ಒಗ್ಗಟ್ಟಿನಿಂದ ಧಾರ್ಮಿಕ ಕಾರ್ಯಕ್ರಮ ನಡೆಯಲಿ: ಸುಷ್ಮಾ ರಾಜಗೋಪಾಲ ರೆಡ್ಡಿ

KannadaprabhaNewsNetwork |  
Published : Oct 25, 2026, 02:30 AM IST
ಕಾರ್ಯಕ್ರಮವನ್ನು ಸುಷ್ಮಾ ರಾಜಗೋಪಾಲ ರೆಡ್ಡಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಅತಿಥಿಗಳಾದ ವೇ. ವೆಂಕಟ್ರಮಣ ಭಟ್ಟ ಬಗ್ಗೋಣ ಹಾಗೂ ಕಾಂಗ್ರೆಸ್ ತಾಲೂಕಾಧ್ಯಕ್ಷ ಭುವನ ಭಾಗ್ವತ್ ಅವರು ಮಾತನಾಡಿ, ಶಿಕ್ಷಣ ಮತ್ತು ಸಂಸ್ಕೃತಿಯ ಉಳಿವಿಗಾಗಿ ಇಂತಹ ಧಾರ್ಮಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳೇ ಪ್ರಮುಖ ಸ್ಫೂರ್ತಿ ಎಂದರು.

ಕುಮಟಾ: ಸಮಾಜದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಮತ್ತು ಎಲ್ಲರೂ ಒಗ್ಗಟ್ಟಾಗಿ ಭಾಗವಹಿಸಬೇಕು. ಅಂತಹ ಕಾರ್ಯಕ್ರಮ ಸಂಯೋಜಿಸಿ ಕಲಾವಿದರನ್ನು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು ಪ್ರಶಂಸನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಷ್ಮಾ ರಾಜಗೋಪಾಲ ರೆಡ್ಡಿ ಹೇಳಿದರು.

ತಾಲೂಕಿನ ಊರಕೇರಿಯಲ್ಲಿರುವ ಸ್ವರ್ಣಮಹಾಸತಿ ಯಕ್ಷಿಚೌಡೇಶ್ವರಿ ದೇವಸ್ಥಾನದಲ್ಲಿ ಇತ್ತೀಚೆಗೆ ಶ್ರೀದೇವಿ ಪ್ರೇರಿತ ಶಿಕ್ಷಣ ಶಿಲ್ಪಿ ಪುರಸ್ಕಾರ ಹಾಗೂ ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಪುರಸ್ಕಾರ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅತಿಥಿಗಳಾದ ವೇ. ವೆಂಕಟ್ರಮಣ ಭಟ್ಟ ಬಗ್ಗೋಣ ಹಾಗೂ ಕಾಂಗ್ರೆಸ್ ತಾಲೂಕಾಧ್ಯಕ್ಷ ಭುವನ ಭಾಗ್ವತ್ ಅವರು ಮಾತನಾಡಿ, ಶಿಕ್ಷಣ ಮತ್ತು ಸಂಸ್ಕೃತಿಯ ಉಳಿವಿಗಾಗಿ ಇಂತಹ ಧಾರ್ಮಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳೇ ಪ್ರಮುಖ ಸ್ಫೂರ್ತಿ ಎಂದರು.

ಅತಿಥಿ ಜೆಡಿಎಸ್ ಜಿಲ್ಲಾಧ್ಯಕ್ಷ ಸೂರಜ ನಾಯ್ಕ, ಅಧ್ಯಕ್ಷತೆ ವಹಿಸಿದ್ದ ವಾಲಗಳ್ಳಿ ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ಶಾಂತಿ ಆರ್. ಮಡಿವಾಳ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಲಿ ಎಂದರು.

ಹನುಮಂತ ಪಟಗಾರ, ನಾರಾಯಣ ಮಡಿವಾಳ, ಸೂರ್ಯಕಾಂತ ಭಟ್ಟ, ರಾಮಚಂದ್ರ ಮಡಿವಾಳ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದ ಕೃಷ್ಣ ಯಾಜಿ ಬಳ್ಕೂರು ದಂಪತಿಯನ್ನು ಸನ್ಮಾನಿಸಲಾಯಿತು. ಶಿಕ್ಷಕ ಮಹಾದೇವ ಬೊಮ್ಮು ಗೌಡ ಅವರಿಗೆ ಶ್ರೀದೇವಿ ಪ್ರೇರಿತ ಶಿಕ್ಷಣ ಶಿಲ್ಪಿ ಪುರಸ್ಕಾರ ಪ್ರದಾನ ಮಾಡಲಾಯಿತು. ಎಸ್‌ಎಸ್‌ಎಲ್‌ಸಿ ಸಾಧಕಿ ಕಾವ್ಯ ನಾಯ್ಕ ಅವರನ್ನು ಗೌರವಿಸಲಾಯಿತು. ಪಿ.ಎಂ. ಮುಕ್ರಿ ಕಾರ್ಯಕ್ರಮ ನಿರ್ವಹಿಸಿದರು. ದೇವಸ್ಥಾನದ ಅರ್ಚಕರು, ಸ್ವಯಂ ಸೇವಾ ಸಮಿತಿ, ಭಕ್ತ ವೃಂದದವರು ಇದ್ದರು. ಬಳಿಕ ಮಾರುತಿ ಪ್ರತಾಪ ಯಕ್ಷಗಾನ ಪ್ರದರ್ಶನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಷ್ಟಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಮಸ್ಯೆಗಳ ತಾಂಡವ!
ಮನೆ-ಮನೆಗೂ ವಿಜ್ಞಾನ ಮುಟ್ಟಿಸುವ ಕೆಲಸವಾಗಲಿ: ಪ್ರೊ. ಸಿ.ಎಸ್. ಅರಸನಾಳ