ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮಾಧ್ಯಮಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಅಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಚಿತ್ರದುರ್ಗ: ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮಾಧ್ಯಮಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಅಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮಾದರಿ ನೀತಿ ಸಂಹಿತೆ ಹಾಗೂ ಮಾಧ್ಯಮಗಳ ಹೊಣೆಗಾರಿಕೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಚುನಾವಣೆ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು ಹಾಗೂ ಮಾಧ್ಯಮಗಳೊಂದಿಗೆ ಸಮನ್ವಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಘಟಕ ತೆರೆಯಲಾಗುವುದು. ತುಮಕೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಚಿತ್ರದುರ್ಗ ಲೋಕಸಭಾ ಕ್ಷೇತಕ್ಕೆ ಸೇರುತ್ತವೆ. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಪ್ರಮಾಣೀಕರಣ ಪಡೆದುಕೊಳ್ಳಬೇಕು. ಮಾಧ್ಯಮಗಳು ಸುಳ್ಳು, ದ್ವೇಷ ಬಿತ್ತುವ ಹಾಗೂ ಪೇಯ್ಡ್ ನ್ಯೂಸ್ ಪ್ರಕಟಿಸಬಾರದು. ಇವುಗಳು ಮಾದರಿ ನೀತಿಯ ಸ್ಪಷ್ಟ ಉಲಂಘನೆಯಾಗುತ್ತವೆ. ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸುತ್ತದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಪ್ರಜಾಪ್ರಾತಿನಿಧ್ಯ ಕಾಯ್ದೆ ಅನ್ವಯ ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಜಿಲ್ಲಾ ಪಂಚಾಯಿತಿ ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿರಿ ಹೆಚ್.ಜೆ.ಕುಮಾರಸ್ವಾಮಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.