ಮಹಾತ್ಮ ಗಾಂಧೀಜಿಯವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಬೇಕು ಅವರ ಪ್ರಾಮಾಣಿಕತೆ ದೇಶಾಭಿಮಾನ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ನಾಯಕತ್ವದಲ್ಲಿ ಶಾಂತಿಯುತವಾಗಿ ದೇಶಕ್ಕೆ ಸ್ವಾತಂತ್ರ ದೊರಕಿತು ಮಾಜಿ ಪ್ರಧಾನಿಗಳು ಹಸಿರು ಕ್ರಾಂತಿಯ ಹರಿಕಾರರಾದ ಲಾಲ್ ಬಹುದ್ದೂರ್ ಶಾಸ್ತ್ರಿಯವರು ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯೊಂದಿಗೆ ತಮ್ಮ ಅಧಿಕಾರ ಅವಧಿಯಲ್ಲಿ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವರ ಆದರ್ಶಗಳು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವ ಸಿದ್ಧಾಂತಗಳು ಅವರ ಸ್ವಾಭಿಮಾನಿ ವ್ಯಕ್ತಿತ್ವ ದೇಶದ ಪ್ರತಿಯೊಬ್ಬ ಪ್ರಜೆಗೂ ಪ್ರೇರಣೆಯಾಗಲಿ ಎಂದು ನುಗ್ಗೇಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಹುಲಿಕೆರೆ ಸಂಪತ್ ಕುಮಾರ್ ಹೇಳಿದರು.ಹೋಬಳಿಯ ಹುಲಿಕೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಹಾತ್ಮ ಗಾಂಧೀಜಿಯವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಬೇಕು ಅವರ ಪ್ರಾಮಾಣಿಕತೆ ದೇಶಾಭಿಮಾನ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ನಾಯಕತ್ವದಲ್ಲಿ ಶಾಂತಿಯುತವಾಗಿ ದೇಶಕ್ಕೆ ಸ್ವಾತಂತ್ರ ದೊರಕಿತು ಮಾಜಿ ಪ್ರಧಾನಿಗಳು ಹಸಿರು ಕ್ರಾಂತಿಯ ಹರಿಕಾರರಾದ ಲಾಲ್ ಬಹುದ್ದೂರ್ ಶಾಸ್ತ್ರಿಯವರು ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯೊಂದಿಗೆ ತಮ್ಮ ಅಧಿಕಾರ ಅವಧಿಯಲ್ಲಿ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವರ ಆದರ್ಶಗಳು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ತಿಳಿಸಿದರು. ಶಾಲಾ ಮಕ್ಕಳಿಂದ ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆಯ ಕುರಿತು ಏಕಪಾತ್ರ ಅಭಿನಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಬಸವರಾಜ್, ಎಸ್‌ಡಿಎಂಸಿ ಅಧ್ಯಕ್ಷೆ ಶೀಲ ರಂಗಾಚಾರಿ, ಅಂಗನವಾಡಿ ಶಿಕ್ಷಕಿ ಯಶೋಧ, ಅಡುಗೆ ಸಹಾಯಕಿ ಲೀಲಾವತಿ, ಅಂಗನವಾಡಿ ಅಡುಗೆ ಸಹಾಯಕಿ ವನಜಾಕ್ಷಿ ಸೇರಿದಂತೆ ಪೋಷಕರು ಗ್ರಾಮಸ್ಥರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.