ವಿದ್ಯಾರ್ಥಿಗಳಲ್ಲಿ ನಾಡಪ್ರಭು ಕೆಂಪೇಗೌಡ ದೂರದೃಷ್ಟಿತ್ವ ಗುಣ ಇರಲಿ: ಶಾಸಕ ಹರೀಶ್‌

KannadaprabhaNewsNetwork |  
Published : Jul 13, 2025, 01:18 AM IST
ಶಾಸಕ ಬಿ ಪಿ ಹರೀಶ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.    | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ನಾಡಪ್ರಭು, ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಅಭಿವೃದ್ಧಿಯ ದೂರದೃಷ್ಟಿತ್ವ ಗುಣಗಳು ಅಳವಡಿಕೆಯಾಗಿರಲಿ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

- ಮಲೇಬೆನ್ನೂರು ಸರ್ಕಾರಿ ಕಾಲೇಜಿನಲ್ಲಿ ಕೆಂಪೇಗೌಡ ಜಯಂತಿ

- - -

ಮಲೇಬೆನ್ನೂರು: ವಿದ್ಯಾರ್ಥಿಗಳಲ್ಲಿ ನಾಡಪ್ರಭು, ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಅಭಿವೃದ್ಧಿಯ ದೂರದೃಷ್ಟಿತ್ವ ಗುಣಗಳು ಅಳವಡಿಕೆಯಾಗಿರಲಿ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ರಾಜಧಾನಿ ಬೆಂಗಳೂರಿನ ಎಲ್ಲ ಕ್ಷೇತ್ರಗಳಲ್ಲಿ ಆಡಳಿತ ನಡೆಸಿದ ಕೀರ್ತಿ ಕೆಂಪೇಗೌಡ ಅವರಿಗೆ ಸಲ್ಲಿಕೆ ಆಗಲಿದೆ. ಅವರ ವಿಚಾರಗಳನ್ನು ಇಂದಿನ ವಿದ್ಯಾರ್ಥಿಗಳು ಅರಿಯಲು ಸರ್ಕಾರ ಪ್ರಯತ್ನಿಸಿದ್ದು, ಉತ್ತಮ ಬೆಳವಣಿಗೆಯಾಗಿದೆ ಎಂದರು.

ಕೆಂಪೇಗೌಡ ಅವರ ಹೆಸರಲ್ಲಿ ವಿದ್ಯಾರ್ಥಿಗಳಿಗೆ ಚರ್ಚಾ, ಪ್ರಬಂಧ, ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ, ಮಹಾತ್ಮರ ವಿಷಯ ತಿಳಿಸಿದ ಅವರು, ಕಾಲೇಜು ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ಆಲೋಚನೆ ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಕ್ರಾಂತಿಕಾರರ ಪುಸ್ತಕಗಳು ದಾರಿದೀಪವಾಗುತ್ತವೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹೆಚ್ಚಾಗಿರುವ ಈ ಕಾಲೇಜಲ್ಲಿ ಉರ್ದು ಉಪನ್ಯಾಸಕರನ್ನು ನಿಯೋಜಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆನಂದಾಚಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಇಂದಿನ ತುರ್ತು ಅಗತ್ಯವಾಗಿದೆ. ಮಕ್ಕಳ ಜೀವನ ಅಮೂಲ್ಯವಾಗಲು ಅಂಕಗಳ ಜತೆ ಕೌಶಲ್ಯಗಳು ಕರಗತವಾದವರಿಗೆ ಭವಿಷ್ಯದ ಭಾಗ್ಯದ ಬಾಗಿಲು ಸದಾ ತೆರೆದಿರುತ್ತದೆ ಎಂದರು.

ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಪ್ರಾಂಶಪಾಲೆ ಭಾಗ್ಯ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಎಸ್‌.ಜಿ. ಮಂಜುನಾಥ್ ಉಪನ್ಯಾಸ ನೀಡಿದರು. ಉಪನ್ಯಾಸಕ ದ್ರೋಣಾನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ತಿಪ್ಪೇಸ್ವಾಮಿ, ರೇಷ್ಮಾಬಾನು, ಅತಿಯಾ ಕೌಸರ್, ಕುಂಬಳೂರು ಕಾಲೇಜು ಪ್ರಾಚಾರ್ಯ ಹನುಮಂತಯ್ಯ ಮಾತನಾಡಿದರು. ಸಿಡಿಸಿ ಸದಸ್ಯರಾದ ವೀರೇಶ್, ವಿಶ್ವನಾಥ್, ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ್, ಪ್ರೌಢಶಾಲಾ ಪೋಷಕರು ಇದ್ದರು. ಚಿತ್ರ-೩. ಶಾಸಕ ಬಿ ಪಿ ಹರೀಶ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

- - -

(-ಫೋಟೋ):

PREV

Latest Stories

ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ
ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು