31ರಂದು ವರದಿಗಾರರ ಕೂಟದಿಂದ ಮಾಧ್ಯಮ ದಿನಾಚರಣೆ

KannadaprabhaNewsNetwork |  
Published : Jul 28, 2026, 01:30 AM IST
27ಕೆಡಿವಿಜಿ4-ದಾವಣಗೆರೆಯಲ್ಲಿ ಸೋಮವಾರ ಜಿಲ್ಲಾ ವರದಿಗಾರರ ಕೂಟದ ಗೌರವಾಧ್ಯಕ್ಷ ಬಿ.ಎನ್.ಮಲ್ಲೇಶ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾ ವರದಿಗಾರರ ಕೂಟದಿಂದ 2024-25 ಹಾಗೂ 2025-26ನೇ ಸಾಲಿನ ಮಾಧ್ಯಮ ದಿನಾಚರಣೆ, ಮಾಧ್ಯಮ ಪ್ರಶಸ್ತಿ ಪ್ರದಾನ, ಹಿರಿಯ ಪತ್ರಕರ್ತರಿಗೆ ಜೀವಮಾನ ಸಾಧನೆ ಗೌರವ ಸನ್ಮಾನ, ಪದ್ಮಶ್ರೀ ಹಾಗೂ ವಿವಿಧ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ ಜು.31ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ.

- ಶ್ರೀಶೈಲದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶ್ರೀ ಸಾನಿಧ್ಯ, ಎಸ್ಸೆಸ್ಸೆಂ ಉದ್ಘಾಟನೆ: ಬಿ.ಎನ್.ಮಲ್ಲೇಶ್ ಮಾಹಿತಿ

- - -

- 2024-25 ಹಾಗೂ 2025-26ನೇ ಸಾಲಿನ ಮಾಧ್ಯಮ ದಿನಾಚರಣೆ, ಮಾಧ್ಯಮ ಪ್ರಶಸ್ತಿ ಪ್ರದಾನ

- ಹಿರಿಯ ಪತ್ರಕರ್ತರಿಗೆ ಜೀವಮಾನ ಸಾಧನೆ ಗೌರವ ಸನ್ಮಾನ

- ಪದ್ಮಶ್ರೀ, ವಿವಿಧ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲಾ ವರದಿಗಾರರ ಕೂಟದಿಂದ 2024-25 ಹಾಗೂ 2025-26ನೇ ಸಾಲಿನ ಮಾಧ್ಯಮ ದಿನಾಚರಣೆ, ಮಾಧ್ಯಮ ಪ್ರಶಸ್ತಿ ಪ್ರದಾನ, ಹಿರಿಯ ಪತ್ರಕರ್ತರಿಗೆ ಜೀವಮಾನ ಸಾಧನೆ ಗೌರವ ಸನ್ಮಾನ, ಪದ್ಮಶ್ರೀ ಹಾಗೂ ವಿವಿಧ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ ಜು.31ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೂಟದ ಗೌರವಾಧ್ಯಕ್ಷ ಬಿ.ಎನ್.ಮಲ್ಲೇಶ್, ಅಂದು ಬೆಳಗ್ಗೆ 11:30ಕ್ಕೆ ಶ್ರೀಶೈಲ ಜಗದ್ಗುರು ಪೀಠದ ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಕೂಟದ ಉಪಾಧ್ಯಕ್ಷರಾದ ಮಂಜುನಾಥ ಗೌರಕ್ಕಳವರ ಅಧ್ಯಕ್ಷತೆಯಲ್ಲಿ ಶಾಸಕ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮಾರಂಭ ಉದ್ಘಾಟಿಸುವರು ಎಂದರು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಸಮರ್ಥ ಎಂ.ಶಾಮನೂರು ಜೀವಮಾನ ಸಾಧಕರಿಗೆ ಗೌರವ ಸನ್ಮಾನ ನೆರವೇರಿಸುವರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಸಂಸ್ಥಾಪಕ ಡಾ.ಸುರೇಶ ಹನಗವಾಡಿ ಅವರಿಗೆ ಕೂಟದಿಂದ ಗೌರವಾರ್ಪಣೆ ನೆರವೇರಲಿದೆ. ಶಾಸಕರಾದ ಬಿ.ಪಿ. ಹರೀಶ, ಕೆ.ಎಸ್.ಬಸವಂತಪ್ಪ, ಬಸವರಾಜ ವಿ. ಶಿವಗಂಗಾ ಮಾಧ್ಯಮ ಪ್ರಶಸ್ತಿ ಪುರಸ್ಕೃತರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಡಾ. ಎಚ್.ಟಿ.ಶೇಖರ್, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಪಾಲಿಕೆ ಆಯುಕ್ತ ಡಾ.ಎನ್.ಮಹಾಂತೇಶ್, ದೂಡಾ ಆಯುಕ್ತೆ ರೇಣುಕಾ, ಕೂಟದ ಗೌರವಾಧ್ಯಕ್ಷ ಬಿ.ಎನ್. ಮಲ್ಲೇಶ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಏಕಬೋಟೆ, ವಿಜಯವಾಣಿ ಸ್ಥಾನಿಕ ಸಂಪಾದಕ ಎನ್.ಡಿ.ಶಾಂತಕುಮಾರ, ಮಲ್ನಾಡವಾಣಿ ಸಂಪಾದಕ ಕೆ. ಏಕಾಂತಪ್ಪ, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ, ಕೂಟದ ಉಪಾಧ್ಯಕ್ಷ ಎ.ಎಲ್. ತಾರಾನಾಥ ಪಾಲ್ಗೊಳ್ಳುವರು ಎಂದು ಹೇಳಿದರು.

ಪ್ರಶಸ್ತಿ ಪುರಸ್ಕೃತರ ವಿವರ:

2024-25ನೇ ಸಾಲಿನ ಮಾಧ್ಯಮ ಪ್ರಶಸ್ತಿಗೆ ಪ್ರಜಾವಾಣಿ ಸ್ಥಾನಿಕ ಸಂಪಾದಕ ಸಿದ್ದಯ್ಯ ಹಿರೇಮಠ, ವಿಜಯ ಕರ್ನಾಟಕ ಹಿರಿಯ ಉಪಸಂಪಾದಕ ಪ್ರಸನ್ನ ಜವಳಿ, ವಿಜಯವಾಣಿ ಹಿರಿಯ ಉಪ ಸಂಪಾದಕ ಹರ್ಷ ಪುರೋಹಿತ, ಪಬ್ಲಿಕ್ ವಾಯ್ಸ್ ಹಿರಿಯ ವರದಿಗಾರ ಎ.ಸಿ.ನಾಗರಾಜ, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಬಿ.ಜಿ.ಮಹದೇವ ಆಯ್ಕೆಯಾಗಿದ್ದಾರೆ. ಜೀವಮಾನ ಸಾಧನೆ ಗೌರವಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್ ಸಂಪಾದಕ ಕೆ.ಚಂದ್ರಣ್ಣ, ಹಿರಿಯ ವ್ಯಂಗ್ಯಚಿತ್ರಕಾರ, ಪತ್ರಕರ್ತ ಎಚ್.ಬಿ. ಮಂಜುನಾಥ, ಜನಮಿಡಿತ ಹಿರಿಯ ವರದಿಗಾರ ಆರ್.ಎಸ್. ತಿಪ್ಪೇಸ್ವಾಮಿ, ಸುಭಾಷಿತ ಪತ್ರಿಕೆ ಸಂಪಾದಕ ಡಾ. ಕೆ.ಜೈಮುನಿ, ಜಿಲ್ಲೆ ಸಮಾಚಾರ ಸಂಸ್ಥಾಪಕ ಸಂಪಾದಕ ವಿ.ಹನುಮಂತಪ್ಪ ಅವರನ್ನು ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

2025-26ನೇ ಸಾಲಿನ ಮಾಧ್ಯಮ ಪ್ರಶಸ್ತಿ:

ನಗರ ಮಿಡಿತ ಸಂಪಾದಕ ಜಿ.ಎಸ್. ವಸಂತಕುಮಾರ್, ಟಿವಿ 5 ವರದಿಗಾರ ಅಣ್ಣಪ್ಪ ಕುಂದುವಾಡ, ಹಿರಿಯ ಪತ್ರಿಕಾ ಛಾಯಾಗ್ರಹಕ ವಿಜಯ್ ಜಾಧವ್‌, ನಗರವಾಣಿ ವರದಿಗಾರ ಮಹೇಶ ಕಾಶೀಪುರ, ರಿಪಬ್ಲಿಕ್ ಕನ್ನಡ ಕ್ಯಾಮೆರಾಮ್ಯಾನ್ ಶಿವರಾಜ್ ಇಳಿಗೇರ್ ಅವರಿಗೆ 2025-26ನೇ ಸಾಲಿನ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಜೀವಮಾನ ಸಾಧನೆಗಾಗಿ ವಿಸ್ಮಯ ವಾಣಿ ಸಂಪಾದಕ ಡಾ. ಬಿ.ವಾಸುದೇವ, ವಾರ್ತಾ ವಿಹಾರ ಸಂಪಾದಕ ಸಿ.ಪಿ. ಸತೀಶಕುಮಾರ, ಜನಸ್ಪಂದನ ಸಂಪಾದಕ ಕೆ.ಉಮೇಶ ಕಾಡಪ್ಪ, ಜನಕ್ರಾಂತಿ ಸಂಪಾದಕ ಕೆ.ಆರ್. ಗಂಗರಾಜು ಅವರಿಗೆ ಗೌರವಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಪ್ರಜಾವಾಣಿಯ ಸಿದ್ದಯ್ಯ ಹಿರೇಮಠ, ದೂರದರ್ಶನದ ಎ.ಎಲ್. ತಾರಾನಾಥ, ಸುಭಾಷಿತದ ಡಾ. ಕೆ.ಜೈಮುನಿ, ವಿಜಯವಾಣಿಯ ರಮೇಶ್ ಜಹಾಗೀರದಾರ್, ವಿಜಯ ಕರ್ನಾಟಕದ ಯಳನಾಡು ಮಂಜುನಾಥ, ಹಿರಿಯ ಛಾಯಾಗ್ರಹಕ ವಿವೇಕ್ ಎಲ್.ಬದ್ದಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪುರಸ್ಕೃತರಾದ ಎಚ್.ಕೆ. ನಟರಾಜ್ ಮತ್ತು ವಿಠ್ಠಲ್ ಕ್ಯಾರವಾಡರನ್ನು ಸನ್ಮಾನಿಸಲಾಗುವುದು ಎಂದು ಬಿ.ಎನ್.ಮಲ್ಲೇಶ್ ಹೇಳಿದರು.

ಕೂಟದ ಅಧ್ಯಕ್ಷ ನಾಗರಾಜ ಎಸ್.ಬಡದಾಳ್, ಪ್ರಧಾನ ಕಾರ್ಯದರ್ಶಿ ಎಂ.ವೈ.ಸತೀಶ, ಗುರುಶಾಂತಪ್ಪ, ಉಪಾಧ್ಯಕ್ಷರಾದ ಮಂಜುನಾಥ ಗೌರಕ್ಕಳವರ್, ಮಲ್ಲಿಕಾರ್ಜುನ ಕಬ್ಬೂರು, ಸಿದ್ದಯ್ಯ ಹಿರೇಮಠ, ಆರ್.ಎಸ್.ತಿಪ್ಪೇಸ್ವಾಮಿ, ಪಿಆರ್‌ಓ ಲೋಕೇಶ, ಬಿ.ಸಿಕಂದರ್‌, ಸಂಜಯ್ ಕುಂದುವಾಡ, ಇತರರು ಇದ್ದರು.

- - -

-27ಕೆಡಿವಿಜಿ4: ದಾವಣಗೆರೆಯಲ್ಲಿ ಸೋಮವಾರ ಜಿಲ್ಲಾ ವರದಿಗಾರರ ಕೂಟದ ಗೌರವಾಧ್ಯಕ್ಷ ಬಿ.ಎನ್.ಮಲ್ಲೇಶ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

30 ವಿದ್ಯಾರ್ಥಿಗಳ ಸಾವಿಗೆ ಸಚಿವ ಶಾ ನೇರ ಹೊಣೆ
ನಿರಂತರ ಪರಿಶ್ರಮದಿಂದ ಸಾಧನೆ ಸಾಧ್ಯ: ಬಿ.ಸಿ.ಪಾಟೀಲ್