‘ಕೈ’ ನಾಯಕ ಸ್ಟಾರ್‌ ಚಂದ್ರುಗೆ ಜನಸೇವೆ ಮಾಡುವ ಅವಕಾಶ ಸಿಗಲಿ

KannadaprabhaNewsNetwork |  
Published : Jun 25, 2025, 01:18 AM IST
೨೪ಕೆಎಂಎನ್‌ಡಿ-೩ಕಾಂಗ್ರೆಸ್ ಮುಖಂಡ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಮಂಡ್ಯದ ಪ್ರೇರಣಾ ಅಂಧ ಮಕ್ಕಳ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟ ವಿತರಿಸಿದರು. | Kannada Prabha

ಸಾರಾಂಶ

ಸ್ಟಾರ್ ಚಂದ್ರು ಅವರು ಜನಸೇವೆ ಮಾಡುವ ಉದ್ದೇಶ ಅವರಲ್ಲಿತ್ತು. ಈಗಾಗಲೇ ಅವರು ಜನಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ. ಮುಂದಿನ ದಿನಗಳಲ್ಲಿ ಜನರ ಸೇವೆ ಮಾಡುವ ಅಧಿಕಾರ ಅವರಿಗೆ ಮಂಡ್ಯದಲ್ಲಿ ಸಿಗಲಿ.

ಕನ್ನಡಪ್ರಭ ವಾರ್ತೆ ಮಂಡ್ಯ

ಮುಂಬರುವ ೨೦೨೯ರ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಅವರು ಗೆಲುವು ಸಾಧಿಸಲಿ ಎಂದು ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಚ್.ಬಿ.ವಿಜಯಕುಮಾರ್ ಶುಭ ಹಾರೈಸಿದರು.

ಕಾಂಗ್ರೆಸ್ ಮುಖಂಡ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸ್ಟಾರ್ ಚಂದ್ರು ( ವೆಂಕಟರಮಣೇಗೌಡ ) ಅವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಸ್ವರ್ಣಸಂದ್ರದಲ್ಲಿರುವ ಪ್ರೇರಣ ಅಂಧರ ಶಾಲೆಯ ಮಕ್ಕಳಿಗೆ ಕಾಂಗ್ರೆಸ್ ಮುಖಂಡರು ಏರ್ಪಡಿಸಿದ್ದ ಮಧ್ಯಾಹ್ನದ ಊಟ ವಿತರಿಸಿ ಅವರು ಮಾತನಾಡಿದರು. ಸ್ಟಾರ್ ಚಂದ್ರು ಅವರಿಗೆ ಆಯಸ್ಸು ಆರೋಗ್ಯ ಅಧಿಕಾರ ಕರುಣಿಸಲಿ ಎಂದು ಅವರ ಹುಟ್ಟುಹಬ್ಬದ ಅಂಗವಾಗಿ ಶುಭ ಹಾರೈಸಿದರು.

ಮುಡಾ ಅಧ್ಯಕ್ಷ ನಯೀಮ್ ಮಾತನಾಡಿ, ಸ್ಟಾರ್ ಚಂದ್ರು ಅವರು ಜನಸೇವೆ ಮಾಡುವ ಉದ್ದೇಶ ಅವರಲ್ಲಿತ್ತು. ಈಗಾಗಲೇ ಅವರು ಜನಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ. ಮುಂದಿನ ದಿನಗಳಲ್ಲಿ ಜನರ ಸೇವೆ ಮಾಡುವ ಅಧಿಕಾರ ಅವರಿಗೆ ಮಂಡ್ಯದಲ್ಲಿ ಸಿಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ರುದ್ರಪ್ಪ, ನಗರಸಭಾ ಸದಸ್ಯರಾದ ಶ್ರೀಧರ್, ಹರೀಶ್, ಕಾಂಗ್ರೆಸ್ ಮುಖಂಡರಾದ ಕಾರ್ತಿಕ್, ರಮೇಶ್, ಪ್ರೇರಣಾ ಅಂಧ ಮಕ್ಕಳ ಶಾಲೆಯ ರವಿಕುಮಾರ್ ಹಾಜರಿದ್ದರು.

ನಾಳೆ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಮಂಡ್ಯ: ಧ್ವನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಜೂ.26 ರಂದು ನಗರದ ಹೊಳಲು ವೃತ್ತ ನೀರು ಕೊಳದಲ್ಲಿನ ಆರ್.ಜಿ.ವ್ಯಸನಿಗಳ ಪುವಶ್ವೇತನಾ ಕೇಂದ್ರದಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯನ್ನು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 11 ಗಂಟೆಗೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಎಸ್.ಎಸ್. ಕೋಮಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ನಗರಸಭಾ ಸದಸ್ಯೆ ಎಂ.ಎಸ್. ಪೂರ್ಣಿಮ ರವಿ ಆಗಮಿಸುವರು.

ಆದಿಚುಂಚನಗಿರಿ ವೈದ್ಯಕೀಯ ಮಹಾವಿಶ್ವವಿದ್ಯಾಲಯದ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಜಯ್ ಎಸ್. ಹೂಗಾರ್ ಅವರು ಮಧ್ಯಪಾನದಿಂದಾಗುವ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಲಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಡಿ. ತೇಜಕುಮಾರಿ ಮಾಡಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು