ನಗರದಲ್ಲಿ ಕುಡಿವ ನೀರಿನ ಸಮಸ್ಯೆ ಆಗದಿರಲಿ

KannadaprabhaNewsNetwork |  
Published : Oct 26, 2026, 04:00 AM IST
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳೊಂದಿಗೆ ಭೂತನಾಳ ಕೆರೆ ಹಾಗೂ ಅರಕೇರಿ ಜಾಕ್‌ವೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳೊಂದಿಗೆ ಭೂತನಾಳ ಕೆರೆ ಹಾಗೂ ಅರಕೇರಿ ಜಾಕ್‌ವೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

ಭೂತನಾಳ ಕೆರೆಯಲ್ಲಿನ ನೀರಿನ ಸಂಗ್ರಹದ ಪ್ರಮಾಣ, ಲಭ್ಯತೆ ಹಾಗೂ ನಗರಕ್ಕೆ ನೀರು ಪೂರೈಸುವ ಸಾಮರ್ಥ್ಯವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ನಂತರ ಅರಕೇರಿ ಜಾಕ್‌ವೆಲ್‌ಗೆ ಭೇಟಿ ನೀಡಿ ಪಂಪ್‌ಗಳ ಕಾರ್ಯನಿರ್ವಹಣೆ, ನೀರು ಎತ್ತುವ ಸಾಮರ್ಥ್ಯ ಹಾಗೂ ಸರಬರಾಜು ವ್ಯವಸ್ಥೆಯ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಭೂತನಾಳ ಕೆರೆ ಭರ್ತಿ ಮಾಡಲು ಅರಕೇರಿ ಮೂಲಕ ಹಾದುಹೋಗುವ ಕೆಬಿಜೆಎನ್‌ಎಲ್ ಪೈಪ್‌ಲೈನ್‌ನಿಂದ ನೀರು ಪಡೆಯಲು ಅನುಮತಿ ನೀಡುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಭೂತನಾಳ ಕೆರೆಯನ್ನು ಅವಲಂಬಿಸಿರುವ ನಗರದ ಐದು ವಾರ್ಡ್‌ಗಳಿಗೆ ಹಾಗೂ ಐಆರ್‌ಬಿ ಮತ್ತು ಕೆಎಂಎಫ್ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಈ ಕ್ರಮ ಅಗತ್ಯವಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಅಗತ್ಯ ನೀರು ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭರವಸೆ ನೀಡಿದರು.

ನಗರದ ಎಲ್ಲ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ಪೂರೈಸಲು ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ನೀರಿನ ಸೋರಿಕೆ ತಡೆಗಟ್ಟುವುದರ ಜೊತೆಗೆ, ಪಂಪ್‌ಗಳು ಹಾಗೂ ಇತರ ತಾಂತ್ರಿಕ ಉಪಕರಣಗಳಲ್ಲಿ ದೋಷ ಕಂಡುಬಂದಲ್ಲಿ ತಕ್ಷಣ ದುರಸ್ತಿ ನಡೆಸಿ, ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವ ಮೂಲಕ ನೀರು ಪೋಲಾಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಪರಿಶೀಲನೆ ಸಂದರ್ಭದಲ್ಲಿ ಮಹಾನಗರ ಪಾಲಿಕೆ, ನಗರ ನೀರು ಸರಬರಾಜು ಮಂಡಳಿ ಹಾಗೂ ಸಂಬಂಧಪಟ್ಟ ತಾಂತ್ರಿಕ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲೆ ಮನುಷ್ಯನ ಅಸ್ಮಿತೆಯ ಸೂಚಕ
ಮಹಿಳಾ ಅಭಿವೃದ್ಧಿ ಸಹಕಾರಿ ಬ್ಯಾಂಕ್ ಆರಂಭಕ್ಕೆ ಚಿಂತನೆ: ಚಂದ್ರಶೇಖರ ಕಟಗೇರಿ