ಯಲ್ಲಾಪುರ
ಅವರು ಪಟ್ಟಣದ ಅಡಕೆ ಭವನದಲ್ಲಿ ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆಯೋಜಿಸಿದ್ದ ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಸಂಸ್ಕೃತಿ, ಸಂಸ್ಕಾರಗಳಿಂದ ಕೂಡಿದ ಬದುಕು ನಮ್ಮದಾಗಬೇಕು. ಅಂತಹ ಸಂಸ್ಕೃತಿ, ಸಂಸ್ಕಾರದ ಜತೆಗೆ ಮಹಿಳೆಯರನ್ನು ಸಂಘಟಿಸುವ ಮಹತ್ಕಾರ್ಯ ಯೋಜನೆ ಮಾಡುತ್ತಿರುವುದು ಶ್ಲಾಘನೀಯ ಎಂದರು.ಸಂಪನ್ಮೂಲ ವ್ಯಕ್ತಿಯಾಗಿದ್ದ ವಿಶ್ವ ಮಾನವ ಹಕ್ಕು ಆಯೋಗದ ಆರ್.ಕೆ. ಫೌಂಡೇಶನ್ ಜಿಲ್ಲಾಧ್ಯಕ್ಷೆ ಅರ್ಚನಾ ನಾಯಕ ಮಾತನಾಡಿ, ಮಹಿಳೆಯರಿಗೆ ಎಲ್ಲೇ ಅನ್ಯಾಯವಾದರೂ ಕಾನೂನಾತ್ಮಕವಾಗಿ ನ್ಯಾಯ ದೊರಕಿಸಿಕೊಡಲು ನಮ್ಮ ತಂಡ ಶ್ರಮಿಸುತ್ತಿದೆ. ಮಹಿಳೆಯರು ಕಾನೂನಿನ ಕುರಿತು ಸರಿಯಾದ ತಿಳಿವಳಿಕೆ ಹೊಂದಬೇಕು. ಮಹಿಳೆಯರು ಒಗ್ಗಟ್ಟಾದಾಗ ಮಾತ್ರ ಸಮಾಜದಲ್ಲಿ ಗೌರವಯುತ ಬದುಕು ಸಾಗಿಸಲು ಸಾಧ್ಯ ಎಂದರು.
ಸಿಪಿಐ ರಂಗನಾಥ ನೀಲಮ್ಮನವರ್, ತಾಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಭಟ್ಟ, ಪಿಎಸ್ಐ ನಸ್ರೀನ್ ತಾಜ್ ಚಟ್ಟರಕಿ, ನೇತ್ರ ತಜ್ಞೆ ಡಾ. ಸೌಮ್ಯಾ ಕೆ.ವಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಬಸವರಾಜ ನಡುವಿನಮನಿ,ಯೋಜನಾಧಿಕಾರಿ ಹನುಮಂತ ನಾಯ್ಕ ಉಪಸ್ಥಿತರಿದ್ದರು. ವೆಂಕಟೇಶ ಗೌಡ ನಿರ್ವಹಿಸಿದರು.