ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಯಶಸ್ಸು ಸಾಧಿಸಲಿ: ಸುಧೀರ ಕೊರ್ಲಳ್ಳಿ

KannadaprabhaNewsNetwork |  
Published : Oct 15, 2026, 02:00 AM IST
ಯಲಬುರ್ಗಾ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಬಿಸಿಎ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಜರುಗಿತು. | Kannada Prabha

ಸಾರಾಂಶ

ಯಲಬುರ್ಗಾ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿಎಸ್‌ಸಿ, ಬಿಕಾಂ ಹಾಗೂ ಬಿಸಿಎ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.

ಯಲಬುರ್ಗಾ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಗುಣಮಟ್ಟದ ಶಿಕ್ಷಣ ಪಡೆದು ಜೀವನದಲ್ಲಿ ಯಶಸ್ಸು ಸಾಧಿಸುವುದರೊಂದಿಗೆ ಉನ್ನತ ವ್ಯಕ್ತಿಗಳಾಗಿ ಸಮಾಜದಲ್ಲಿ ಮುನ್ನಡೆಯಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ಸುಧೀರ ಕೊರ್ಲಳ್ಳಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿಎಸ್‌ಸಿ, ಬಿಕಾಂ ಹಾಗೂ ಬಿಸಿಎ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ರಾಜ್ಯದಲ್ಲಿ ಉನ್ನತ ಶಿಕ್ಷಣದ ಪ್ರಗತಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯುವ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಚಾರ್ಯ ಅಶೋಕ ಕೆಂಚರಡ್ಡಿ ಮಾತನಾಡಿ, ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಶಿಕ್ಷಣದಿಂದ ಮಾತ್ರ ನಿಗದಿಪಡಿಸಿಕೊಂಡ ಗುರಿ ತಲುಪಲು ಸಾಧ್ಯವಾಗುವುದರಿಂದ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಜನಪದ ಸಾಹಿತ್ಯ ಉಳಿಸಿ ಬೆಳೆಸಲು ಕರೆ: ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಮಹೆಬೂಬ ಕಿಲ್ಲೇದಾರ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಪರಂಪರೆಯ ಜನಪದ ಸಾಹಿತ್ಯದ ಬೆಳವಣಿಗೆಗೆ ಆದ್ಯತೆ ನೀಡಬೇಕು. ಆಧುನಿಕ ಯುಗದಲ್ಲಿ ನಮ್ಮ ಜನಪದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆ ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಸಿಡಿಸಿ ಸದಸ್ಯರಾದ ಜಯಶ್ರೀ ಕಂದಕೂರು, ಲಕ್ಷ್ಮಿಬಾಯಿ ಮಹಾಂತೇಶ ಛಲವಾದಿ, ಕಳಕಪ್ಪ ಕುರಿ, ಬಸವರಾಜ ಈಳಗೇರ, ರಹಮಾನಸಾಬ ನಾಯಕ, ವಿರೂಪಾಕ್ಷಯ್ಯ ಗಂಧದ್, ವಿಕಾಸ ಉಳ್ಳಾಗಡ್ಡಿ, ಲಿಂಗರಾಜ ಪಾಟೀಲ, ಬಸವರಾಜ ಓಂಟೇಲಿ, ನಿವೃತ್ತ ಪ್ರಾಚಾರ್ಯ ಕೆ.ಎಚ್. ಛತ್ರದ್, ಪ್ರಾಧ್ಯಾಪಕರಾದ ಬಿ. ಶಶಿಕುಮಾರ್, ಶಂಕ್ರಯ್ಯ, ಡಾ. ನಂದಾ, ಡಾ. ಗವಿಸಿದ್ದಪ್ಪ, ಡಾ. ಸುರೇಶಕುಮಾರ, ವಿನೋದ ಸಿದ್ದಣ್ಣನವರ, ವಂಶಿಕೃಷ್ಣ, ಹನಿಮೇಶ, ಮಲ್ಲನಗೌಡ ಮಾಸಗಟ್ಟಿ, ಲಕ್ಷ್ಮಿಬಾಯಿ ಭಾವಿಕಟ್ಟಿ, ನಿಸಾರ ಅಹ್ಮದ್ ಹಾಗೂ ದೇವಪ್ಪ ಉಪಸ್ಥಿತರಿದ್ದರು.

ಸಮಾರಂಭದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಲಿ: ಬೊಮ್ಮಾಯಿ
2ನೇ ದಿನವೂ ಕಬ್ಬು ಬೆಳೆಗಾರರ ಪ್ರತಿಭಟನೆ