ಕ್ಷೇತ್ರದ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ: ಮಿಥುನ್ ಪಾಟೀಲ

KannadaprabhaNewsNetwork |  
Published : Jul 03, 2026, 02:45 AM IST
1 ರೋಣ 1. ₹49 ಲಕ್ಷ ವರ್ಷದ ಚ್ವದಲ್ಲಿ 1 ಕಿ.ಮಿ ಜಕ್ಕಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೋಣ ತಾಲೂಕ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮಿಥುನ‌ ಪಾಟೀಲ ಭೂಮಿಪೂಜೆ ನೇರವೇರಿಸಿದರು.  | Kannada Prabha

ಸಾರಾಂಶ

ರೋಣ ಕ್ಷೇತ್ರದಲ್ಲಿ ₹50 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಕಾಲೇಜು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಮತ್ತೆ ಕೆಲವು ಪ್ರಗತಿಯಲ್ಲಿವೆ.

ರೋಣ: ಪಟ್ಟಣ ಸೇರಿದಂತೆ ಮತಕ್ಷೇತ್ರದ ಪ್ರತಿ ಗ್ರಾಮ, ಪಟ್ಟಣಗಳ ಸಮಗ್ರ ಅಭಿವೃದ್ಧಿ ಹಾಗೂ ಸೌಕರ್ಯ ಕಲ್ಪಿಸುವಲ್ಲಿ ಅಗತ್ಯ ಕ್ರಮಗಳನ್ನು ಶಾಸಕ ಜಿ.ಎಸ್. ಪಾಟೀಲ ಅವರು ಕೈಗೊಳ್ಳುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದಾರೆ ಎಂದು ರೋಣ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ ತಿಳಿಸಿದರು.ಬುಧವಾರ ಪಟ್ಟಣದ ಜಕ್ಕಲಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆ ವತಿಯಿಂದ ₹49 ಲಕ್ಷ ವೆಚ್ಚದಲ್ಲಿ 1 ಕಿಮೀ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ ಶಾಸಕರು ಪಟ್ಟಣದ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ₹20 ಕೋಟಿ ವೆಚ್ಚದಲ್ಲಿ ಪಟ್ಟಣದ ಮದ್ಯ ಭಾಗದಲ್ಲಿ ವೈಟ್ ಟ್ಯಾಪಿಂಗ್ ರೋಡ್, ರೋಣ, ನರೇಗಲ್ಲ, ಗಜೇಂದ್ರಗಡ ಪಟ್ಟಣದ ಜಗಳೂರ ಕೆರೆ ಮೂಲಕ ಸಮರ್ಪಕ ಕುಡಿಯುವ ನೀರು ಪೂರೈಕೆ, ಒಳಚರಂಡಿ ವ್ಯವಸ್ಥೆ, ಒಳ ಕ್ರೀಡಾಂಗಣ, ಈಜುಕೊಳ, ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ನಿರ್ಮಾಣಕ್ಕೆ ₹5 ಕೋಟಿ, ಪ್ರಾಚೀನ ದೇಗುಲಗಳ ಪುನಶ್ಚೇತನ, ₹50 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಕಾಲೇಜು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಮತ್ತೆ ಕೆಲವು ಪ್ರಗತಿಯಲ್ಲಿವೆ ಎಂದರು.ಕಾರ್ಯಕ್ರಮದಲ್ಲಿ ಬಾವಾಸಾಬ ಬೆಟಗೇರಿ, ಅಶೋಕ ಗಡಗಿ, ಸಂಗು ನವಲಗುಂದ, ಯಲ್ಲಪ್ಪ ಕಿರೇಸೂರ, ಅಶೋಕ ಗಡಗಿ, ನಾಗಪ್ಪ ದೇಶಣ್ಣವರ, ಶಿವಪುತ್ರಪ್ಪ ದೊಡ್ಡಮನಿ, ದಾವಲಸಾಬ ಬಾಡಿನ, ಕಲೀಲ ಅಹ್ಮದ್ ರಾಮದುರ್ಗ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಒಪಿಎಸ್‌ಗೆ ಆಗ್ರಹಿಸಿ ನಾಳೆ ಮನವಿ

ಲಕ್ಷ್ಮೇಶ್ವರ: ರಾಜ್ಯದಲ್ಲಿನ ಖಾಸಗಿ ಅನುದಾನಿತ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುವ ನೌಕರರಿಗೆ ಒಪಿಎಸ್‌ ಸೌಲಭ್ಯ ನೀಡುವಂತೆ ಆಗ್ರಹಿಸಿ ಜು. 4ರಂದು ಪಟ್ಟಣದ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಾಲೂಕು ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಲ್.ಎಸ್. ಅರಳಿಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಗೆ ಸಭೆ ಸೇರಿ ನಂತರ ಪಾದಯಾತ್ರೆಯ ಮೂಲಕ ಸಂಜೆ 4 ಗಂಟೆಗೆ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡಗಿನಾದ್ಯಂತ ಬಿರುಸು ಪಡೆದ ಮಳೆ
ಮಾದಕ ವಸ್ತು ವಿರೋಧಿ ದಿನ ಆಚರಣೆ