ಐದು ವರ್ಷ ತಂದೆಯೇ ರಾಜ್ಯ ಮುುನ್ನಡೆಸಲಿ : ಯತೀಂದ್ರ ಸಿದ್ದರಾಮಯ್ಯ

KannadaprabhaNewsNetwork |  
Published : Apr 17, 2026, 02:45 AM IST
Yathindra Siddaramaiah

ಸಾರಾಂಶ

ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸಹಜ. ರಾಜ್ಯದ ಜನರಿಗೆ ಒಳ್ಳೆಯದಾಗುವುದೇ ಮುಖ್ಯ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು

 ಬೈಲಹೊಂಗಲ :  ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸಹಜ. ರಾಜ್ಯದ ಜನರಿಗೆ ಒಳ್ಳೆಯದಾಗುವುದೇ ಮುಖ್ಯ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ತಂದೆ ಮುಂದಿನ ಐದು ವರ್ಷ ರಾಜ್ಯವನ್ನು ಮುನ್ನಡೆಸಲಿ ಎಂಬುದು ನನ್ನ ವೈಯಕ್ತಿಕ ಆಶಯ ಮಾತ್ರ. ಐದು ವರ್ಷ ಆಡಳಿತದ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಎಲ್ಲ ಪಕ್ಷಗಳಲ್ಲಿಯೂ ಸಿಎಂ ಆಕಾಂಕ್ಷಿಗಳು ಇರುವುದು ಸಾಮಾನ್ಯ

136 ಶಾಸಕರಿದ್ದರೂ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಸರ್ಕಾರಗಳಲ್ಲಿಯೂ ಇಂತಹ ಚರ್ಚೆಗಳು ನಡೆಯುತ್ತವೆ. ಬಿಜೆಪಿ ಸರ್ಕಾರದಲ್ಲಿಯೂ ಮುಖ್ಯಮಂತ್ರಿಗಳ ಬದಲಾವಣೆ ನಡೆದಿತ್ತು. ಎಲ್ಲ ಪಕ್ಷಗಳಲ್ಲಿಯೂ ಸಿಎಂ ಆಕಾಂಕ್ಷಿಗಳು ಇರುವುದು ಸಾಮಾನ್ಯ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಗೊಂದಲ ಬಗೆಹರಿಸುವಂತೆ ಒತ್ತಾಯಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೊಂದಲವಾಗದಂತೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಸರ್ಕಾರದ ಅರ್ಧಾವಧಿಯ ಬಳಿಕ ಪುನರ್‌ರಚನೆ ಆಗುವುದು ವಾಡಿಕೆ. ಶಾಸಕರು ಕೇಳಿಕೊಂಡಿದ್ದು, ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಸಚಿವ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ

ತಮ್ಮನ್ನು ಸಚಿವರನ್ನಾಗಿ ಮಾಡುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ನಮ್ಮ ತಂದೆಯೇ ಮುಖ್ಯಮಂತ್ರಿ ಇರುವವರೆಗೆ ಸಚಿವ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಹಿರಿಯರು ಹಾಗೂ ಅನುಭವಿಗಳಿಗೆ ಅವಕಾಶ ಸಿಗಬೇಕು. ಹೊಸ ಶಾಸಕರು ಸಚಿವ ಸ್ಥಾನ ಕೇಳುವುದು ಸಹಜ. ಯಾವುದೇ ಸಚಿವ ಸಂಪುಟದಲ್ಲಿ ಹೊಸಬರು ಹಾಗೂ ಅನುಭವಿಗಳಿರುತ್ತಾರೆ ಎಂದರು.

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆ ಕುರಿತು ಮಾತನಾಡಿ, ಎರಡೂ ಕಡೆ ಉತ್ತಮ ವಾತಾವರಣ ಇದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಶಾಸಕ ವಿನಯ ಕುಲಕರ್ಣಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಕೋರ್ಟ್ ತಪ್ಪಿತಸ್ಥ ಎಂದು ಹೇಳಿದೆ. ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದು, ಕಾನೂನು ಹೋರಾಟ ಮುಂದುವರಿಯಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಅಕ್ಕಮಹಾದೇವಿ
ಭಾಗ್ಯವಂತಿ ಶಿಕ್ಷಣ ಸಂಸ್ಥೆಗೆ ಒಲಿದ ಹ್ಯಾಟ್ರಿಕ್!