ಕಾಯಕ ಯೋಗಿ ಬಸವಣ್ಣವರ ಜಯಂತಿ ಅರ್ಥಪೂರ್ಣವಾಗಿರಲಿ- ಪಾಟೀಲ

KannadaprabhaNewsNetwork |  
Published : Apr 29, 2025, 12:45 AM IST
(28ಎನ್.ಆರ್.ಡಿ5 ಸಿ.ಎಸ್.ಪಾಟೀಲವರ ಪೋಟೋ.)  | Kannada Prabha

ಸಾರಾಂಶ

ಸಮಾಜದಲ್ಲಿ ಪ್ರತಿಯೊಬ್ಬ ಮನುಷ್ಯ ಕಾಯಕ ಮಾಡಿದರೆ ಮಾತ್ರ ಶ್ರೇಷ್ಠ ವ್ಯಕ್ತಿಯಾಗಲು ಸಾಧ್ಯವೆಂದು ಸಾರಿದ ವಿಶ್ವಗುರು ಬಸವಣ್ಣವರ ಜಯಂತಿಯನ್ನು ಸರ್ಕಾರ ರಜೆ ನೀಡಿದೆ. ಅಂದು ರಜೆ ರದ್ದು ಮಾಡಿ ಎಲ್ಲಾ ಸರ್ಕಾರಿ ನೌಕರರಿಗೆ ಕಾಯಕ ಮಾಡಲು ಅನುಕೂಲ ಮಾಡಿ ಕೊಡಬೇಕೆಂದು ಮಾಜಿ ಶಾಸಕರ ಪುತ್ರ ಹಾಗೂ ಲಿಂಗಾಯತ ಸಮಾಜದ ಮುಖಂಡ ಸಿ.ಎಸ್. ಪಾಟೀಲ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನರಗುಂದ: ಸಮಾಜದಲ್ಲಿ ಪ್ರತಿಯೊಬ್ಬ ಮನುಷ್ಯ ಕಾಯಕ ಮಾಡಿದರೆ ಮಾತ್ರ ಶ್ರೇಷ್ಠ ವ್ಯಕ್ತಿಯಾಗಲು ಸಾಧ್ಯವೆಂದು ಸಾರಿದ ವಿಶ್ವಗುರು ಬಸವಣ್ಣವರ ಜಯಂತಿಯನ್ನು ಸರ್ಕಾರ ರಜೆ ನೀಡಿದೆ. ಅಂದು ರಜೆ ರದ್ದು ಮಾಡಿ ಎಲ್ಲಾ ಸರ್ಕಾರಿ ನೌಕರರಿಗೆ ಕಾಯಕ ಮಾಡಲು ಅನುಕೂಲ ಮಾಡಿ ಕೊಡಬೇಕೆಂದು ಮಾಜಿ ಶಾಸಕರ ಪುತ್ರ ಹಾಗೂ ಲಿಂಗಾಯತ ಸಮಾಜದ ಮುಖಂಡ ಸಿ.ಎಸ್. ಪಾಟೀಲ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಅವರು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. 12ನೇ ಶತಮಾನದ ಬಹು ದೊಡ್ಡ ಸಮಾಜ ಸುಧಾರಕರು ಬಸವಣ್ಣನವರು. ಮೇಲು ಕೀಳು, ಜಾತಿ ಧರ್ಮ, ಮಡಿಮೈಲಿಗೆ ತುಂಬಿದ್ದ ಸಮಯದಲ್ಲಿ ನೊಂದವರ, ದೀನದಲಿತರ ಉದ್ಧಾರಕ್ಕೆ ನಿಂತವರು. ಕೆಳವರ್ಗದವರನ್ನು ಮೇಲ್ವರ್ಗದವರು ಅತ್ಯಂತ ಹೀನಾಯವಾಗಿ ಕಾಣುತಿದ್ದ ಆ ಸಮಾಜದ ಅನ್ಯಾಯವನ್ನು ಹೋಗಲಾಡಿಸಲೆಂದೇ ಬಸವಣ್ಣನವರ ಕಲ್ಯಾಣದಲ್ಲಿ ಕ್ರಾಂತಿಯ ಬೀಜ ಬಿತ್ತಿದರು. ಬಿಜ್ಜಳನ ವಿರುದ್ಧ, ಅಂಧಶ್ರದ್ಧೆಯ ವಿರುದ್ಧ ಸಿಡಿದು ನಿಂತು ಅನುಭವ ಮಂಟಪ ನಿರ್ಮಿಸಿದರು. ಅದರಡಿ ಎಲ್ಲ ವರ್ಗದವರನ್ನು ಬರ ಮಾಡಿಕೊಂಡರು. ಕಾಯಕವೇ ಕೈಲಾಸ ಎಂದು ಸಾರಿ, ಪ್ರತಿಯೊಬ್ಬರಲ್ಲೂ ದುಡಿದು ತಿನ್ನುವ ಹುಮ್ಮಸ್ಸು ತುಂಬಿದರು. ''''''''ವಸುದೈವ ಕುಟುಂಬಕಂ'''''''' ಎನ್ನುತ್ತಾ ಎಲ್ಲರಲ್ಲೂ ಸಹೋದರತ್ವದ ಸಂದೇಶ ಸಾರಿದರು.

ಮನುಕುಲಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರು ಯಾವುದೇ ಒಂದು ಜಾತಿ,ಧರ್ಮಕ್ಕೆ ಸೀಮಿತವಲ್ಲ. ಅವರು 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ಮಹಾನ್ ಮಾನವತಾವಾದಿ‌ ಎಂದರು.

ಜಾತ್ಯತೀತ ತತ್ವವನ್ನು ನಾವೆಲ್ಲ ನಿಜ ಅರ್ಥದಲ್ಲಿ ಪಾಲಿಸಬೇಕು. ಆ ಮೂಲಕ ಸಾಮಾಜಿಕ ಸಾಮರಸ್ಯ, ಸೌಹಾರ್ದತೆ ಕಾಪಾಡಲು ಸಾಧ್ಯ. ನಾಡಿನ, ದೇಶದ ಮಹಾನ ಚೇತನಗಳ ಜಯಂತಿಗಳ ಆಚರಣೆಗಳು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಪೂರಕ ಎಂದರು. ಕಾಯಕವೇ ಕೈಲಾಸ ಎಂದು ಸಾರಿದ ಬಸವಣ್ಣನವರ ಜಯಂತಿ ದಿನ ಸರ್ಕಾರ ರಜೆ ರದ್ದು ಪಡಿಸಿ ಬಸವ ಜಯಂತಿ ಆಚರಿಸಿ ಎಂದಿನಂತೆ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಣೆ ಮೂಲಕ ಬಸವ ಜಯಂತಿಯನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಬೇಕೆಂದು ಮನವಿ ಮಾಡಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ