ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ತಪ್ಪದೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜಯಂತಿ ಅಂಗವಾಗಿ ಕನಕ ವೃತ್ತದಿಂದ ತರಾಸು ರಂಗಮಂದಿರದವರೆಗೆ ಸ್ತಬ್ಧಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ, ಕೃಷಿ, ತೋಟಗಾರಿಕೆ, ಶಿಕ್ಷಣ, ಅರಣ್ಯ, ಆರೋಗ್ಯ ಇಲಾಖೆ ಸೇರಿದಂತೆ 10 ಹೆಚ್ಚು ಇಲಾಖೆಗಳು ಸರ್ಕಾರದ ಯೋಜನೆಗಳ ಮಹತ್ವ ಸಾರುವ ಆಕರ್ಷಕ ಸ್ತಬ್ದಚಿತ್ರಗಳನ್ನು ರಚಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಲ್ಲಾ ತಾಲೂಕುಗಳಿಂದಲೂ ವೈವಿದ್ಯಮಯವಾದ ಕಲಾತಂಡಗಳನ್ನು ಕರೆತಂದು ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ಅಂಬೇಡ್ಕರ್ ಜಯಂತಿಯಂದು ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಿಗೆ ನಗರ ಸಭೆಯಿಂದ ಅಲಂಕಾರ ಮಾಡಬೇಕು. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಟ್ರಾಕ್ಟರ್ ಸಿದ್ಧಪಡಿಸಬೇಕು. ತರಾಸು ರಂಗಮಂದಿರದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿಯೂ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು.
ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.