ಮಕ್ಕಳಲ್ಲಿ ವಿಜ್ಞಾನ, ಖಗೋಳ ಆಸಕ್ತಿ ಹೆಚ್ಚಿಸಲು ಕ್ರಮ

KannadaprabhaNewsNetwork |  
Published : Jan 21, 2025, 12:33 AM IST
ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್‌ನಲ್ಲಿ ಸೋಮವಾರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಸಚಿವ ಎನ್.ಎಸ್.ಭೋಸರಾಜು ಮಾತನಾಡಿದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ‌ ಕುರಿತು ಆಸಕ್ತಿ ಹಾಗೂ ಹೆಚ್ಚಿನ ಜ್ಞಾನ ಒದಗಿಸುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಹಿಡಕಲ್ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್‌.ಎಸ್‌.ಭೋಸರಾಜು ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ರಾಜ್ಯ ಸರ್ಕಾರ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ‌ ಕುರಿತು ಆಸಕ್ತಿ ಹಾಗೂ ಹೆಚ್ಚಿನ ಜ್ಞಾನ ಒದಗಿಸುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಹಿಡಕಲ್ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್‌.ಎಸ್‌.ಭೋಸರಾಜು ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಿಡಕಲ್‌ ಉದ್ಯಾನಕಾಶಿಯಲ್ಲಿ ಸೋಮವಾರ ರಾಜಾ ಲಖಮಗೌಡ ಉದ್ಯಾನಕಾಶಿ ಅಭಿವೃದ್ಧಿ ಯೋಜನೆಯಡಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 8 ರಿಂದ 9 ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪನೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.ಬೆಂಗಳೂರಿನ ಹೆಬ್ಬಾಳದಲ್ಲಿ ಏಷ್ಯಾ ಖಂಡದಲ್ಲಿ ನಂಬರ್ ಒನ್ ಮಾದರಿಯಲ್ಲಿ ಸೈನ್ಸ್ ಗ್ಯಾಲರಿ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗಿದೆ. ಪ್ರತಿ‌ ಜಿಲ್ಲೆಗಳಲ್ಲಿ ತಾರಾಲಯ‌ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ. ಚಿಕ್ಕಮಗಳೂರ‌ ಜಿಲ್ಲೆಯ ಪಿಲಿಕುಳಿಯಲ್ಲಿ 350 ಎಕರೆ ಪ್ರದೆಶದಲ್ಲಿ‌ ದೇಶದಲ್ಲಿ‌ಯೇ ಅತೀ ದೊಡ್ಡ ತಾರಾಲಯ ಸ್ಥಾಪಿಸಲಾಗಿದೆ. ಸರ್ಕಾರದ ವತಿಯಿಂದ ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆ ಹಾಗೂ ಲ್ಯಾಬರೋಟರಿ ಸ್ಥಾಪಿಸಲಾಗುವುದು. ಇಂದು ತಾರಾಲಯ‌ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಸಲಾದ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸದ್ದಲ್ಲಿ ಈ ತಾರಾಲಯ ಇನ್ನೂ ಮೇಲ್ದರ್ಜೆಗೆ ಏರಿಸಲು‌ ಕ್ರಮ‌ವಹಿಸಲಾಗುವುದು ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯ ವಿವಿಧೆಡೆ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಗೊಳಗಿದೆ. ಆದಷ್ಟು ಬೇಗ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಶೀಘ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಭರವಸೆ ನೀಡಿದರು.ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಮೊದಲ ಯೋಜನೆ ಇದಾಗಿದೆ. ನೀರಾವರಿ ಇಲಾಖೆಯಿಂದ 35 ಎಂ.ಐ ಟ್ಯಾಂಕ್, ಹನಿ ನೀರಾವರಿ, 19 ಕೆರೆಗಳ ತುಂಬುವ ಯೋಜನೆ ಸೇರಿದಂತೆ ಹುಕ್ಕೇರಿ ತಾಲೂಕಿನ ಅಭಿವೃದ್ಧಿಗೆ ₹30 ಕೋಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿವೆ ಎಂದು ತಿಳಿಸಿದರು.ಹುಕ್ಕೇರಿ ತಹಸೀಲ್ದಾರ್ ಮಂಜುಳಾ ನಾಯಕ, ಕರ್ನಾಟಕ ನೀರಾವರಿ ನಿಗಮ ನಿಯಮಿತ ಬೆಳಗಾವಿ ಉತ್ತರ ವಲಯದ ಮುಖ್ಯ ಇಂಜಿನಿಯರ್ ಬಿ.ಆರ್.ರಾಠೋಡ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ನೀರಾವರಿ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಈಗಾಗಲೇ ₹13 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ತಾರಾಲಯ ಉಪಯೋಗವಾಗಲಿದೆ. ಜಿಲ್ಲೆಯಲ್ಲಿ ಪ್ರವಾಸೊದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸಿ ಸರ್ಕಿಟ್ ನಿರ್ಮಿಸಲು ಗೋಕಾಕ ಫಾಲ್ಸ್, ಬೆಳಗಾವಿಯ ರಾಣಿ ಚನ್ನಮ್ಮ‌ ಮೃಗಾಲಯ ಹಾಗೂ ಹಿಡಕಲ್ ಡ್ಯಾಂ‌ ಯೋಜ‌ನೆಯೊಂದಿಗೆ ಪ್ರವಾಸಿ ಸರ್ಕಿಟ್ ನಿರ್ಮಿಸುವ ಯೋಜನೆ ಸರ್ಕಾರದ್ದಾಗಿದೆ. ಹಿಡಕಲ್ ಡ್ಯಾಂ ಹಿನ್ನೀರಿನಲ್ಲಿ ಜಲಕ್ರೀಡೆಗಳಿಗೂ ಪ್ರಾಶಸ್ತ್ಯವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು.

-ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!