ಹೆಸರು ಕಾಳು ಖರೀದಿ ಕೇಂದ್ರ ಸದುಪಯೋಗವಾಗಲಿ

KannadaprabhaNewsNetwork |  
Published : Sep 07, 2024, 01:39 AM IST
(6ಎನ್.ಆರ್.ಡಿ1 ಶಾಸಕ ಸಿ.ಸಿ.ಪಾಟೀಲರು ಹೆಸರು ಬೆಂಬಲ ಕೇಂದ್ರಕ್ಕೆ ಚಾಲನೆ ನೀಡುತ್ತಿದ್ದಾರೆ.)  | Kannada Prabha

ಸಾರಾಂಶ

ನಾಫೆಡ್ ಸಂಸ್ಥೆ ಮತ್ತು ಎನ್.ಸಿ.ಸಿ.ಎಫ್ ಸಂಸ್ಥೆ ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಮತ್ತು ಕಲಬುರಗಿ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆ ರಾಜ್ಯದ ವತಿಯಿಂದ ಖರೀದಿ

ನರಗುಂದ: ಕೇಂದ್ರ ಸರ್ಕಾರವು ರಾಜ್ಯದಿಂದ 22,215ಮೆಟ್ರಿಕ್‌ ಟನ್‌ ಎಫ್‌ಎಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿ ಮಾಡಲಿದೆ. ಕ್ವಿಂಟಲ್‌ಗೆ 8,682ರಂತೆ ಪ್ರತಿ ಎಕರೆಗೆ ಗರಿಷ್ಟ 2 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 10 ಕ್ವಿಂಟಲ್‌ ಖರೀದಿಸಲಾಗುತ್ತದೆ. ರೈತರು ಆಧಾರ ಜೋಡಣೆಗೊಂಡ ಬ್ಯಾಂಕ್‌ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಟಿ ಮೂಲಕ ಜಮಾಮಾಗುವಂತೆ ಪಾವತಿ ಮಾಡಲಾಗುತ್ತದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆರೆಯಲಾದ ಹೆಸರುಕಾಳು ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು,ಆ.24 ರಿಂದ 45 ದಿನಗಳವರೆಗೆ ರೈತರ ನೋಂದಣಿಗೆ ಅವಕಾಶವಿದೆ ಮತ್ತು ಆ.24 ರಿಂದ 90 ದಿನಗಳವರೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ರಾಜ್ಯದ 14 ಜಿಲ್ಲೆಗಳ ರೈತರಿಂದ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳು ಖರೀದಿಸಲಾಗುತ್ತಿದೆ. ನಾಫೆಡ್ ಸಂಸ್ಥೆ ಮತ್ತು ಎನ್.ಸಿ.ಸಿ.ಎಫ್ ಸಂಸ್ಥೆ ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಮತ್ತು ಕಲಬುರಗಿ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆ ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ಗುರುತಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 56 ಖರೀದಿ ಕೇಂದ್ರ ತೆರೆಯಲಾಗುತ್ತಿದೆ. ತಾಲೂಕಿನಲ್ಲಿ ಪಟ್ಟಣದ ಟಿಎಪಿಸಿಎಂಎಸ್, ಚಿಕ್ಕನರಗುಂದ ಪಿಎಸಿಎಸ್, ಸುರಕೋಡ, ಸಂಕದಾಳ, ಶಿರೋಳ, ಕೊಣ್ಣೂರ, ಹಿರೇಕೊಪ್ಪ, ಜಗಾಪೂರ, ಖಾನಾಪೂರ-ಗಂಗಾಪೂರ ಹೀಗೆ 9 ಗ್ರಾಮಗಳಲ್ಲಿ ಖರೀದಿ ಕೇಂದ್ರ ಪ್ರಾರಂಭಗೊಂಡಿವೆ. ಇಲ್ಲಿಯವರೆಗೆ ತಾಲೂಕಿನಲ್ಲಿ 477 ಜನ ರೈತರು ಹೆಸರುಕಾಳು ಮಾರಾಟಕ್ಕಾಗಿ ನೋಂದಣಿ ಮಾಡಿಕೊಂಡಿರುತ್ತಾರೆಂದು ಹೇಳಿದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಅಜ್ಜಪ್ಪ ಹುಡೇದ, ತಹಸೀಲ್ದಾರ್‌ ಶ್ರೀಶೈಲ ತಳವಾರ, ಎಸ್.ಆರ್. ಪಾಟೀಲ, ಬಸಪ್ಪ ಮಳಗಿ, ಬಿ.ಬಿ. ಐನಾಪೂರ, ಎಂ.ಎಚ್. ತಿಮ್ಮನಗೌಡ್ರ, ಶಂಕರಗೌಡ ಯಲ್ಲಪ್ಪಗೌಡ್ರ, ಕೊಟ್ರೇಶ ಕೊಟ್ರಶೆಟ್ಟಿ, ವೀರಣ್ಣ ಸೊಪ್ಪಿನ, ಸಿದ್ದಪ್ಪ ಯಲಿಗಾರ, ಎಪಿಎಂಸಿ ಕಾರ್ಯದರ್ಶಿ ರಾಘವೇಂದ್ರ ಸಜ್ಜನ, ಯಲ್ಲಪ್ಪಗೌಡ ಪಾಟೀಲ, ಸಾಲಿಗೌಡ್ರ, ಬಸವರಾಜ ಹುಲಕುಂದ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?
ಸಂಸ್ಕೃತಿಯ ಸಂರಕ್ಷಣೆ ಹೊಣೆ ಯುವಶಕ್ತಿ ಮೇಲಿದೆ: ಸಂಜೀವ ಚವ್ಹಾಣ