ಕನ್ನಡಪ್ರಭ ವಾರ್ತೆ ಕಾರವಾರ
ಮಂಗಳವಾರ ಸರ್ಕಾರಿ ನೌಕರರ ಭವನದಲ್ಲಿ ಜನತೆಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಆರ್ಯುವೇದ ಗಿಡಮೂಲಿಕೆ ಸಸಿಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಆಯುರ್ವೇದವು ದೇಹ, ಮನಸ್ಸು ಆತ್ಮದ ನಡುವಿನ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಅನೇಕ ಕಾಯಿಲೆಗಳಿಗೆ ರಾಸಾಯನಿಕ ಔಷಧಿಗಳಿಗಿಂತ ಪ್ರಕೃತಿಯಲ್ಲಿ ಸಿಗುವಂತ ಆರ್ಯವೇದ ಚಿಕಿತ್ಸೆಯ ಮೂಲಕ ದೇಹ ಮತ್ತು ಶರೀರವನ್ನು ಕಾಪಾಡಿಕೊಳ್ಳಲು ಸಾಧ್ಯವಾಗಲಿದ್ದು, ಇದನ್ನು ಇನ್ನಷ್ಷು ಬಲಪಡಿಸಬೇಕಾಗಿದೆ ಎಂದರು.ನಗರಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮಾತನಾಡಿ, ಪ್ರಸ್ತುತ ಇಡೀ ಜಗತ್ತಿನಲ್ಲಿ ಆಯುರ್ವೇದ ಚಿಕಿತ್ಸೆ ಅಳವಡಿಸಿಕೊಳ್ಳಲಾಗುತ್ತಿದ್ದು, ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಆಯುರ್ವೇದ ತಜ್ಞ ವೈದ್ಯ ಡಾ. ಎಂ.ಎಸ್. ಅವಧಾನಿ ಆರ್ಯುವೇದದ ಕುರಿತು ಉಪನ್ಯಾಸ ನೀಡಿ, ಆಯುರ್ವೇದ ಕೇವಲ ಮನುಷ್ಯರಿಗೆ ಸಿಮಿತವಲ್ಲ ಸಮಸ್ತ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಸಂಬಂಧಿಸಿದೆ. ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿಕೊಂಡು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಪ್ರವೀಣ ಜಿ.ಎನ್. ಸ್ವಾಗತಿಸಿದರು, ಡಾ. ಸಂಜೀವ್ ಗಲಗಲಿ ಪ್ರಾಸ್ತಾವಿಕ ಮಾತನಾಡಿದರು. ಎಇಓ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜಿವ್ ಕುಮಾರ್ ನಾಯ್ಕ ಇದ್ದರು.