ರಕ್ಷಾ ಬಂಧನ ಭ್ರಾತೃತ್ವ ಬೆಸೆಯಲಿ: ಕುತ್ಯಾರು ನವೀನ್ ಶೆಟ್ಟಿ

KannadaprabhaNewsNetwork |  
Published : Aug 28, 2026, 02:45 AM IST
27ರಕ್ಷಾ | Kannada Prabha

ಸಾರಾಂಶ

ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಬಿಜೆಪಿಯ ವಿಶೇಷತೆ. ಆದ್ದರಿಂದ ಸಹೋದರಿಯರ ರಕ್ಷಣೆಗೆ ಎಲ್ಲರೂ ಒಂದಾಗಿ ಸಾಗಬೇಕು ಎನ್ನುವ ಸಹೋದರತ್ವ ಸಾರುವ ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಬಿಜೆಪಿಯ ವಿಶೇಷತೆ. ಆದ್ದರಿಂದ ಸಹೋದರಿಯರ ರಕ್ಷಣೆಗೆ ಎಲ್ಲರೂ ಒಂದಾಗಿ ಸಾಗಬೇಕು ಎನ್ನುವ ಸಹೋದರತ್ವ ಸಾರುವ ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಧ್ಯಮ ಸಹೋದರರಿಗೆ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪತ್ರಕರ್ತ ಜನಾರ್ದನ ಕೊಡವೂರು ಮಾತನಾಡಿ, ನಾಡಿನ ಭವ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಿಳಾ ಮೋರ್ಚಾದ ನಡೆ ಪ್ರಶಂಸನೀಯ. ಇಂತಹ ಭಾವನಾತ್ಮಕ ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿಗಳನ್ನೂ ಜೋಡಿಸಿಕೊಂಡಿರುವುದು ಸಂತಸ ತಂದಿದೆ ಎಂದರು.

ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ರಕ್ಷಾ ಬಂಧನದ ಸಂದೇಶ ನೀಡಿದರು. ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದ ಎಲ್ಲರಿಗೂ ಆರತಿ ಬೆಳಗಿ, ತಿಲಕವನ್ನಿಟ್ಟು, ರಕ್ಷೆ ಕಟ್ಟಿದರು. ಈ ಸಂದರ್ಭ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಸಹಿತ ಮಹಿಳಾ ಮೋರ್ಚಾದ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಜ್ಯೋತಿ ರಮೇಶ್ ಕಾರ್ಯಕ್ರಮ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಪೋಕ್ಲು ವ್ಯಾಪ್ತಿಯಲ್ಲಿ ಸಂಭ್ರಮದ ಈದ್ ಮಿಲಾದ್
ಟಿಟಿ ಮೇಲೆ ಲಾರಿ ಉರುಳಿ ನಾಲ್ವರಿಗೆ ಗಾಯ