ಮಡಿಕೇರಿ : ಗುಡ್ಡೆಮನೆ ಅಪ್ಪಯ್ಯ ಗೌಡರು ದೇಶದ ಸ್ವಾತಂತ್ರ‍್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ಹೋರಾಟಗಾರರಾಗಿದ್ದಾರೆ. ವರ್ಷವಿಡೀ ಅವರ ತ್ಯಾಗ ಮತ್ತು ಸಾಧನೆಗಳನ್ನು ಸ್ಮರಿಸುವ ಕಾರ್ಯವಾಗಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಅಪ್ಪಯ್ಯ ಗೌಡರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ನಿರಂತರವಾಗಿ ಸ್ಮರಿಸಬೇಕು. ಅವರ ಕುಟುಂಬದವರಿಗೂ ಗೌರವ ಹಾಗೂ ಧೈರ್ಯ ತುಂಬುವ ಕೆಲಸವನ್ನು ಸಮಾಜ ಮತ್ತು ಸಾರ್ವಜನಿಕರು ಮಾಡಬೇಕು. ದೇಶದ ಸ್ವಾತಂತ್ರ‍್ಯಕ್ಕಾಗಿ ಅವರು ತಮ್ಮ ಜೀವವನ್ನೇ ಕಳೆದುಕೊಂಡಿದ್ದು, ಅವರ ಕೊಡುಗೆಯನ್ನು ಎಂದಿಗೂ ಮರೆಯಬಾರದು ಎಂದರು.
ಅಪ್ಪಯ್ಯ ಗೌಡರು ಅರೆಭಾಷೆ ಗೌಡ ಸಮುದಾಯಕ್ಕೆ ಸೇರಿದವರಾಗಿದ್ದರೂ, ಅವರು ಕೇವಲ ಒಂದು ಸಮುದಾಯದ ನಾಯಕರಲ್ಲ. ದೇಶದ ಸ್ವಾತಂತ್ರ‍್ಯಕ್ಕಾಗಿ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ಧೀಮಂತ ಸ್ವಾತಂತ್ರ‍್ಯ ಹೋರಾಟಗಾರರಾಗಿದ್ದರು. ಅವರ ಜೀವನ, ಹೋರಾಟ ಹಾಗೂ ತ್ಯಾಗ ಇಡೀ ರಾಜ್ಯ ಮತ್ತು ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.ಶಾಸಕ ಎ.ಎಸ್. ಪೊನ್ನಣ್ಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಲಕ್ಷ್ಮಿನಾರಾಯಣ ಕಜೆಗದ್ದೆ, ಪ್ರಮುಖರಾದ ಸೂರ್ತಲೆ ಸೋಮಣ್ಣ, ಅಕಾಡೆಮಿ ಸದಸ್ಯರು ಸೇರಿದಂತೆ ಹಲವು ಗಣ್ಯರು ಸ್ವಾತಂತ್ರ‍್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.ಮೆರವಣಿಗೆ: ನಂತರ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮಾರಕದ ಬಳಿಯಿಂದ ಮೆರವಣಿಗೆ ಹೊರಟು ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಕೋಟೆಗೆ ಆಗಮಿಸಿ, ಅಪ್ಪಯ್ಯ ಗೌಡರನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಕೆ.ಸಿ.ದಯಾನಂದ ಮಾತನಾಡಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ ಮಾಡುವುದು ಶ್ಲಾಘನೀಯ ಕಾರ್ಯ, ವೀರ ಪುರುಷರನ್ನು ಮರೆತರೆ ಸಮಾಜ ತನ್ನ ಅಸ್ಮಿತೆ ಕಳೆದುಕೊಳ್ಳುತ್ತದೆ ಎಂದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಅಂಬೆಕಲ್ಲು ಕುಶಾಲಪ್ಪ, ಕಾರ್ಯಕ್ರಮ ಸಂಚಾಲಕ ಪಿ.ಎಂ.ಸಂದೀಪ್, ಮೋಹನ್ ಪೊನ್ನಚ್ಚನ, ಅಕಾಡೆಮಿ ಸದಸ್ಯರಾದ ಸೂದನ ಈರಪ್ಪ, ಡಾ.ಎನ್.ಎ.ಜ್ಞಾನೇಶ್, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಗೋಪಾಲ ಪೆರಾಜೆ ಇತರರು ಇದ್ದರು. ಪುಷ್ಪಾರ್ಚನೆ ಸಂದರ್ಭದಲ್ಲಿ ರೇವತಿ ರಮೇಶ್ ಮತ್ತು ತಂಡದವರು ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ನಮನ ಗೀತೆ ಹಾಡಿದರು. ಪರ್ಲಕೋಟಿ ಸೋನ ಪ್ರೀತು ಮತ್ತು ತಂಡದವರು ನಮನ ಗೀತೆ ಹಾಡಿದರು. ಕುಶಾಲನಗರ ಮತ್ತು ಮಕ್ಕಂದೂರು ಮಹಿಳಾ ಒಕ್ಕೂಟದವರು ಅಪ್ಪಯ್ಯ ಗೌಡರ ಕುರಿತು ಹಾಡು ಹಾಡಿದರು. ಚೊಕ್ಕಾಡಿ ಪ್ರೇಮ ರಾಘವಯ್ಯ ತಂಡದವರು ಅಪ್ಪಯ್ಯ ಗೌಡರ ಜೀವನ ಚರಿತ್ರೆ ಕುರಿತು ಲಾವಣಿ ಗೀತೆ ಹಾಡಿದರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದಿಂದ ಆಶಯ ಗೀತೆ ಹಾಡಿದರು. ಅಕಾಡೆಮಿ ಸದಸ್ಯರಾದ ವಿನೋದ್ ಮೂಡಗದ್ದೆ ನಿರೂಪಿಸಿ, ಸ್ವಾಗತಿಸಿದರು. ಪೊನ್ನಚ್ಚನ ಮೋಹನ ವಂದಿಸಿದರು.