ಕೈವಾರ ತಾತಯ್ಯನ ತತ್ವಾದರ್ಶಗಳು ಬದುಕಿಗೆ ಮಾದರಿಯಾಗಲಿ: ಸಂಸದ ಕೋಟ

KannadaprabhaNewsNetwork |  
Published : Mar 17, 2025, 12:35 AM IST
16ತಾತಾ | Kannada Prabha

ಸಾರಾಂಶ

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಶನಿವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗಿನಾರೇಯಣರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡಿದರು.ಕೈವಾರ ತಾತಯ್ಯರು ತಮ್ಮ ಕಾಯಕದಿಂದಲೇ ಬದುಕನ್ನು ಕಟ್ಟಿಕೊಂಡು, ಭಾಷಾ ಹಾಗೂ ಬರಹಗಳ ಮೂಲಕ ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅನ್ಯರ ಬದುಕಿನ ಏಳಿಗೆಗಾಗಿ ಶ್ರಮಿಸಿದವರು. ಆಧ್ಯಾತ್ಮ ಚಿಂತನ ಮಂಥನ ನಡೆಸುವುದರಲ್ಲಿ ಕೈವಾರ ತಾತಯ್ಯರು ಚಾಣಾಕ್ಷತೆ ಹೊಂದಿದ್ದರು ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಸರ್ಕಾರವು ಸಂತರ, ವಚನಕಾರರ, ಶರಣರ ಹಾಗೂ ಇಂತಹ ಸಾಧಕರ ಜಯಂತಿಯನ್ನು ಆಚರಿಸಿ ಅವರ ಬದುಕಿನ ಬಗ್ಗೆ ಜನರಿಗೆ ಜ್ಞಾನವನ್ನು ಮೂಡಿಸುವ ಮಹತ್ವ ಕೆಲಸ ಮಾಡುತ್ತಿದೆ. ಪ್ರಸ್ತುತ ಸಮಾಜದಲ್ಲಿ ನ್ಯಾಯಾಂಗ, ಶಾಸಕಾಂಗ ಎಂಬ ವ್ಯವಸ್ಥೆ ಇದ್ದರೂ ಕೂಡ ಸಮಾನತೆ ಬಂದಿಲ್ಲ. ಸಮಾಜಕ್ಕೆ ನೀಡಿದ ಕೈವಾರ ತಾತಯ್ಯರ ಕೊಡುಗೆಗಳು ಎಲ್ಲರಿಗೆ ಪ್ರೇರಣೆಯಾಗಲಿ ಎಂದು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ.ಶ್ರೀಕಾಂತ್ ಸಿದ್ದಾಪುರ ವಿಶೇಷ ಉಪನ್ಯಾಸ ನೀಡಿ, ಕೈವಾರ ತಾತಯ್ಯರು ವೃತ್ತಿ ಜೀವನವನ್ನು ತೊರೆದು ಆಧ್ಯಾತ್ಮಿಕ ಹಾದಿಯನ್ನು ಹಿಡಿದರು. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಬೇಕಾದರೆ ಮನಸ್ಸನ್ನು ನಿಯಂತ್ರಣದಲ್ಲಿಡಬೇಕು ಹಾಗೂ ಜೀವನದಲ್ಲಿ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಸಭೆಯ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಆಡಳಿತ ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ವರ್ಷಾ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅದ್ಧೂರಿ ಮಾರಿಕಾಂಬೆ ಉತ್ಸವ ಮೂರ್ತಿ ಮೆರವಣಿಗೆ
ಗುರಿ ಸಾಧನೆಗೆ ಶ್ರಮ ಮುಖ್ಯ: ಭುವನೇಶ್ವರಿ