ಕನ್ನಡಪ್ರಭ ವಾರ್ತೆ ಹಾಸನ
ಕಾಂಪೋಸಿಟ್ಸ್ ಕ್ಷೇತ್ರದಲ್ಲಿ ಸಂಶೋಧನೆ ನಡೆಸುತ್ತಿರುವ ಡಾ. ಮಧು ಪಿ ಅವರ ೧೧೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಅಂತಾರಾಷ್ಟ್ರೀಯ ಮನ್ನಣೆ ಪಡೆದ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಪಾದಕರಾಗಿ ತಮ್ಮ ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ೪ ಪುಸ್ತಕಗಳನ್ನು ರೂಪಿಸಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ. ಥೈಲ್ಯಾಂಡ್‌ನ ಕಿಂಗ್ ಮಾಂಗ್‌ಕುಟ್ಸ್ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿರುವ ಡಾ. ಯಶಸ್ ಗೌಡ ಟಿ ಜಿ ಅವರು, ಪಾಲಿಮರ್ ಕಾಂಪೋಸಿಟ್ಸ್ ಕ್ಷೇತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ಇವರ ೩೫ ಸಂಶೋಧನಾ ಪ್ರಬಂಧಗಳು ಅಂತಾರಾಷ್ಟ್ರೀಯ ಮನ್ನಣೆ ಪಡೆದ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಪಾದಕರಾಗಿ ತಮ್ಮ ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ೨ ಪುಸ್ತಕಗಳನ್ನು ರೂಪಿಸಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಮೂರು ವರ್ಷಗಳಿಂದ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ.