ದಪ್ಪ ಎಂಬ ಖಿನ್ನತೆಗೆ ಒಳಗಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ!

KannadaprabhaNewsNetwork |  
Published : Nov 14, 2023, 01:15 AM IST
ಪ್ರಕೃತಿ ಶೆಟ್ಟಿ | Kannada Prabha

ಸಾರಾಂಶ

ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ, ನಗರದ ಎ.ಜೆ. ಶೆಟ್ಟಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನ ಪ್ರಥಮ ವೈದ್ಯಕೀಯ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಪ್ಪ ಇದ್ದ ಕಾರಣ ನೋಡಲು ಸುಂದರವಾಗಿ ಕಾಣುತ್ತಿಲ್ಲ ಎಂಬ ಖಿನ್ನತೆಗೆ ಒಳಗಾದ ಎಂಬಿಬಿಎಸ್‌ ವಿದ್ಯಾರ್ಥಿನಿ ತಾನು ವಾಸವಾಗಿದ್ದ ಹಾಸ್ಟೆಲ್‌ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ, ನಗರದ ಎ.ಜೆ. ಶೆಟ್ಟಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನ ಪ್ರಥಮ ವೈದ್ಯಕೀಯ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಯಾರೂ ಇಲ್ಲದ ಸಮಯದಲ್ಲಿ ಆಸ್ಪತ್ರೆ ವಠಾರದಲ್ಲಿರುವ ಮಹಿಳಾ ಹಾಸ್ಟೆಲ್‌ನ 6ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ದಪ್ಪ ಅಂತ ಖಿನ್ನತೆ:ಪ್ರಕೃತಿ ಶೆಟ್ಟಿ ಆತ್ಮಹತ್ಯೆಗೆ ಮೊದಲು ಸುದೀರ್ಘ ಡೆತ್‌ ನೋಟ್‌ ಬರೆದಿಟ್ಟಿದ್ದರು. ಅದರಲ್ಲಿ, ತನಗೆ ಎಂಬಿಬಿಎಸ್‌ ಓದನ್ನು ಮುಗಿಸಬೇಕು ಎನ್ನುವ ತುಂಬ ಆಸೆ ಇತ್ತು. ಆದರೆ ತಾನು ತುಂಬಾ ದಪ್ಪ ಇದ್ದೇನೆ. ಹಲವು ಬಾರಿ ತೂಕ ಇಳಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಇದರಿಂದ ಸೌಂದರ್ಯಕ್ಕೆ ಸಮಸ್ಯೆಯಾಗಿದೆ ಎಂದು ಉಲ್ಲೇಖಿಸಿದ್ದಾಗಿ ತಿಳಿದುಬಂದಿದೆ.ಡೆತ್‌ ನೋಟ್‌ ಸುದೀರ್ಘವಾಗಿರುವುದರಿಂದ ಆತ್ಮಹತ್ಯೆಗೆ ಇನ್ನಿತರ ಕಾರಣಗಳ ಬಗ್ಗೆಯೂ ಪೊಲೀಸ್ ತನಿಖೆ ಮುಂದುವರಿದಿದೆ. ಪ್ರಕೃತಿ ಶೆಟ್ಟಿಯ ಪೋಷಕರು ಮಂಗಳೂರಿಗೆ ಆಗಮಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.ಫೋಟೊ13ಪ್ರಕೃತಿ

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ