ವೀರಶೈವ-ಲಿಂಗಾಯತ ಸಮಾಜ ಒಂದಾಗಿ ಮುನ್ನಡೆಯಲಿ: ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು

KannadaprabhaNewsNetwork |  
Published : Sep 17, 2026, 02:30 AM IST
ಮುಂಡರಗಿ ಅನ್ನದಾನೀಶ್ವರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ತಿಂಗಳ ಪರ್ಯಂತ ಜರುಗಿದ ಶಿವಶರಣ ಚರಿತಾಮೃತ ಪ್ರವಚನದ ಮಂಗಲೋತ್ಸವ ಕಾರ್ಯಕ್ರಮದ ಸಾನಿಧ್ಯವಹಿಸಿ ಜ.ನಾಡೋಜ ಡಾ.ಅನ್ನದಾನೀಶ್ವರ ಮಹಾಸ್ವಾಮಿಜಿ ಮಾತನಾಡಿದರು. | Kannada Prabha

ಸಾರಾಂಶ

ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಅಲ್ಲ, ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಂಘಟಿತರಾಗಿ ಸಾಗಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಹಾಗೂ ಏಳಿಗೆ ಸಾಧ್ಯ.

ಕನ್ನಡಪ್ರಭ ವಾರ್ತೆ ಮುಂಡರಗಿ

ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಅಲ್ಲ, ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಂಘಟಿತರಾಗಿ ಸಾಗಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಹಾಗೂ ಏಳಿಗೆ ಸಾಧ್ಯ ಎಂದು ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ನುಡಿದರು.

ಪಟ್ಟಣದ ಅನ್ನದಾನೀಶ್ವರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ತಿಂಗಳ ಪರ್ಯಂತ ಜರುಗಿದ ಶಿವಶರಣ ಚರಿತಾಮೃತ ಪ್ರವಚನದ ಮಂಗಲೋತ್ಸವ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.

ಯೋಗ್ಯರನ್ನು ಗುರುತಿಸಿ ಸನ್ಮಾನಿಸುವ ಅಪೂರ್ವ ಗುಣ ಹಾನಗಲ್ಲ ಕುಮಾರ ಶಿವಯೋಗಿಗಳಲ್ಲಿತ್ತು. ಅಲ್ಲದೆ ಹರಿದು ಹಂಚಿಹೋಗಿದ್ದ ಅಖಿಲ ಭಾರತ ವೀರಶೈವ ಮಹಾಸಭೆಯನ್ನು ಒಗ್ಗೂಡಿಸಿದ ಕೀರ್ತಿಯೂ ಸಹ ಕುಮಾರ ಶಿವಯೋಗಿಗಳಿಗೆ ಸಲ್ಲುತ್ತದೆ. ಇಂತಹ ಮಹಾಪುರುಷರ ತ್ಯಾಗ ಮತ್ತು ಪರಿಶ್ರಮವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆದರೆ ಪ್ರಸ್ತುತ ದಿನಗಳಲ್ಲಿ ವೀರಶೈವ-ಲಿಂಗಾಯತ ಎಂದು ಸಮಾಜವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿರುವುದು ಸರಿಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಜ.ಅ.ವಿದ್ಯಾ ಸಮೀತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ ಮಾತನಾಡಿ, ತಿಂಗಳ ಪರ್ಯಂತ ದೂರದ ಬೀದರನ ಮೃತ್ಯುಂಜಯ ದೇವರು ಅತ್ಯಂತ ಅರ್ಥಪೂರ್ಣವಾಗಿ ಶಿವಶರಣರ ತತ್ವಗಳನ್ನು ಜನರಿಗೆ ತಲುಪಿಸಿದ್ದಾರೆ ಎಂದರು.

ಹೂವಿನಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಜಿ ನೇತೃತ್ವ ವಹಿಸಿ ಮಾತನಾಡಿದರು.

ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಿಥುನ್‌ಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಜಿಲ್ಲಾ ವಾಣಿಜ್ಯೋದ್ಯಮ ಪ್ರಶಸ್ತಿ ಪುರಸ್ಕೃತ ಗೌತಮ್‌ಚಂದ್ ಚೋಪ್ರಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪುರಾಣ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಪಾಟೀಲ, ಉಪಾಧ್ಯಕ್ಷ ಈರಣ್ಣ ಕಾಶಿಗಾವಿ, ಕಾರ್ಯದರ್ಶಿ ಬಸವರಾಜ ಅಂಕದ, ಖಜಾಂಚಿ ವಿನಯ ಗಂಧದ, ಮುಖಂಡರಾದ ಕರಬಸಪ್ಪ ಹಂಚಿನಾಳ, ಡಿ.ಡಿ. ಮೋರನಾಳ, ಸಮಾಜಿಕ ಅರಣ್ಯಾಧಿಕಾರಿ ಸುನಿತಾ ಪೂಜಾರ, ರಾಮಣ್ಣ ಪೂಜಾರ, ಕಲಾವತಿ ಪಾಟೀಲ, ಮಠದ ಕಾರ್ಯದರ್ಶಿ ಹಾಲಯ್ಯ ಹಿರೇಮಠ ಉಪಸ್ಥಿತರಿದ್ದರು. ಎಸ್.ಎಸ್. ಮಠದ ಹಾಗೂ ಹಂಪಿಮಠ ನಿರೂಪಿಸಿ, ನಾಗಭೂಷಣ ಹಿರೇಮಠ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋಲ್ಡ್ ಕ್ಲೇ ಮೂಲಕ ೧೦೦೮ ಗಣಪತಿ ಪ್ರತಿಮೆ ರಚನೆ: ಪ್ರವೀಣ್‌ ದಾಖಲೆ
ನಿಟ್ಟೆ ಜವಳಿ ಪಾರ್ಕ್ ಕಾಮಗಾರಿ ಕೂಡಲೇ ಆರಂಭಿಸಿ: ನೇಮಿರಾಜ ರೈ