ಹೊಸಪೇಟೆ: ಹಂಪಿ ಐತಿಹಾಸಿಕ ಮತ್ತು ಪ್ರಮುಖ ಸ್ಥಳವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಜಿಲಾಜಿಕಲ್ ಪಾರ್ಕ್‌ನ್ನು ಅಭಿವೃದ್ಧಿಪಡಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಮತ್ತು ಹೆಚ್ಚುವರಿಯಾಗಿ ₹3 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಕೆ. ರಾಮಲಿಂಗಾ ರೆಡ್ಡಿ ಹೇಳಿದರು.
ವಿಜಯನಗರ ಜಿಲ್ಲಾ ಖನಿಜ ಪ್ರತಿಷ್ಠಾನ ಮತ್ತು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅನುದಾನ ಹಾಗೂ ವಿವಿಧ ಗಣಿ ಸಂಸ್ಥೆಗಳ ನೆರವಿನಿಂದ ಅಟಲ್ ಬಿಹಾರಿ ವಾಜಪೇಯಿ ಜಿಲಾಜಿಕಲ್ ಪಾರ್ಕ್ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಆಕರ್ಷಕ ಹೊಸ ಪ್ರವೇಶ ದ್ವಾರ, ಹೊಸ ಕ್ಯಾಂಟಿನ, ಮಾಹಿತಿ ಕೇಂದ್ರ, ಪಾರ್ಕ್ ಆವರಣದಲ್ಲಿ ಪ್ರಾಣಿಗಳಿಗೆ ಹೊಸ ಕೇಜ್, ಪ್ರವಾಸಿಗರಿಗೆ ವಿಶ್ರಾಂತಿ ತಾಣ, ಮಕ್ಕಳಿಗೆ ಹಾಲುಣಿಸುವ ತಾಯಂದಿರ ಕೊಣೆ, ವೈಲ್ಡ್ ಲೈಪ್ ರೆಸ್ಕ್ಯೂ ಕೇಂದ್ರ, ಕಿಯೋಸ್ಕ್, ಮಾಂಸಭಕ್ಷಕ ಪ್ರಾಣಿಗಳ ಸಂರಕ್ಷಣಾ ಕೇಂದ್ರ ಸೇರಿದಂತೆ ಹಲವು ಸೌಲಭ್ಯ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.
ಪಾರ್ಕ್ ಆವರಣದಲ್ಲಿ ಪ್ರಾಣಿ,ಪಕ್ಷಿಗಳಿಗೆ ನೀರು, ಮೇವು, ಆಹಾರ ಕಡಿಮೆ ಆಗದಂತೆ ನೋಡಿಕೊಳ್ಳಲಾಗಿದೆ. ನಿರಂತರ ನೀರು ಪೂರೈಕೆ ಹಾಗೂ ತುರ್ತು ಸಂದರ್ಭಗಳಲ್ಲಿ ಬಳಕೆಗೆ ಸೋಲಾರ ಚಾಲಿತ ಬೋರವೇಲ್ ಅಳವಡಿಸಲಾಗಿದೆ. ಪ್ರಾಣಿಗಳಿಗೆ ನೆರಳು ಕಲ್ಪಸಲಾಗಿದೆ. ಸಸ್ಯಗಳ ನಿರ್ವಹಣೆಗೆ ಸ್ಪ್ರಿಂಕ್ಲರ್ ವ್ಯವಸ್ಥೆ, ಸೋಲಾರ್ ಬೋರ್‌ವೆಲ್ ವ್ಯವಸ್ಥೆ ಮಾಡಲಾಗಿದೆ. ಮೃಗಾಲಯಕ್ಕೆ ಇನ್ನಷ್ಟು ಹೊಸ ಪ್ರಾಣಿ ತರಿಸುವ ಉದ್ದೇಶವಿದ್ದು, ಪ್ರಾಣಿಗಳ ಆರೋಗ್ಯ ಮತ್ತು ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ, ಹೊಸಪೇಟೆ ಶಾಸಕ ಎಚ್.ಆರ್.ಗವಿಯಪ್ಪ, ಸಂಸದ ಈ. ತುಕಾರಾಮ್, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥ ರವಿ.ಬಿ.ಪಿ., ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ನಾಯಕ ಕೆ., ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಎಸ್ಪಿ ಎಸ್. ಜಾಹ್ನವಿ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ರವಿಶಂಕರ ಎಸ್.ಎಸ್., ವಿಜಯನಗರ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ಬಂಡಿಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯ ಸೇನ್, ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಾಜೇಶ್ ನಾಯ್ಕ್. ಎಸ್.,ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ನಾಯಕ್, ಸುರೇಶ, ಗೋಪೆ ನಾಯಕ್ ಜಿ, ಹರ್ಷವರ್ಧನ, ವಲಯ ಅರಣ್ಯ ಅಧಿಕಾರಿ ಭರತ ಎಂ.ಎ.,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಡಿ.ಎಲ್,ಆರ್ ಎಫ್‌ಓ ರಮೇಶ ಜಿ, ಸೇರಿದಂತೆ ಸರಣ್ಯ ಇಲಾಖೆಯ ಅನೇಕ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.