ಸಾಧಕರ ಜೀವನ ಯೋಶೋಗಾಥೆ ಪ್ರೇರಣೆಯಾಗಲಿ: ಎಸ್‌.ಎನ್.ರುದ್ರೇಶ್

KannadaprabhaNewsNetwork |  
Published : Jun 04, 2025, 02:11 AM IST
ಬಳ್ಳಾರಿಯ ಪತ್ರಿಕಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಡಿದ್ದ ಪ್ರತಿಭಾಪುರಸ್ಕಾರ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ-ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.  | Kannada Prabha

ಸಾರಾಂಶ

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳಲು ದೊರೆಯುವ ಸಣ್ಣ ಅವಕಾಶವನ್ನೂ ಮೆಟ್ಟಿಲು ಮಾಡಿಕೊಂಡು ಮುಂದಡಿ ಇಡಬೇಕು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಬಳ್ಳಾರಿ ಜಿಲ್ಲಾ ಘಟಕದಿಂದ ಪ್ರತಿಭಾ ಪುರಸ್ಕಾರದಲ್ಲಿ ಕುಲಸಚಿವಕನ್ನಡಪ್ರಭ ವಾರ್ತೆ ಬಳ್ಳಾರಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಬಳ್ಳಾರಿ ಜಿಲ್ಲಾ ಘಟಕ ವತಿಯಿಂದ ನಗರದ ಪತ್ರಿಕಾಭವನದಲ್ಲಿ 2025ನೇ ಸಾಲಿನ ಎಸ್ಸೆಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್‌.ಎನ್. ರುದ್ರೇಶ್, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳಲು ದೊರೆಯುವ ಸಣ್ಣ ಅವಕಾಶವನ್ನೂ ಮೆಟ್ಟಿಲು ಮಾಡಿಕೊಂಡು ಮುಂದಡಿ ಇಡಬೇಕು ಎಂದು ಸಲಹೆ ನೀಡಿದರು.

ಇದು ಪೈಪೋಟಿ ಯುಗ. ಸತತ ಅಧ್ಯಯನವಿಲ್ಲದೆ ಯಾವ ಸಾಧನೆ ಮಾಡಲು ಸಾಧ್ಯವಿಲ್ಲ. ಓದಿನ ಜೊತೆಗೆ ಪ್ರಚಲಿತ ವಿದ್ಯಮಾನಗಳ ಕಡೆ ಗಮನ ನೀಡಬೇಕು. ಡಾ. ಬಿ.ಆರ್‌. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಸತತ ಅಧ್ಯಯನ ಹಾಗೂ ಅವಿರತ ಶ್ರಮದಿಂದಾಗಿಯೇ ಸಾಧನೆ ಮಾಡಿದ್ದಾರೆ. ಸಾಧಕರ ಜೀವನ ಹಾಗೂ ಅವರ ಯಶೋಗಾಥೆಗಳು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ವಿದ್ಯಾರ್ಥಿ ದಿಸೆಯಲ್ಲಿಯೇ ಸಹಕಾರ ಮನೋಭಾವ ಹಾಗೂ ಸೇವಾಭಾವ ಮೈಗೂಡಿಸಿಕೊಳ್ಳಬೇಕು ಎಂದರಲ್ಲದೆ, ಪತ್ರಕರ್ತರ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುವ ಕಾರ್ಯ ಕೈಗೊಂಡಿರುವ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳು ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜೆ.ಟಿ. ಫೌಂಡೇಷನ್ ಮುಖ್ಯಸ್ಥ ಜೋಳದರಾಶಿ ತಿಮ್ಮಪ್ಪ ಮಾತನಾಡಿ, ವಿದ್ಯೆ ಎಂದರೆ ಜ್ಞಾನದ ಪ್ರತಿರೂಪ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮತ್ತಷ್ಟೂ ಪ್ರಗತಿ ಕಂಡುಕೊಳ್ಳಬೇಕು. ಪೋಷಕರ ಕನಸು ನನಸಾಗಿಸುವ ದಿಸೆಯಲ್ಲಿ ಪ್ರಯತ್ನಿಸಿ, ಸಫಲವಾಗಬೇಕು ಎಂದು ಆಶಿಸಿದರು. ಜೆ.ಟಿ. ಫೌಂಡೇಷನ್ ವತಿಯಿಂದ ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರ ಜೊತೆಗೆ ಪೆನ್ನು, ಪ್ಯಾಡ್‌ಗಳನ್ನು ಉಚಿತವಾಗಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ವೀರಭದ್ರಗೌಡ ಮಾತನಾಡಿ, ನಮ್ಮ ಸಂಘದ ಸದಸ್ಯರ ಮಕ್ಕಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪತ್ರಕರ್ತರ ಸಂಘದ ಕೆ.ಮಲ್ಲಯ್ಯ ಉಪಸ್ಥಿತರಿದ್ದರು. ಸದಸ್ಯ ವೆಂಕೋಬಿ ಸಂಗನಕಲ್ಲು ಕಾರ್ಯಕ್ರಮದಲ್ಲಿ ನಿರ್ವಹಿಸಿದರು. ವಿದ್ಯಾರ್ಥಿಗಳಾದ ಪಿ.ದಿವ್ಯಾಶ್ರೀ, ಕೆ.ಎಂ. ಕಾಂಚನಾ, ನಾಗಾಂಬಿಕ ಎಚ್.ಎಂ., ಪಿ.ಅಸ್ಮಿತ ಚೌಧರಿ, ಸಂಡೂರಿನ ಕಾರ್ತಿಕ್ ಬಿ, ಸಂಜನಾ ಬಿ.ಬಿ., ಬಿ.ಹೇಮಂತಕುಮಾರ್, ಎಂ.ಯಶವಂತಕುಮಾರ್, ಕೆ.ಸಹನಾ ತೆಕ್ಕಲಕೋಟೆ ಅವರನ್ನು ಗೌರವಿಸಲಾಯಿತು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್