ಕನ್ನಡ ಅನುಷ್ಠಾನ ಪರಿಣಾಮಕಾರಿಯಾಗಲಿ: ಡಿಸಿ ಶ್ರೀಧರ್

KannadaprabhaNewsNetwork |  
Published : Apr 11, 2026, 02:15 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್‌ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡ ಭಾಷಾ ಅನುಷ್ಠಾನಗೊಳಿಸಲು ಪ್ರತಿ ತಾಲೂಕಿನಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿ ಸಭೆ ಕರೆದು ತಾಲೂಕಿನಾದ್ಯಂತ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು.

ಗದಗ: ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಠಾನ ಪರಿಣಾಮಕಾರಿಯಾಗಬೇಕು. ಪ್ರತಿ ತಿಂಗಳು 5ನೇ ತಾರಿಖಿನೊಳಗಾಗಿ ಎಲ್ಲ ಇಲಾಖೆಯುವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕನ್ನಡ ಅನುಷ್ಠಾನ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು ಅಥವಾ ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳು ಕನ್ನಡ ಭಾಷೆಯಲ್ಲಿಯೇ ಪತ್ರ ವ್ಯವಹಾರ ಮಾಡಬೇಕು. ಪ್ರತಿ ತಿಂಗಳು ಜರುಗುವ ಕೆಡಿಪಿ ಸಭೆ ಅಜೆಂಡಾದಲ್ಲಿ ಕನ್ನಡ ಅನುಷ್ಠಾನದ ವರದಿ ಬಗ್ಗೆಯೂ ಚರ್ಚೆಯಾಗಬೇಕು ಎಂದರು.ಕನ್ನಡ ಭಾಷಾ ಅನುಷ್ಠಾನಗೊಳಿಸಲು ಪ್ರತಿ ತಾಲೂಕಿನಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿ ಸಭೆ ಕರೆದು ತಾಲೂಕಿನಾದ್ಯಂತ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು. ಬೇರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಿದ ಬ್ಯಾಂಕ್ ನೌಕರರಿಗೆ ಕನ್ನಡ ಭಾಷಾ ತರಬೇತಿಯನ್ನು ಹಮ್ಮಿಕೊಂಡು ಅವರು ಕಡ್ಡಾಯವಾಗಿ ತರಬೇತಿಗೆ ಹಾಜರಾಗುವ ಹಾಗೆ ನೋಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾದಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಹೋಟೆಲ್‌ಗಳು, ಸಾರಿಗೆ ವಿಭಾಗಗಳಲ್ಲಿ ಕನ್ನಡ ಭಾಷೆಯ ನಾಮಫಲಕಗಳ ಪ್ರದರ್ಶನದ ಕುರಿತು ಚರ್ಚಿಸಲಾಯಿತು.ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಕಿಶೋರ ಬಾಬು, ಕನ್ನಡ ಜಾಗೃತಿ ಸಮಿತಿ ಅಧಿಕಾರೇತರ ಸದಸ್ಯರಾದ ಅಶೋಕ ಬರಗುಂಡಿ, ರಾಜಶೇಖರ ದಾನರೆಡ್ಡಿ, ಮುತ್ತು ಬಿಳಿಯಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ.ಎಂ. ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖರ್ಗೆ ಹೇಳಿಕೆ ವಿರುದ್ಧ ಹಳಿಯಾಳ ಠಾಣೆಯಲ್ಲಿ ಬಿಜೆಪಿ ದೂರು
ನ್ಯಾಷನಲ್ ಪದವಿಪೂರ್ವ ಕಾಲೇಜಿಗೆ ಶೇ. 95 ಫಲಿತಾಂಶ