ಕನ್ನಡಪ್ರಭ ವಾರ್ತೆ ಗದಗ
ನಗರದಲ್ಲಿ ಉರ್ದು ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ, ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಬೆಂಗಳೂರು ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಗದಗ ಆಶ್ರಯದಲ್ಲಿ 2026–27ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ಮಾತನಾಡಿ, ಪ್ರಸ್ತುತ ವಿಜ್ಞಾನ ಮತ್ತು ತಂತ್ರಜ್ಞಾನದ ಅನ್ವಯ ಸಾಧ್ಯತೆಗಳು ಅಪಾರವಾಗಿವೆ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದರು.ಡಯಟ್ ಉಪನ್ಯಾಸಕ ಜಿ.ಡಿ. ದಾಸರ ಮಾತನಾಡಿ, ಜೀವನದಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ತಾಳ್ಮೆ ಕಳೆದುಕೊಳ್ಳದೆ, ಯಾವುದೇ ಸಂದರ್ಭದಲ್ಲಿ ನಿರಾಶೆಗೆ ಒಳಗಾಗದೆ ನಿರಂತರ ಪ್ರಯತ್ನದ ಮೂಲಕ ಗುರಿ ಸಾಧಿಸಬೇಕು ಎಂದು ತಿಳಿಸಿದರು.
ವಿಜೇತ ವಿದ್ಯಾರ್ಥಿಗಳು:ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಗದಗ ಗ್ರಾಮೀಣ ವ್ಯಾಪ್ತಿಯ ಶಿರುಂಜ ಸರ್ಕಾರಿ ಪ್ರೌಢಶಾಲೆಯ ಭೀಮಾಂಬಿಕ ಮೂಲಿಮನಿ ಪ್ರಥಮ ಸ್ಥಾನ ಪಡೆದರು. ಮುಂಡರಗಿ ತಾಲೂಕಿನ ಕದಾಂಪುರ ಸರ್ಕಾರಿ ಪ್ರೌಢಶಾಲೆಯ ಅಶ್ವಿನಿ ಶಾಲಿ ದ್ವಿತೀಯ ಸ್ಥಾನ ಗಳಿಸಿದರೆ, ರೋಣ ತಾಲೂಕಿನ ಇಟಗಿ ಪಿಎಂಶ್ರೀ ಆದರ್ಶ ವಿದ್ಯಾಲಯದ ಸಂಜನಾ ಹುಲ್ಲೂರು ತೃತೀಯ ಸ್ಥಾನ ಪಡೆದರು.