ಗದಗ: ಜ. 24, 25, 26ರಂದು ಮೂರು ದಿನ ನಡೆಯುವ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕು ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.
ಹೆಸ್ಕಾಂನ ಗದಗ ವಲಯದ ಅಧಿಕಾರಿಗಳು ಮೂರು ದಿನಗಳವರೆಗೆ ನಿರಂತರ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಬೇಕು. ವಿವಿಧ ಇಲಾಖೆಗಳ ವತಿಯಿಂದ ಶ್ರೀಮಠದ ಆವರಣದಲ್ಲಿ ವಿದ್ಯುತ್ ದ್ವೀಪದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಬೇಕು. ಲೋಕೋಪಯೋಗಿ ಇಲಾಖೆ ವತಿಯಿಂದ ಶ್ರೀಮಠದ ಮುಖ್ಯ ರಸ್ತೆಗೆ ಮತ್ತು ಆವರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೆಂಪು ಮಣ್ಣು ಹಾಕಿ, ಹರಡಿಸುವ ವ್ಯವಸ್ಥೆ ಮಾಡಿಸಬೇಕು.
ಈ ಮೂರು ದಿನಗಳಂದು ಸುಮಾರು 15 ಗಾಡಿ ನೀರಿನ ಟ್ಯಾಂಕರ್‌ಗಳನ್ನು ಪೂರೈಕೆ ಮಾಡಬೇಕು ಮತ್ತು ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ವಾಹನ ನಿಲುಗಡೆ ವ್ಯವಸ್ಥೆಯನ್ನು ಅಚ್ಚುಕಟ್ಟುತನದಿಂದ ನಿಭಾಯಿಸಲು ಟ್ರಾಫಿಕ್ ಪೊಲೀಸರನ್ನು ನಿಯೋಜಿಸಬೇಕು ಎಂದರು. ಹುಲಕೋಟಿಯ ಗುರುನಾಥಗೌಡ ಓದುಗೌಡ್ರ, ಅರಹುಣಿಸಿಯ ಎಸ್.ಎಸ್. ಪಾಟೀಲ, ಗದುಗಿನ ವಸಂತಗೌಡ ಪೊಲೀಸಪಾಟೀಲ, ಪ್ರದೀಪ್ ನರಗುಂದ, ಡ.ಸ. ಹಡಗಲಿಯ ವಸಂತ ಮೇಟಿ, ಹೊನ್ನಾಪುರದ ಶಂಕರಗೌಡ ಪಾಟೀಲ, ಲಿಂಗದಾಳದ ಪ್ರದೀಪಗೌಡ ನವಲಗುಂದ, ಹುಲ್ಲೂರಿನ ವೀರಯ್ಯಜ್ಜನವರು ಹಿರೇಮಠ ಇದ್ದರು.ನಟ ಚೇತನ ಅಹಿಂಸಾಗೆ ಸನ್ಮಾನ
ಗದಗ: ಕನ್ನಡ ಚಿತ್ರನಟ, ಹೋರಾಟಗಾರ ಚೇತನ ಅಹಿಂಸಾ ಅವರು ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ ವೇಳೆ ಡಿ.ಸಿ. ಮಿಲ್ ತಳಗೇರಿ ಓಣಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ ಪ್ರತಿಮೆಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಲಿತ ಕಾಲನಿಗೆ ಬಂದಿರುವುದು ನನಗೆ ಸಂತೋಷ ತಂದಿದೆ. ದಲಿತರು ಶಿಕ್ಷಣ ಪಡೆದುಕೊಂಡು ಜಾಗೃತರಾಗಬೇಕು. ಯುವಕರು, ಯುವತಿಯರು ಶಿಕ್ಷಣ ಪಡೆದುಕೊಂಡಾಗ ಎಲ್ಲ ರೀತಿಯ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.ಜೈ ಭೀಮ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಗಣೇಶ ಹುಬ್ಬಳ್ಳಿ, ಮುಖಂಡರಾದ ಅಶೋಕ ಕುಡತಿನ್ನಿ, ರಾಘವೇಂದ್ರ ಪರಾಪೂರ, ವಿನಾಯಕ ಬಳ್ಳಾರಿ, ಚಂದ್ರು ಕುಡತಿನ್ನಿ, ಮರಿಯಪ್ಪ ಪರಾಪೂರ, ಉಪಾಧ್ಯಕ್ಷ ಮಂಜುನಾಥ ತೌಜಲ್, ರಾಜು ಪೆಂಡಾರ, ಬಸವರಾಜ ಬದಾಮಿ, ರಾಷ್ಟ್ರೀನ್ ಜೋಸೆಪ್, ರಾಜೇಶ ಶೆಟ್ಟರ್, ಇಮಾಮಹುಸೇನ ಕುನ್ನಿಬಾವಿ, ಸಮೀರಅಹ್ಮದ ಕುನ್ನಿಬಾವಿ, ಪ್ರೇಮಕುಮಾರ ಹುಬ್ಬಳ್ಳಿ, ಮಂಜುನಾಥ ಸುಂಕದ, ಶ್ರೀಕಾಂತ ಹಲವಾಗಲಿ, ರಮೇಶ ರಾಲದೊಡ್ಡಿ, ಹೇಮಂತ ಹುಬ್ಬಳ್ಳಿ, ವಿರುಪಾಕ್ಷ ಗೌಡರ, ಗಿರೀಶ ಚಳಗೇರಿ, ರಫೀಕ ನವಲಗುಂದ, ಫರದೀನ ಕಾಟಾಪುರ, ಮಲ್ಲೇಶ ಮೇಳದಾಳಮಠ ಮುಂತಾದವರು ಇದ್ದರು.