ಭಾರತ ಕ್ರೀಡಾ ಕ್ಷೇತ್ರದಲ್ಲೂ ವಿಶ್ವಗುರುವಾಗಿ ಹೊರಹೊಮ್ಮಲಿ: ಹೇಮಗಿರೀಶ ಹಾವಿನಾ‍ಳ

KannadaprabhaNewsNetwork |  
Published : Nov 27, 2026, 02:15 AM IST
26ಎಂಡಿಜಿ1, ಮುಂಡರಗಿ ಪಟ್ಟಣದ ಎಸ್.ಎಂ.ಭೂಮರಡ್ಡಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜರುಗಿದ ಬೆಳಗಾವಿ ವಿಭಾಗ ಮಟ್ಟದ 14 ವರ್ಷದೊಳಗಿನ ಬಾಲಕರ ಹಾಗೂ ಬಾಲಕಿಯರ ಖೋ ಖೋ ಪಂದ್ಯಾವಳಿಯನ್ನು ಶಾಲಾ ಭೂದಾನಿ ರಮೇಶ ಭೂಮರಡ್ಡಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಯೋಗಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಅವರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸಬೇಕು.

ಕನ್ನಡಪ್ರಭ ವಾರ್ತೆ ಮುಂಡರಗಿ

ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಯೋಗಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಅವರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಭಾರತವು ಕ್ರೀಡಾ ಕ್ಷೇತ್ರದಲ್ಲೂ ವಿಶ್ವಗುರುವಾಗಿ ಹೊರಹೊಮ್ಮುವಂತಾಗಲಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೇಮಗಿರೀಶ ಹಾವಿನಾಳ ಹೇಳಿದರು.

ಪಟ್ಟಣದ ಭೂಮರಡ್ಡಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬೆಳಗಾವಿ ವಿಭಾಗ ಮಟ್ಟದ 14 ವರ್ಷದೊಳಗಿನ ಬಾಲಕರ-ಬಾಲಕಿಯರ ಖೋ ಖೋ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾ ಜ್ಯೋತಿ ಸ್ವಾಗತಿಸಿ ಮಾತನಾಡಿದರು.

ಆರೋಗ್ಯವೇ ಭಾಗ್ಯವಾಗಿದ್ದು, ಪ್ರಾಥಮಿಕ ಹಂತದಿಂದಲೇ ಯೋಗ ಮತ್ತು ಕ್ರೀಡಾ ಚಟುವಟಿಕೆಗಳನ್ನು ರೂಢಿಸಿಕೊಂಡರೆ ಸದೃಢ ಸಮಾಜ ನಿರ್ಮಾಣ ಸಾಧ್ಯ. ಕೇವಲ ಪಂದ್ಯಾವಳಿ ಇದ್ದಾಗ ಮಾತ್ರ ಆಡದೆ, ನಿರಂತರ ಅಭ್ಯಾಸದ ಮೂಲಕ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು. ಪಾಲಕರು ಕೇವಲ ಸರ್ಕಾರಿ ನೌಕರಿಗೆ ಸೀಮಿತವಾಗದೆ, ಕ್ರೀಡೆಯಲ್ಲೂ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ವಿಭಾಗ ಮಟ್ಟದ ಈ ಪಂದ್ಯಾವಳಿಗೆ ಬೆಳಗಾವಿ ವಿಭಾಗದ 14 ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿದ್ದು, ದೈಹಿಕ ಶಿಕ್ಷಕರು ಮತ್ತು ಅಧಿಕಾರಿಗಳು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಪಂದ್ಯಗಳನ್ನು ನಡೆಸಿ ಅರ್ಹ ತಂಡಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಶಾಲಾ ಶಿಕ್ಷಕ ಹಾಗೂ ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕ ಕೆ.ಡಿ. ಬಡಿಗೇರ ಮಾತನಾಡಿ, ಬೆಳಗಾವಿ ವಿಭಾಗದ ಒಟ್ಟು 9 ಜಿಲ್ಲೆಗಳಿಂದ 125 ಬಾಲಕರು ಹಾಗೂ 125 ಬಾಲಕಿಯರು ಸೇರಿದಂತೆ ಒಟ್ಟು 250 ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಇಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಗಳು ಡಿ. 1ರಂದು ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯಲಿವೆ ಎಂದು ಮಾಹಿತಿ ನೀಡಿದರು.

ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಡಿ.ಡಿ. ಮೋರನಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾ ಭೂದಾನಿ ರಮೇಶ ಭೂಮರಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜುನಾಥ ಕುಂಬಾರ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿಜಯಕುಮಾರ ಶಿಳ್ಳೀನ, ಅಶೋಕ ಹಂದ್ರಾಳ, ಚಂದ್ರಕಾಂತ ಚಿಕ್ಕಣ್ಣವರ, ಪರಶುರಾಮ ಡಂಬಳ, ಲತಾ ಅಲ್ಲಿಪೂರ, ಜಿಲ್ಲಾ ದೈ.ಶಿ.ಪರಿವೀಕ್ಷಕ ಮಹ್ಮದಹುಸೇನಫೀರ್, ಯಲ್ಲಪ್ಪ‌ ಹೊಂಬಳಗಟ್ಟಿ, ಎ.ವೈ. ನವಲಗುಂದ, ನಾಗರಾಜ ಹಳ್ಳಿಕೇರಿ, ಎಸ್.ಸಿ. ಹರ್ತಿ, ವಿಶ್ವನಾಥ ಉಳ್ಳಾಗಡ್ಡಿ, ಎ.ಡಿ. ಬಂಡಿ, ಬನ್ನೇಶ, ಎಂ.ಎಂ. ಹೆಬ್ಬಾಳ, ಎಂ.ಪಿ. ಶೀರನಹಳ್ಳಿ, ಎಸ್.ಡಿ. ಬಸೇಗೌಡ್ರ ಸೇರಿದಂತೆ ಅನೇಕರಿದ್ದರು. ಬಿಇಒ ಗಂಗಾಧರ ಅಣ್ಣಿಗೇರಿ ಸ್ವಾಗತಿಸಿ, ಹನಮರಡ್ಡಿ ಇಟಗಿ, ಕುಸುಮಾ ರತ್ನಕಟ್ಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಟ್ಕಳದಲ್ಲಿ ಇಂದಿನಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ
ಸಂವಿಧಾನ ನೀಡಿದ ಹಕ್ಕು, ಕರ್ತವ್ಯ ನಿಭಾಯಿಸುವುದು ನಮ್ಮೆಲ್ಲರ ಹೊಣೆ: ನ್ಯಾ. ಬಸವರಾಜ