2028ರ ಚುನಾವಣೆಯಲ್ಲಿ ಎಂಟಿಬಿ ಕುಟುಂಬಕ್ಕೆ ಗೆಲುವಾಗಲಿ

KannadaprabhaNewsNetwork |  
Published : Jul 21, 2025, 12:00 AM IST
ಫೋಟೋ: 20 ಹೆಚ್‌ಎಸ್‌ಕೆ 5ಹೊಸಕೋಟೆ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಎಂಟಿಬಿ ನಾಗರಾಜ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಂಸದ ಡಾ.ಕೆ.ಸುಧಾಕರ್ ಮಾತನಾಡಿದರು. | Kannada Prabha

ಸಾರಾಂಶ

ಹೊಸಕೋಟೆ: ಎಂಟಿಬಿ ನಾಗರಾಜ್ ಅವರು ಎರಡು ಚುನಾವಣೆಯಲ್ಲಿ ಸೋಲನುಭವಿಸಿ ಸಾಕಷ್ಟು ನೋವನುಭವಿಸಿದ್ದಾರೆ. ಆದ್ದರಿಂದ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಎಂಟಿಬಿ ಕುಟುಂಬದಿಂದ ಯಾರೇ ನಿಂತರೂ ಗೆಲುವಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ತಿಳಿಸಿದರು

ಹೊಸಕೋಟೆ: ಎಂಟಿಬಿ ನಾಗರಾಜ್ ಅವರು ಎರಡು ಚುನಾವಣೆಯಲ್ಲಿ ಸೋಲನುಭವಿಸಿ ಸಾಕಷ್ಟು ನೋವನುಭವಿಸಿದ್ದಾರೆ. ಆದ್ದರಿಂದ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಎಂಟಿಬಿ ಕುಟುಂಬದಿAದ ಯಾರೇ ನಿಂತರೂ ಗೆಲುವಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಸಹ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿ ಸಾಕಷ್ಟು ನೋವನ್ನು ಅನುಭವಿಸಿದ್ದೆ. ಆದರೆ ನನಗೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದಿಂದ ಸಂಸದನಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಕೆಲಸ ಮಾಡುವ ಭಾಗ್ಯ ಕರುಣಿಸಿದ್ದೀರಿ. ಅದೇ ರೀತಿ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಸಹ ಎಂಟಿಬಿ ನಾಗರಾಜ್ ಅವರ ಕುಟುಂಬದಿಂದ ಯಾರೇ ಸ್ಪರ್ಧೆ ಮಾಡಿದ್ರು ಅವರಿಗೆ ಗೆಲುವಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದರು.

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ನನ್ನ ಅಧಿಕಾರಾವಧಿಯಲ್ಲಿ ಜನರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಶಾಸಕನಾಗಿ, ಸಚಿವನಾಗಿ ಹೊಸಕೋಟೆ ಕ್ಷೇತ್ರದಲ್ಲಿ ಜನ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಋಣಿಯಾಗಿದ್ದೇನೆ, ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜನ ಸೇವೆ ನಿಂತಿಲ್ಲ ಎಂದರು.

ಬಿಜೆಪಿ ಟೌನ್ ಅಧ್ಯಕ್ಷ ಬಾಲಚಂದ್ರನ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೆ.ಎಂ.ಹಸೇನ್, ನಗರಸಭೆ ಉಪಾಧ್ಯಕ್ಷ ಸಿಪಿಎನ್ ನವೀನ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್, ಸದಸ್ಯರುಗಳಾದ ಅರುಣ್(ಹರಿ),, ನಿತಿನ್, ಗುಲ್ಜಾರ್, ರಾಮಾಂಜಿನಿ, ಜಿಪಂ ಮಾಜಿ ಸದಸ್ಯ ಸಿ.ನಾಗರಾಜ್, ಮುಖಂಡರಾದ ಹುಲ್ಲುರು ಕಿರಣ್, ಶೌರತ್, ಕೆಆರ್‌ಬಿ ಶಿವಾನಂದ್, ಸೇರಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಫೋಟೋ: 20 ಹೆಚ್‌ಎಸ್‌ಕೆ 5

ಹೊಸಕೋಟೆ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಎಂಟಿಬಿ ನಾಗರಾಜ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಂಸದ ಡಾ.ಕೆ.ಸುಧಾಕರ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?