ವೆಂಟ್ರನ್ಸ್ ಅಥ್ಲೆಟಿಕ್‌ನಲ್ಲಿ ಕೊಡಗಿನ ಕ್ರೀಡಾಪಟುಗಳಿಗೆ ಪದಕ

KannadaprabhaNewsNetwork |  
Published : Dec 03, 2025, 02:45 AM IST
ಕ್ರೀಡಾಪಟುಗಳು | Kannada Prabha

ಸಾರಾಂಶ

ಕೊಡಗಿನ ಕ್ರೀಡಾಪಟುಗಳು ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್‌ ಕ್ರೀಡಾಕೂಟ ವೆಂಟ್ರನ್ಸ್‌ ಅಥ್ಲೆಟಿಕ್ಸ್‌ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕೊಡಗಿನ ಕ್ರೀಡಾಪಟುಗಳು ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.ಈ ಕ್ರೀಡಾಕೂಟದಲ್ಲಿ ಕೊಡಗಿನ ಮಹಿಳಾಮಣಿಗಳದ್ದೇ ಸಿಂಹ ಪಾಲು ಸೇರಿದಂತೆ 8. ಕ್ರೀಡಾಪಟುಗಳು ಪಾಲ್ಗೊಂಡು ಅತ್ಯುತ್ತಮ ಸಾಧನೆಯೊಂದಿಗೆ ಬಹುತೇಕ ಪದಕಗಳನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ನಾ೦ಗಾಲ ಬಿಟ್ಟಂಗಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮ ಭಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಜವಾಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ ಮನು ಭಾರದ ಗುಂಡು ಎಸೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಟಿ ಶೆಟ್ಟಿಗೇರಿ ಪೆಮ್ಮಂಡ ಸಬಿತ ಕುಶಾಲಪ್ಪ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಜವಲೀನ್ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಐಮೂಡಿಯಂಡ ಶೈಲಾ ಕುಶಲನಗರ ಇವರು 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.ಪಟ್ಟಚೆರುವಂಡ ಗಗನ್ ಮೇದಪ್ಪ (ಜಿಮ್ಮ ) 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ, 100 ಮೀಟರ್ ಓಟದ ಅರ್ಡಲ್ಸ್ ರನ್ನಿಂಗ್ ನಲ್ಲಿ ಪ್ರಥಮ ಸ್ಥಾನ, ತಟ್ಟೆ ಎಸೆತದಲ್ಲಿ ಪ್ರಥಮ ಗಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಕೋಮಲಾಪುರ ಗ್ರಾಮದ ಆಶಾ ಅನಂತಕುಮಾರ್ ಬಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ಹ್ಯಾಮರ ಥ್ರೋ ನಲ್ಲಿ ಪ್ರಥಮ ಸ್ಥಾನ ಗಳಿಸಿದರೆ .ಮುಳ್ಳೆರ ಪೊನ್ನಮ್ಮ ಜವಲೀನ್ ಎಸೆತದಲ್ಲಿ ಪ್ರಥಮ ಪ್ರಥಮ ಸ್ಥಾನ , ಭಾರದ ಗುಂಡ ಎಸೆತದಲ್ಲಿ ಪ್ರಥಮ ಸ್ಥಾನ , 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ತಟ್ಟೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.

ಬಿಟ್ಟಂಗಲ ಬಾಲುಗೋಡು ನಿವಾಸಿ ಶಾಂತಿ ಬೆಳ್ಯಯಪ್ಪ ಗುಂಡು ಎಸೆತ ಪ್ರಥಮ, ಜವಲೀನ್ ಎಸೆತದಲ್ಲಿ ದ್ವಿತೀಯ ಸ್ಥಾನ , ಹ್ಯಾಮರ್ ಎಸೆತ ತೃತೀಯ ಸ್ಥಾನ ಗಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರಳು ಮಾಫಿಯಾದಿಂದ ಶಾಸಕಿ ಕರೆಮ್ಮಗೆ ಬೆದರಿಕೆ
ಉಡುಪಿಯ ಕೃಷ್ಣಮಠದಲ್ಲಿ ಇನ್ನು ಭಕ್ತರಿಗೆ ಕಟ್ಟುನಿಟ್ಟಿನ ನಿಯಮ ಜಾರಿ