ತಾಮಸ ಗುಣ ದೂರಾಗಿ ಆಧ್ಯಾತ್ಮಿಕ ಸಂಪತ್ತು ಬರಲಿ: ಬಸವಶಾಂತಲಿಂಗ ಸ್ವಾಮೀಜಿ

KannadaprabhaNewsNetwork |  
Published : Jul 31, 2025, 12:49 AM IST
29ಎಚ್‌ವಿಆರ್4 | Kannada Prabha

ಸಾರಾಂಶ

ಶ್ರವಣ, ಮನನ, ಧ್ಯಾನ ನಮ್ಮನ್ನು ಮುಕ್ತಿ ಮಾರ್ಗಕ್ಕೆ ಕೊಂಡೊಯ್ಯುತ್ತದೆ.

ಹಾವೇರಿ: ಭಾರತ ಅಧ್ಯಾತ್ಮದ ನೆಲೆವೀಡು. ಇಲ್ಲಿನ ಪ್ರತಿಯೊಂದು ಆಚರಣೆಗೆ ವೈಜ್ಞಾನಿಕ ಹಿನ್ನೆಲೆ ಇದೆ. ಶ್ರಾವಣ ಮಾಸದಲ್ಲಿ ಇಳೆ, ಗಾಳಿ, ಮಳೆ, ನದಿ, ಪರ್ವತಗಳು ಕಂಗೊಳಿಸುತ್ತಿರುತ್ತವೆ. ಸೃಷ್ಟಿಯು ಸಮೃದ್ಧವಾಗಿರುತ್ತದೆ. ಅದೇ ರೀತಿ ಮಾನವನ ಬದುಕಿನಲ್ಲಿ ತಾಮಸ ಗುಣಗಳು ಹೋಗಿ ಆಧ್ಯಾತ್ಮಿಕ ಸಂಪತ್ತು ಬರಲಿ ಎಂಬ ಭಾವನೆಯಿಂದ ಶ್ರಾವಣ ಮಾಸವನ್ನು ಆಚರಿಸುತ್ತಾರೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ತಿಳಿಸಿದರು.ನಗರದ ಹುಕ್ಕೇರಿಮಠ ಶಿವಾನುಭವ ಮಂಟಪದಲ್ಲಿ ಶ್ರಾವಣ ಮಾಸದ ನಿಮಿತ್ತ ಹಮ್ಮಿಕೊಂಡಿರುವ ಶ್ರಾವಣ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರವಣ, ಮನನ, ಧ್ಯಾನ ನಮ್ಮನ್ನು ಮುಕ್ತಿ ಮಾರ್ಗಕ್ಕೆ ಕೊಂಡೊಯ್ಯುತ್ತದೆ ಎಂದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಮಾತನಾಡಿ, ತಂತ್ರಜ್ಞಾನ ಬೆಳೆದಂತೆ, ಸಮಾಜದಲ್ಲಿ ಅಪರಾಧ ಪ್ರಕರಣಗಳ ಸ್ವರೂಪವೂ ಬದಲಾಗುತ್ತಿದೆ. ಕಣ್ಣಿಗೆ ಕಾಣದೇ ಅಪರಾಧಿಯು ತಂತ್ರಜ್ಞಾನ ಬಳಸಿ, ಅಮಾಯಕರನ್ನು ಮೋಸ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಹಾಗಾಗಿ ಜನಸಾಮಾನ್ಯರು ಮೊಬೈಲ್ ಬಳಸುವಾಗ ಎಚ್ಚರಿಕೆಯಿಂದ ಇರಬೇಕೆಂದು ಹೇಳಿದರು.ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಪಲ್ಲವಿ ಜಿ. ಮಾತನಾಡಿ, ಮಹಿಳೆಯು ಪುರುಷನಿಗಿಂತ ಎಲ್ಲ ಕ್ಷೇತ್ರಗಳಲ್ಲಿಯೂ ಮುಂದುವರಿದಿದ್ದಾಳೆ. ಆದಾಗ್ಯೂ ಅವಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತವೆ. ಇಂಥ ಸಮಯದಲ್ಲಿ ಎದೆಗುಂದದೆ ಮಹಿಳಾ ಸಹಾಯವಾಣಿಯ ಉಪಯೋಗವನ್ನು ಪಡೆಯಬೇಕೆಂದು ಹೇಳಿದರು.ಶಹರ ಪೊಲೀಸ್ ಠಾಣೆಯ ಸಿಪಿಐ ಮೋತಿಲಾಲ್ ಪವಾರ ಮತ್ತು ಗ್ರಾಮೀಣ ಪಿಎಸ್‌ಐ ಸಂತೋಷ ಪವಾರ, ಉಪನ್ಯಾಸಕ ಗುಡ್ಡಪ್ಪ ಚಟ್ರಮ್ಮನವರ ಮಾತನಾಡಿದರು.

ಸಾನ್ನಿಧ್ಯವನ್ನು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ವಹಿಸಿದ್ದರು. ಸಮಾರಂಭದಲ್ಲಿ ವಿರೂಪಾಕ್ಷ ದೇವರು, ಎಸ್.ಎಸ್. ಮುಷ್ಠಿ, ಆರ್.ಎಸ್. ಮಾಗನೂರ, ವೀರಣ್ಣ ಅಂಗಡಿ, ಶಿವಯೋಗಿ ವಾಲಿಶೆಟ್ಟರ, ಸುಭಾಷ್ ಹುರಳಿಕುಪ್ಪಿ, ವಿಜಯಕುಮಾರ ಕೂಡ್ಲಪ್ಪನವರ, ರಾಜಣ್ಣ ಮಾಗನೂರ, ಮಹೇಶ ಚಿನ್ನಿಕಟ್ಟಿ, ನಾಗಪ್ಪ ಮುರನಾಳ, ಶಿವಣ್ಣ ಶಿರೂರ, ಎಸ್.ವಿ. ಹಿರೇಮಠ, ಅಶೋಕ ಹೇರೂರ, ರಾಚಣ್ಣ ಲಂಬಿ, ಲತಾ ಭರತನೂರಮಠ, ಚಂಪಾ ಹುಣಸಿಕಟ್ಟಿ, ಲಲಿತಕ್ಕ ಹೊರಡಿ, ವನಿತಾ ಮಾಗನೂರ, ರೇಣುಕಾ ಮಡಿವಾಳರ, ಚನ್ನಪ್ಪ ಹಳಕೊಪ್ಪ, ಮಲ್ಲಿಕಾರ್ಜುನ ಬೆಳ್ಳಟ್ಟಿ, ಎಂ.ಎಸ್. ಹಿರೇಮಠ ಮತ್ತಿತರರು ಇದ್ದರು. ಅಕ್ಕನ ಬಳಗದವರು ಪ್ರಾರ್ಥಿಸಿದರು. ಬಿ. ಬಸವರಾಜ ಸ್ವಾಗತಿಸಿದರು. ಎಸ್.ಎನ್. ಮಳೆಪ್ಪನವರ ನಿರೂಪಿಸಿದರು. ಶಿವಬಸವ ಮರಳಿಹಳ್ಳಿ ವಂದಿಸಿದರು.

PREV

Recommended Stories

ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ
ಬೆಂಗಳೂರು ನಗರದಲ್ಲಿ ಮತ್ತೆ ರಾರಾಜಿಸಲಿವೆ ಜಾಹೀರಾತು : ವಾರ್ಷಿಕ ₹ 6000 ಕೋಟಿ ನಿರೀಕ್ಷೆ