ಸ್ವಾಮೀಜಿಗಳು ಸಮಾಜದ ಸ್ವಾಸ್ಥ್ಯ ಕಾಪಾಡಲಿ

KannadaprabhaNewsNetwork |  
Published : Nov 28, 2024, 12:33 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು

ಕನ್ನಡಪ್ರಭ ವಾರ್ತೆ ವಿಜಯಪುರ

ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಬಗ್ಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ ಕಾನೂನು, ಜನಸಾಮಾನ್ಯರಿಗೂ ಒಂದೇ ಕಾನೂನು. ಸ್ವಾಮೀಜಿಯವರು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಇಂತಹ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು. ನಾನು ಸ್ವಾಮೀಜಿಗಳ ಬಗ್ಗೆ ಮಾತನಾಡುವಷ್ಟು ದೊಡ್ಡವಳಲ್ಲ. ಅದು ನಮ್ಮ ಸಂಸ್ಕೃತಿಯೂ ಅಲ್ಲ. ಸ್ವಾಮೀಜಿಗಳ ಸಂಸ್ಕೃತಿಯೂ ಅದಲ್ಲ, ನಾವು ನಮ್ಮ ಚೌಕಟ್ಟಿನಲ್ಲಿರಬೇಕು. ಸ್ವಾಮೀಜಿಗಳು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕು. ಇಂತಹ ಮಾತುಗಳನ್ನಾಡಿ ಚಪ್ಪಾಳೆ ಗಿಟ್ಟಿಸಿಕೊಳ್ಳಬಾರದು ಎಂದರು.

ನಾನು ಮಂತ್ರಿಯಾಗಿದ್ದರೂ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಈಗಲೂ ಸಕ್ರಿಯವಾಗಿರುವೆ. ಮಂತ್ರಿಯಾಗಿರುವ ಕಾರಣ ಕೆಲಸದ ಒತ್ತಡದಿಂದಾಗಿ ಮೀಸಲಾತಿ ಹೋರಾಟದ ಒಂದೆರಡು ಸಭೆಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ನನ್ನ ತಮ್ಮ ಹಾಗೂ ನನ್ನ ಮಗ ಪಾಲ್ಗೊಳ್ಳುತ್ತಿದ್ದಾರೆ. ಪಂಚಮಸಾಲಿ ಸಮಾಜ ಸದಾ ನನ್ನೊಂದಿಗಿದೆ. ನಾನು ಕೂಡ ಯಾವಾಗಲೂ ಸಮಾಜದ ಜೊತೆ ಇರುವೆ ಎಂದರು.ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನಾಲ್ಕು ಬಾರಿ ಭೇಟಿಯಾಗಿದ್ದೆವು. ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಈಗಾಗಲೇ ಮೂರು ಬಾರಿ ಭೇಟಿ ಮಾಡಲಾಗಿದೆ. ನಮ್ಮ ಸಮಾಜಕ್ಕೆ ಖಂಡಿತವಾಗಿಯೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟ ಪುನಾರಚನೆ ವಿಚಾರದ ಬಗೆಗಿನ ಪ್ರಶ್ನೆಗೆ, ಈ ಬಗ್ಗೆ ಮಾತನಾಡಲು ನಾನು ಪಕ್ಷದ ಅಧ್ಯಕ್ಷೆಯೂ ಅಲ್ಲ, ಹೈ ಕಮಾಂಡ್ ಕೂಡ ಅಲ್ಲ ಎಂದು ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ