ರಕ್ತದಾನ ಶಿಬಿರ, ಉದ್ಯೋಗ ಮೇಳ ಇಂದು

KannadaprabhaNewsNetwork |  
Published : Oct 12, 2025, 01:00 AM IST
53 | Kannada Prabha

ಸಾರಾಂಶ

ರಾಜ್ಯದ ನೂರಕ್ಕು ಹೆಚ್ಚು ಪ್ರತಿಷ್ಠಿತ ಕಂಪನಿಗಳು, ಕಾರ್ಖಾನೆಗಳು, ಉದ್ಯಮಗಳು ಕೌಶಲ್ಯ ತರಬೇತಿ ಕೇಂದ್ರಗಳು ಹಾಗೂ ಉದ್ಯೋಗ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಲಿದ್ದು,

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡರ 75ನೇ ವರ್ಷದ ಜನ್ಮ ದಿನದ ಅಂಗವಾಗಿ ಅ. 12ರಂದು ಪಟ್ಟಣದ ಪುರಸಭೆ ಬಯಲು ರಂಗ ಮಂದಿರದ ಆವರಣದಲ್ಲಿ ಬೃಹತ್ ಆರೋಗ್ಯ ಮತ್ತು ರಕ್ತದಾನ ಶಿಬಿರ ಹಾಗೂ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್ ಹೇಳಿದರು.ರಾಜ್ಯದ ನೂರಕ್ಕು ಹೆಚ್ಚು ಪ್ರತಿಷ್ಠಿತ ಕಂಪನಿಗಳು, ಕಾರ್ಖಾನೆಗಳು, ಉದ್ಯಮಗಳು ಕೌಶಲ್ಯ ತರಬೇತಿ ಕೇಂದ್ರಗಳು ಹಾಗೂ ಉದ್ಯೋಗ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರು ಇದರ ಪ್ರಯೋಜ. ಪಡೆದುಕೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.ಬೃಹತ್ ಆರೋಗ್ಯ ಶಿಬಿರದಲ್ಲಿ ಹೃದ್ರೋಗ ಸಮಸ್ಯೆ, ಶ್ವಾಸಕೋಶದ ಪರೀಕ್ಷೆ ದಂತ ಸಮಸ್ಯೆ, ಕ್ಯಾನ್ಸರ್ ಸಮಸ್ಯೆ ಸೇರಿದಂತೆ ಎಲ್ಲ ಆರೋಗ್ಯ ಪರೀಕ್ಷೆ ಮತ್ತು ತಪಾಸಣೆ ನಡೆಸಲಿದ್ದು, ಆಸಕ್ತಿಯುಳ್ಳವರು ಭಾಗವಹಿಸಬೇಕು ಎಂದು ಕೋರಿಕೊಂಡರು.ಕಳೆದ ನಾಲ್ಕು ದಶಕಗಳಿಂದ ಕ್ಷೇತ್ರದಲ್ಲಿ ಸಮಾಜ ಸೇವೆ ಮೂಲಕ ರಾಜಕಾರಣ ಮಾಡುತ್ತಿರುವ ದೊಡ್ಡಸ್ವಾಮೇಗೌಡ ಅವರ ಜನ್ಮ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲು ಅಭಿಮಾನಿಗಳು ಮತ್ತು ಹಿತೈಷಿಗಳು ಆಚರಿಸಲು ನಿರ್ಧರಿಸಿದ್ದು, ಅದರಂತೆ ಕಾರ್ಯಕ್ರಮ ಸಮಾಜ ಮುಖಿಯಾಗಿ ಕಾರ್ಯಕ್ರಮ ಮಾಡುತ್ತಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ದೊಡ್ಡಸ್ವಾಮೇಗೌಡ ಅವರ ಜನ್ಮದಿನದ ಕಾರ್ಯಕ್ರಮಕ್ಕೆ ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಾಸಕರಾದ ಪುಟ್ಟರಂಗಶೆಟ್ಟಿ, ದರ್ಶನ್ ಧ್ರುವನಾರಯಣ್, ಅನಿಲ್ ಚಿಕ್ಕಮಾದು, ಕೆ. ಹರೀಶ್ ಗೌಡ, ತನ್ವೀರ್ ಸೇಠ್, ಮಾಜಿ ಶಾಸಕ ಆರ್. ನರೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಡಾ.ಡಿ. ತಿಮ್ಮಯ್ಯ, ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ವಿವಿಧ ಮಠಾಧೀಶರು ಭಾಗವಹಿಸುವರು ಎಂದು ಅವರು ಮಾಹಿತಿ ನೀಡಿದರು.ಆರೋಗ್ಯ,ರಕ್ತದಾನ ಶಿಬಿರ ಹಾಗೂ ಉದ್ಯೋಗ ಮೇಳ ಮತ್ತು ದೊಡ್ಡಸ್ವಾಮೇಗೌಡ ಅವರ ಜನ್ಮ ದಿನಾಚರಣೆಯಲ್ಲಿ ಭಾಗವಹಿಸುವ ಎಲ್ಲರಿಗೂ ವ್ಯವಸ್ಥಿತವಾದ ಮತ್ತು ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಕೆ.ಆರ್‌. ನಗರ ಮತ್ತು ಸಾಲಿಗ್ರಾಮ ತಾಲೂಕಿನ ಸಮಸ್ತ ಜನತೆ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆಯುವುದರ ಜತೆಗೆ, ನಾಯಕರನ್ನು ಆರಸಿ ಆಶೀರ್ವದಿಸಬೇಕೆಂದು ಅವರು ಕೋರಿದರು.ನಗರಾಧ್ಯಕ್ಷ ಎಂ.ಜೆ. ರಮೇಶ್, ಸಾಲಿಗ್ರಾಮ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್, ತಾಲೂಕು ಕುರುಬರ ಸಂಘದ ಕೆ.ಎಚ್. ಬುಡಿಗೌಡ, ಅರ್ಜುನ ಹಳ್ಳಿ ಗ್ರಾಪಂ ಅಧ್ಯಕ್ಷ ಎ.ಆರ್‌. ಮಹದೇವಪ್ಪ, ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಜಿಲ್ಲಾಧ್ಯಕ್ಷ ಪಿ. ಮಹದೇವ್ ಇದ್ದರು.

PREV

Recommended Stories

ಋತು ರಜೆ ಕೊಡದಿದ್ದರೆ ಕ್ರಮ : ಲಾಡ್‌
ಪ್ರೇಮಿ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ