ಎಂಡಿಎಂಎ ಸಾಗಾಟ, ಮೂವರ ಸೆರೆ, ಸೊತ್ತು ವಶ

KannadaprabhaNewsNetwork |  
Published : Aug 31, 2024, 01:38 AM IST
11 | Kannada Prabha

ಸಾರಾಂಶ

ಆರೋಪಿಗಳಿಂದ 2,10,000 ರು. ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್‌ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ

ಕನ್ನಡಪ್ರಭ ವಾರ್ತೆ ಮಂಗಳೂರು

ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, 42 ಗ್ರಾಂ ಎಂಡಿಎಂಎಯನ್ನು ಗುರುವಾರ ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿದ್ದಾರೆ.ಕಾಸರಗೋಡು ಚಂದ್ರಗಿರಿ ಕಳನಾಡು ಕೀಯೂರು ನಿವಾಸಿ ಶಾಜಹಾನ್ ಪಿ.ಎಂ. (32), ಅಡೂರು ದೇವರಡ್ಕ ನಿವಾಸಿ ಮೊಹಮ್ಮದ್ ನಿಶಾದ್(27), ಮಡಿಕೇರಿಯ ಅಬ್ಬಿಪಾಲ್ಸ್ ರಸ್ತೆ ನಿವಾಸಿ ಮನ್ಸೂರು ಎಂ.ಎಂ(27) ಬಂಧಿತರು.ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್‌ಐಟಿಕೆ ಮುಕ್ಕ ಪರಿಸರದಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ 2,10,000 ರು. ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್‌ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 12,18,500 ರು. ಆಗಬಹುದು. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಹೊಸ ಕಾರನ್ನು ಬಾಡಿಗೆಗೆ ಪಡೆದು ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದರು.ಆರೋಪಿಗಳ ಪೈಕಿ ಶಾಜಹಾನ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆ ಮೇಲ್ಪರಂಬ, ಬೇಕಲಂ, ವಿದ್ಯಾನಗರ, ಕುಂಬಳೆ, ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ, ಸೇವನೆಗೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ ದಾಖಲಾಗಿವೆ. ಇನ್ನೋರ್ವ ಆರೋಪಿ ಮೊಹಮ್ಮದ್ ನಿಶಾದ್ ಎಂಬಾತನ ವಿರುದ್ಧ ಪುತ್ತೂರು ನಗರ ಹಾಗೂ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್, ಪಿಎಸ್‌ಐ ನರೇಂದ್ರ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು