ಗೋಣಿಬೀಡಿನ ಹೊಯ್ಸಳ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಕನ್ನಡಪ್ರಭ ವಾರ್ತೆ, ಮೂಡಿಗೆರೆನಮ್ಮ ವ್ಯವಹಾರಕ್ಕೆ ಅನೇಕ ಭಾಷೆ ಬಳಸಬಹುದು. ಆದರೆ, ನಮ್ಮ ಹೃದಯಕ್ಕೆ ಸಂಸ್ಕಾರ ನೀಡಿದ ಕನ್ನಡ ಮಾತೃ ಭಾಷೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದ್ದಾರೆ.ತಾಲೂಕಿನ ಗೋಣಿಬೀಡಿನಲ್ಲಿರುವ ಹೊಯ್ಸಳ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾ ಹಾಗೂ ತಾಲೂಕು ಸಿರಿಗನ್ನಡ ವೇದಿಕೆ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ್ದ ನುಡಿ ನಿತ್ಯೋತ್ಸವ ಹಾಗೂ ಕನ್ನಡ ಗೀತ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡಕ್ಕೆ 2500 ವರ್ಷಗಳ ಪ್ರಾಚೀನ ಇತಿಹಾಸವಿದೆ. ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆ ಎಂದರು.
ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಅಭಿನಂದನೆ ಸ್ವೀಕರಿಸಿ ಮಾತನಾಡಿ, ನಮ್ಮ ಮನಸ್ಸಿನಲ್ಲಿ ಕನ್ನಡ ಉಳಿಸಿಕೊಳ್ಳಲು ಇತರೆ ಭಾಷೆಗಳನ್ನು ಗೌರವಿಸುವ ರೂಢಿ ಬೆಳೆಸಿಕೊಂಡಾಗ ಮಾತ್ರ ಕನ್ನಡ ಭಾಷೆ ಅಸ್ಮಿತೆ ಉಳಿಯುತ್ತದೆ ಎಂದು ಹೇಳಿದರು.ಸಿರಿಗನ್ನಡ ವೇದಿಕೆ ಪ್ರಧಾನ ಕಾರ್ಯದರ್ಶಿ ಡಾ.ಮೋಹನ್ ರಾಜಣ್ಣ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಬೇಕಾದರೆ ಕನ್ನಡ ಸಾಹಿತ್ಯವನ್ನು ಪ್ರತಿಯೊಬ್ಬ ಕನ್ನಡಿಗನೂ ಓದಬೇಕು. ಕಲೆಗಳಿಗೆ ಪ್ರೋತ್ಸಾಹ ನೀಡಬೇಕು. ಈ ಮೂರು ಕೆಲಸಗಳನ್ನು ಮಾಡಿದಾಗ ಮಾತ್ರವೇ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದರು.ಚಲನಚಿತ್ರ ನಟ ಧರ್ಮೇಂದ್ರ ಅವರಿಗೆ ಹೊಯ್ಸಳ ಪುಷ್ಪ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್ ಕರ್ನಾಟಕದ ಹಿರಿಮೆ ಹಾಗೂ ಕನ್ನಡ ನಮ್ಮ ಹೆಮ್ಮೆ ಕುರಿತು ಉಪನ್ಯಾಸ ನೀಡಿದರು.ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್.ಪ್ರಕಾಶ್, ತಾಲೂಕು ಅಧ್ಯಕ್ಷ ಎಂ.ಆರ್. ಪೂರ್ಣೇಶ್, ಸಾಹಿತಿ ಡಿ.ಎಂ. ಮಂಜುನಾಥ್‌ಸ್ವಾಮಿ, ಜೇಸಿಐ ಗೋಣಿಬೀಡು ಹೊಯ್ಸಳ ಅಧ್ಯಕ್ಷ ಎಚ್.ಜಿ.ಆದರ್ಶ್, ಕಾರ್ಯದರ್ಶಿ ಬಿ.ಎಂ.ಜಗತ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷೆ ಉಮಾ ಮೋಹನ್, ಟ್ರಸ್ಟಿ ರಾಜಣ್ಣ, ಬಕ್ಕಿ ಮಂಜುನಾಥ್, ಶಿಕ್ಷಕಿ ಯಾಸ್ಮಿನ್ ಸುಲ್ತಾನ್, ಹೊಯ್ಸಳ ಪ್ರೌಢಶಾಲೆ ಶಿಕ್ಷಕರಾದ ಜಗನ್ನಾಥ್, ವಾಣಿ ಚಂದ್ರಶೇಖರ್, ಗಂಗಾಧರಪ್ಪ, ಶಿವಕುಮಾರ್, ಹರೀಶ್, ಮಂಜುನಾಥ್, ಆಶಿಕಾ ಉಪಸ್ಥಿತರಿದ್ದರು. 17 ಕೆಸಿಕೆಎಂ 5ಮೂಡಿಗೆರೆ ತಾಲ್ಲೂಕಿನಲ್ಲಿ ಗೋಣಿಬೀಡಿನ ಹೊಯ್ಸಳ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ್ದ ನುಡಿ ನಿತ್ಯೋತ್ಸವ ಹಾಗೂ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಎಂ.ಸಿ. ಶಿವಾನಂದಸ್ವಾಮಿ ಉದ್ಘಾಟಿಸಿದರು. ಮಡ್ಡಿಕೆರೆ ಗೋಪಾಲ್, ಡಾ.ಮೋಹನ್ ರಾಜಣ್ಣ, ಉಮಾ ಮೋಹನ್ ಇದ್ದರು.