ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ನ್ಯೂ ವಿಷನ್ ಶಾಲೆಯ ಮುಖ್ಯಸ್ಥೆ ಪರಿಮಳ
ಶ್ರೀ ಕೃಷ್ಣನ ಜೀವನಾದರ್ಶಗಳು ಪ್ರತಿಯೊಬ್ಬರಿಗೂ ಮಾದರಿಯಾಗಬೇಕು. ಭಗವದ್ಗೀತೆಯಲ್ಲಿ ಅವರು ತಿಳಿಸಿಕೊಟ್ಟಿರುವ ಜೀವನ ಮೌಲ್ಯಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಮಹಾಭಾರತದ ಮೂಲಕವೂ ಸಮಾಜಕ್ಕೆ ಮಹತ್ವದ ವಿಚಾರಗಳನ್ನು ನೀಡಿದ್ದಾರೆ ಎಂದು ನ್ಯೂ ವಿಷನ್ ಶಾಲೆಯ ಮುಖ್ಯಸ್ಥೆ ಪರಿಮಳ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ಕೃಷ್ಣನ ಜೀವನ ಮತ್ತು ಬೋಧನೆಗಳು ಮಾನವ ಸಮಾಜಕ್ಕೆ ದಾರಿದೀಪವಾಗಿವೆ. ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣನು ಮನುಷ್ಯನ ಕರ್ತವ್ಯ, ಧರ್ಮ, ನೀತಿ ಹಾಗೂ ಜೀವನದ ಸವಾಲುಗಳನ್ನು ಎದುರಿಸುವ ಕುರಿತು ಅಮೂಲ್ಯ ಸಂದೇಶಗಳನ್ನು ನೀಡಿದ್ದಾರೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಸಮಾಜವನ್ನು ತಿದ್ದಿ ತೀಡಿ, ಜನರಲ್ಲಿ ಉತ್ತಮ ಚಿಂತನೆ ಮತ್ತು ಮೌಲ್ಯಗಳನ್ನು ಬೆಳೆಸಲು ಶ್ರಮಿಸಿದ ಮಹನೀಯರನ್ನು ನಾವು ಎಂದಿಗೂ ಮರೆಯಬಾರದು. ಅವರ ಕೊಡುಗೆಗಳನ್ನು ಸ್ಮರಿಸುವುದು ಮಾತ್ರವಲ್ಲದೆ, ಅವರ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದರು.
04ಜಿಯುಡಿ1: ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ನ್ಯೂ ವಿಷನ್ ಶಾಲೆಯ ಮುಖ್ಯಸ್ಥೆ ಪರಿಮಳ ಮಾತನಾಡಿದರು.