ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

KannadaprabhaNewsNetwork |  
Published : Mar 15, 2026, 03:00 AM IST
(ಫೋಟೊ14ಬಿಕೆಟಿ1 ಮುಖ್ಯಮಂತ್ರಿ  ಸಿದ್ದರಾಮಯ್ಯನವರು ಇಂದು ಬಾಗಲಕೋಟೆಯ ನವನಗರ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮ  ದವರೊಂದಿಗೆ ಮಾತನಾಡಿದರು) | Kannada Prabha

ಸಾರಾಂಶ

ಎಚ್.ವೈ. ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಎಚ್.ವೈ. ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿಲ್ಲ ಎಂಬ ವಿಪಕ್ಷ ನಾಯಕರು ಆರೋಪಕ್ಕೆ ಪ್ರತಿಕ್ರಿಯಿಸಿ, ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣೆ ಕಾರ್ಯವನ್ನು ಇಂದಿನಿಂದ ಪ್ರಾರಂಭಿಸಲಾಗುತ್ತಿದ್ದು, 3-4 ವರ್ಷಗಳ ಅವಧಿಯಲ್ಲಿ ಸಂತ್ರಸ್ತರೆಲ್ಲರಿಗೂ ಪರಿಹಾರ ವಿತರಣೆ ಮಾಡಲಾಗುವುದು ಎಂದ ಅವರು, ಇ ಸ್ವತ್ತು ರಾಜ್ಯದಲ್ಲಿ ಸಮಸ್ಯೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದನ್ನು ಕೂಡಲೇ ಸರಿಪಡಿಸಲಾಗುವುದು ಎಂದರು.

ವೈದ್ಯಕೀಯ ಕಾಲೇಜು ಬಿಜೆಪಿ ಏಕೆ ಸ್ಥಾಪಿಸಲಿಲ್ಲ?:

ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು ಸಮಾರಂಭ ಹಾಗೂ ಛತ್ರಪತಿ ಶಿವಾಜಿ ಹಾಗೂ ಬಸವಣ್ಣನವರ ಮೂರ್ತಿಗೆ ತಲಾ ₹40 ಲಕ್ಷ ಬಿಡುಗಡೆ ಮಾಡಲು ಸೂಚಿಸಿರುವುದು ಚುನಾವಣೆ ಗಿಮಿಕ್ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜು ಏಕೆ ಮಾಡಲಿಲ್ಲ? ಇದು ಗಿಮಿಕ್ ಹೇಗಾಗುತ್ತದೆ? ಈಗಾಗಲೇ ಟೆಂಡರ್ ಕರೆದು ಏಜೆನ್ಸಿ ನಿಗದಿಯಾಗಿದೆ. ಕೆಲಸ ಪ್ರಾರಂಭವಾಗಬೇಕಿದ್ದು ಅದಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ ಎಂದು ಹೇಳಿದರು.

ಹೈಕಮಾಂಡ್ ತೀರ್ಮಾನ:ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದ ಅವರು, ಎಚ್.ವೈ. ಮೇಟಿ ಕುಟುಂಬದವರನ್ನೇ ಆಯ್ಕೆ ಮಾಡಲಾಗುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರೂ ಒಬ್ಬ ಆಕಾಂಕ್ಷಿ ಎಂದಷ್ಟೇ ಹೇಳಿದರು.

ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು. ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡಲಿದೆ. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ ಎಂದರು.

ಸಿಲಿಂಡರ್ ಪೂರೈಕೆ ಕೇಂದ್ರದ ಜವಾಬ್ದಾರಿ: ಸಿಲಿಂಡರ್ ಸರಬರಾಜು ಸುಗಮಗೊಳಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಕೇಂದ್ರ ಸರ್ಕಾರ ಕೊಟ್ಟರೆ ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆ. ಈಗಾಗಲೇ ಆಹಾರ ಸಚಿವರು ಎರಡು ಸಭೆ ನಡೆಸಿದ್ದು, ಕೇಂದ್ರ ಸಚಿವರಿಗೆ ಪತ್ರವನ್ನೂ ಬರೆಯಲಾಗಿದೆ. ಸಿಲಿಂಡರ್ ಅಭಾವ ಆಗದಂತೆ ಎಚ್ಚರಿಕೆ ವಹಿಸಲು ಕೋರಲಾಗಿದೆ ಎಂದು ತಿಳಿಸಿದರು.

ಒಳಮೀಸಲಾತಿ ಕುರಿತು ಮಾ. 27ರಂದು ಸಭೆ ಕರೆಯಲಾಗಿದೆ. ಅಂದು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃದ್ಧೆಗೆ ಸಂಕೀರ್ಣ ಸೊಂಟದ ಪುನರ್ನಿರ್ಮಾಣ ಶಸ್ತ್ರಚಿಕಿತ್ಸೆ: ವೃದ್ಧೆ ಚೇತರಿಕೆ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸ್ನಾತಕೋತ್ತರ ವಿದ್ಯಾರ್ಥಿ ಸಾವು