ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ: ರಮೇಶ ಹ್ಯಾಟಿ

KannadaprabhaNewsNetwork |  
Published : Oct 02, 2026, 02:30 AM IST
ಕುಡಿಯುವ ನೀರಿನ ಸಮಸ್ಯೆ ಕುರಿತು ಭಾಗ್ಯನಗರ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ರಮೇಶ ಹ್ಯಾಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. | Kannada Prabha

ಸಾರಾಂಶ

ಕೊಪ್ಪಳ ಜಿಲ್ಲೆಯ ಭಾಗ್ಯನಗರ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಸಭೆ ನಡೆಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ ಲಕ್ಷ್ಮಪ್ಪ ಹ್ಯಾಟಿ ಅಧ್ಯಕ್ಷತೆ ವಹಿಸಿದ್ದರು.

ಭಾಗ್ಯನಗರ: ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ ಲಕ್ಷ್ಮಪ್ಪ ಹ್ಯಾಟಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಕುಡಿಯುವ ನೀರು ಪೂರೈಕೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾಗ್ಯನಗರ ಪಟ್ಟಣದ 1ರಿಂದ 19ನೇ ವಾರ್ಡ್‌ಗಳಿಗೆ ಬೋರ್‌ವೆಲ್‌ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಮಳೆಯ ಕೊರತೆಯಿಂದ ಅಂತರ್ಜಲ ಪ್ರಮಾಣ ಕಡಿಮೆಯಾಗಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬೋರ್‌ವೆಲ್‌ಗಳ ದುರಸ್ತಿ, ಪೈಪ್‌ಲೈನ್‌ಗಳ ಲಿಕೇಜ್ ಹಾಗೂ ಬ್ಲಾಕೇಜ್‌ಗಳನ್ನು ತುರ್ತಾಗಿ ಸರಿಪಡಿಸಬೇಕು ಎಂದು ಸೂಚಿಸಿದರು.

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರದೇಶ, ಗಂಧಾಗರ ಲೇಔಟ್, ಹಮಾಲರ ಕಾಲನಿ, ರಾಮಚಂದ್ರರಾವ್ ಪೊಲೀಸ್ ಕಾಲನಿ, ಅಗಡಿ ಲೇಔಟ್ ಸೇರಿದಂತೆ ನೀರಿನ ಸಮಸ್ಯೆ ಕಂಡುಬರುವ ಪ್ರದೇಶಗಳಲ್ಲಿ ತುರ್ತು ಕ್ರಮ ಕೈಗೊಂಡು ಸಮರ್ಪಕ ನೀರು ಪೂರೈಸಬೇಕು. ಎಲ್ಲ ವಾಟರ್‌ಮ್ಯಾನ್‌ಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಭಾಗ್ಯನಗರದ ರುದ್ರಭೂಮಿಯಲ್ಲಿ ನೆಡಲಾಗಿರುವ ಸಸಿಗಳ ಸಂರಕ್ಷಣೆಗೆ ಪ್ರತಿದಿನ ಕ್ರಮ ಕೈಗೊಳ್ಳಬೇಕು ಎಂದರು.

ಅಮೃತ್-2.0 ಯೋಜನೆಯ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದ ಅಧ್ಯಕ್ಷರು, ಪಟ್ಟಣದ ಪ್ರತಿಯೊಂದು ಮನೆಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆಯೇ ಹಾಗೂ ಮೀಟರ್ ಅಳವಡಿಸಲಾಗಿದೆಯೇ ಎಂಬುದರ ಕುರಿತು ವಾಟರ್‌ಮ್ಯಾನ್‌ಗಳು ಸಮೀಕ್ಷೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಮುಖ್ಯಾಧಿಕಾರಿ ಸುರೇಶ ಬಬಲಾದ, ಕಿರಿಯ ಅಭಿಯಂತರ ಶಿವರಾಜ ಟಿ., ನೀರು ಸರಬರಾಜು ಮೇಲ್ವಿಚಾರಕರಾದ ವೀರೇಶ ಮ್ಯಾಳಿ, ಪ್ರಮೋದ ಕರಮುಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟ್ಟ ಕೊಡವ ಸಮಾಜದಲ್ಲಿ ಕೈಲ್ ಪೋಳ್ದ್ ಒತ್ತೋರ್ಮೆ ಕೂಟ
ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ