ಇನ್ನಷ್ಟು ಕೆ.ಪಿ.ಎಸ್.ಶಾಲೆಗಳನ್ನು ಆರಂಭಿಸಲು ಕ್ರಮ: ಸಚಿವ ಮಧು ಬಂಗಾರಪ್ಪ

KannadaprabhaNewsNetwork |  
Published : Sep 08, 2026, 01:45 AM IST
ಪೊಟೋ: 07ಎಸ್‌ಎಂಜಿಕೆಪಿ01ಶಿವಮೊಗ್ಗ ನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು.  | Kannada Prabha

ಸಾರಾಂಶ

ಕರ್ನಾಟಕ ಪಬ್ಲಿಕ್‌ ಶಾಲೆಗಳ ಉದ್ಘಾಟನೆ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಕೋಟ್ಯಾಂತರ ರು. ವೆಚ್ಚದ ಯೋಜನೆಗಳ ರಾಜ್ಯಮಟ್ಟದ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಕೇಂದ್ರದಲ್ಲಿಯೇ ಆಯೋಜಿಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿಗಳ ದಿನಾಂಕ ನಿಗಧಿಯ ನಂತರ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ ಕರ್ನಾಟಕ ಪಬ್ಲಿಕ್‌ ಶಾಲೆಗಳ ಉದ್ಘಾಟನೆ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಕೋಟ್ಯಾಂತರ ರು. ವೆಚ್ಚದ ಯೋಜನೆಗಳ ರಾಜ್ಯಮಟ್ಟದ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಕೇಂದ್ರದಲ್ಲಿಯೇ ಆಯೋಜಿಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿಗಳ ದಿನಾಂಕ ನಿಗಧಿಯ ನಂತರ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಪಿ.ಎಸ್.ಶಾಲೆಗಳಲ್ಲಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದ ಅವಧಿಯಲ್ಲಿಯೂ ರಾಜ್ಯದೆಲ್ಲೆಡೆ ಕೆ.ಪಿ.ಎಸ್.ಶಾಲೆಗೆ ನಿಗಧಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಮಕ್ಕಳ ದಾಖಲಾತಿ ಕಂಡುಬಂದಿದೆ. ಈ ಹಿಂದೆ ನಿಗಧಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೆ.ಪಿ.ಎಸ್.ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಡಿ.ಪಿ.ಆರ್.ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರತಿ ಕೆ.ಪಿ.ಎಸ್‌ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು 3-9 ಕೋಟಿ ರು.ಗಳ ವ್ಯಯ ಮಾಡಲಾಗುವುದು, ಅಲ್ಲದೇ ಶಾಲಾ ಶಿಕ್ಷಣ ವ್ಯವಸ್ಥೆಗೆ ಅಗತ್ಯವಾಗಿರುವ ಪಠ್ಯ, ಕ್ರೀಡೆ, ಸಂಗೀತ ಸೇರಿದಂತೆ ಎಲ್ಲಾ ಶಿಕ್ಷಕರನ್ನು ನೇಮಿಸಲಾಗುವುದು. ಅಂತೆಯೇ ಶಾಲಾ ಮಕ್ಕಳಿಗೆ ಬಸ್‌ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಸಮಾಜಕ್ಕೆ ನೀಡುವ ನಿಸ್ವಾರ್ಥ ಸೇವೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗೌರವಿಸುವ ಉದ್ದೇಶದಿಂದ ವೈದ್ಯರಿಗೆ ''''''''Dr.'''''''' ಹಾಗೂ ಪ್ರಾಧ್ಯಾಪಕರಿಗೆ ''''''''Prof.'''''''' ಎಂದು ಕರೆಯುವಂತೆ ಸುಮಾರು 4.5 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ''''''''Tr.'''''''' (Teacher - ಟೀಚರ್) ಎಂಬ ಗೌರವಸೂಚಕ ಪೂರ್ವಪ್ರತ್ಯಯವನ್ನು ಬಳಸಲು ಅಧಿಕೃತ ಅನುಮತಿ ನೀಡಿ ಗೌರವಿಸಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಶಾಲಾ ದಾಖಲಾತಿಯಲ್ಲಿ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಪ್ರಮಾಣದ ಹೆಚ್ಚಳವಾಗಿದ್ದರಿಂದ ಪಠ್ಯಪುಸ್ತಕ ಪೂರೈಕೆಯಲ್ಲಿ ಅಲ್ಪಪ್ರಮಾಣದ ವ್ಯತ್ಯಯ ಉಂಟಾಗಿದ್ದು, ಶೀಘ್ರದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದರು.ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ-ಸಾಕ್ಸ್‌ ಒದಗಿಸಲು ರಾಜ್ಯಮಟ್ಟದಲ್ಲಿ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ವರ್ಷದಿಂದಲೇ ಉಚಿತ ನೋಟ್‌ ಪುಸ್ತಕವನ್ನು ವಿತರಿಸಲಾಗುತ್ತಿದೆ ಎಂದರು. ಗ್ರಾಮೀಣ ಮಕ್ಕಳಿಗೆ ನಗರ ಜೀವನವನ್ನು ಪರಿಚಯಿಸುವ ಸದುದ್ದೇಶದಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಟಾನಗೊಳಿಸಲಾಗುವುದು ಎಂದರು.ಗೋಷ್ಠಿಯಲ್ಲಿ ಮುಖಂಡರಾದ ಆಯನೂರು ಮಂಜುನಾಥ್‌, ಯೋಗೀಶ್‌, ಚೇತನ್‌ಗೌಡ, ರಮೇಶ್‌, ರವಿಕುಮಾರ್‌, ಜಿ.ಡಿ.ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿಂಗ್‌ಪಿನ್‌ ಕನ್ನಾಳೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದವರಾರು?: ಖಂಡ್ರೆ
ಬರ ಘೋಷಣೆ ಕೇಂದ್ರವೇ ಹೊಣೆ: ಸಚಿವ ಖಂಡ್ರೆ