ನಗರದ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಕ್ರಮ

KannadaprabhaNewsNetwork |  
Published : Jul 23, 2026, 01:15 AM IST
22ಕೆಆರ್ ಎಂಎನ್ 7.ಜೆಪಿಜಿರಾಮನಗರದ ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ರಾಮನಗರ: ನವ ಶಕ್ತಿ ದೇವತೆಗಳ ಕರಗಗಳ ಮಹೋತ್ಸವ ನಡೆಯುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು

ರಾಮನಗರ: ನವ ಶಕ್ತಿ ದೇವತೆಗಳ ಕರಗಗಳ ಮಹೋತ್ಸವ ನಡೆಯುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ನಗರದ ಕೆಂಪೇಗೌಡ ಬಡಾವಣೆಯಲ್ಲಿ ಸಂಪರ್ಕ ರಸ್ತೆಗೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ನಗರದೇವತೆ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ಕರಗ ಮಹೋತ್ಸವ ಜರುಗಲಿದೆ. ತದನಂತರ ಶ್ರೀ ಚಾಮುಂಡೇಶ್ವರಿ ಕರಗ ಹಾಗೂ ನವಶಕ್ತಿ ದೇವತೆಗಳ ಕರಗಗಳ ಮಹೋತ್ಸವ ನಡೆಯಲಿದೆ. ಕರಗ ಚಲಿಸುವ ಮಾರ್ಗ ಹಾಗೂ ನಾಗರೀಕರು ಹೆಚ್ಚಾಗಿ ಸಂಚರಿಸುವ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕೆಲಸ ನಡೆಯಲಿದೆ. ಸ್ವಚ್ಚತೆಗೆ ಹೆಚ್ಚು ಆದ್ಯತೆ ಕೊಡುತ್ತಿದ್ದೇವೆ ಎಂದರು.

ನಗರ ವ್ಯಾಪ್ತಿಯಲ್ಲಿ ಯುಐಡಿಎಫ್, ನಗರೋತ್ಥಾನ ಸೇರಿದಂತೆ ವಿವಿಧ ಯೋಜನೆಗಳಡಿಯಲ್ಲಿ ಕೈಬಿಟ್ಟು ಹೋಗಿರುವ ಮತ್ತು ತೀರಾ ಅಗತ್ಯವಿರುವೆಡೆ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ಕೊಡುತ್ತಿದ್ದೇವೆ

ಜಿಲ್ಲೆಯವರೇ ಆಗಿರುವ ಡಿ.ಕೆ.ಶಿವಕುಮಾರ್ ಅವರು ಈಗ ಮುಖ್ಯಮಂತ್ರಿಗಳಾಗಿದ್ದು, ಅವರಿಂದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಮಂಜೂರಾಗುವ ವಿಶ್ವಾಸವಿದೆ ಎಂದು ಕೆ.ಶೇಷಾದ್ರಿ ಪುನರುಚ್ಚರಿಸಿದರು.

ನಾಗರೀಕರ ಆಸೆಯಂತೆ ಡಿಕೆಶಿ ಸಿಎಂ ಆಗಿದ್ದಾರೆ. ರಾಮನಗರವನ್ನು ಮಾದರಿ ನಗರವನ್ನಾಗಿ ರೂಪಿಸುವ ಭರವಸೆಯನ್ನು ಡಿ.ಕೆ.ಶಿವಕುಮಾರ್ ನೀಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಹಂತ, ಹಂತವಾಗಿ ಎಲ್ಲಾ ಮೂಲ ಸೌಕರ್ಯಗಳನ್ನು ನೀಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು.

ಡಿ.ಕೆ.ಶಿವಕುಮಾರ್ ಅವರಿಂದ ಹೆಚ್ಚಿನ ಅನುದಾನವನ್ನು ನಿರೀಕ್ಷಿಸುತ್ತಿದ್ದೇವೆ. ಅಭಿವೃದ್ಧಿ ಬಗ್ಗೆ ಜನರು ಆಶಯ ಇಟ್ಟುಕೊಂಡಿದ್ದಾರೆ. ಡಿಕೆಶಿರವರು ಅಭಿವೃದ್ದಿ ವಿಚಾರದಲ್ಲಿ ಆಶೀರ್ವಾದ ಮಾಡುತ್ತಾರೆ. ಮಾದರಿ ನಗರವನ್ನಾಗಿ ರೂಪಿಸಲು ಕಾರ್ಯ ಪ್ರವೃತ್ತರಾಗುತ್ತಾರೆಂದು ಆಶಿಸಿದ್ದೇವೆ ಎಂದು ಹೇಳಿದರು.

ಕೆಂಪೇಗೌಡ ಬಡಾವಣೆಯಲ್ಲಿರುವ ಸಂಪರ್ಕ ರಸ್ತೆಗಳು ತೀರಾ ಹದಗೆಟ್ಟು ಹೋಗಿದ್ದು, ಅಭಿವೃದ್ದಿ ಪಡಿಸುವಂತೆ ನಗರಸಭಾ ಸದಸ್ಯ ಮಂಜುನಾಥ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜುನಾಥ್ ಮತ್ತು ಕೆಡಿಪಿ ಸದಸ್ಯ ಪುಟ್ಟಸ್ವಾಮಯ್ಯ ಹಾಗೂ ಬಡಾವಣೆಯ ನಾಗರೀಕರು ಬೇಡಿಕೆ ಇಟ್ಟಿದ್ದರು. ಅತ್ಯಗತ್ಯವಾಗಿ ಆಗಬೇಕಾಗಿರವ ಕಾಮಗಾರಿ ಆಗಿದ್ದು, ನಗರಸಭಾ ನಿಧಿಯಿಂದ ಕೈಗೆತ್ತಿಕೊಳ್ಳಲಾಗಿದೆ ಎಂದು ಕೆ.ಶೇಷಾದ್ರಿ ತಿಳಿಸಿದರು.

ನಗರಸಭಾ ಸದಸ್ಯ ಮಂಜುನಾಥ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜು, ಕೆಡಿಪಿ ಸದಸ್ಯ ಪುಟ್ಟಣ್ಣ, ನಗರಸಭೆಯ ಮಾಜಿ ಉಪಾಧ್ಯಕ್ಷ ನಾಗೇಶ್, ಪ್ರಾಧಿಕಾರ ನಿರ್ದೇಶಕ ಪ್ರವೀಣ್, ಮುಖಂಡರಾದ ಕೃಷ್ಣಪ್ಪ, ಪುಟ್ಟಸ್ವಾಮಿ, ಲಕ್ಷ್ಮೀಪತಿ ಮತ್ತಿತರರು ಹಾಜರಿದ್ದರು.

----------------------

22ಕೆಆರ್ ಎಂಎನ್ 7.ಜೆಪಿಜಿ

ರಾಮನಗರದ ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಭೂಮಿ ಪೂಜೆ ನೆರವೇರಿಸಿದರು.

-----------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಸೋರಿಕೆ: ಮೋದಿ ಜವಾಬ್ದಾರಿ ಹೊರಲಿ
ಪ್ಲಾಸ್ಟಿಕ್ ಮುಕ್ತ ಸುರಪುರ ನಿರ್ಮಾಣಕ್ಕೆ ಕೈಜೋಡಿಸಿ