭದ್ರವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡುವ ಹೊಣೆಗಾರಿಕೆಯನ್ನು ಕೈಗೆತ್ತಿಕೊಳ್ಳಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಡ್ಡರ ಸಿದ್ದವನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ. ತಿಮ್ಮಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮನೆಗೊಂದು ಮರ ಊರಿಗೊಂದು ವನ ಎನ್ನುವ ಗಾದೆ ಮಾತನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.